

ಬೆಂಗಳೂರು:
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಡಾ.ಪುರುಷೋತ್ತಮ ಬಿಳಿಮಲೆ ಅವರು ವಿಧಾನಸೌಧದಲ್ಲಿರುವ ಪ್ರಾಧಿಕಾರದ ಮುಖ್ಯ ಕಚೇರಿಯಲ್ಲಿ ಅಧಿಕಾರ ವಹಿಸಿಕೊಂಡಿದ್ದು, ಅಧಿಕೃತವಾಗಿ ಕಾರ್ಯ ಚಟುವಟಿಕೆ ಪ್ರಾರಂಭಿಸಿದ್ದಾರೆ.
ರಾಜ್ಯ ಸರ್ಕಾರವು ಮಾ.ರಂದು ಡಾ. ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಸರ್ಕಾರಿ ಆದೇಶ ಪ್ರಕಟಗೊಂಡ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರಿಂದ ಅವರು ಅಧಿಕಾರ ಸ್ವೀಕಾರ ಮಾಡಲು ಆಗಿರಲಿಲ್ಲ.
ಎಲ್ಲಾ ವಲಯಗಳಲ್ಲೂ ಕನ್ನಡ ಬಳಕೆ ಮತ್ತು ಅನುಷ್ಠಾನಕ್ಕಾಗಿ ಹಾಗೂ ಕನ್ನಡದ ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಪ್ರಾಧಿಕಾರ ನಿರಂತರವಾಗಿ ಶ್ರಮಿಸಲಿದೆ ಎಂದು ಅಧಿಕಾರ ಸ್ವೀಕರಿಸಿದ ಬಳಿಕ ಬಿಳಿಮಲೆ ಅವರು ಪ್ರಾಧಿಕಾರದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.