More

    ಕನ್ನಡ ನಾಡು, ನುಡಿಯ ರಕ್ಷಣೆ ಕನ್ನಡಿಗರ ಹೊಣೆ: ಡಾ. ನಿಷ್ಠಿ ರುದ್ರಪ್ಪ

    ಹೊಸಪೇಟೆ: ಕನ್ನಡ ನಾಡು ನುಡಿಯನ್ನು ಉಳಿಸಿ, ಬೆಳೆಸುವ ಗುರುತರವಾದ ಜವಾಬ್ದಾರಿ ಕನ್ನಡಿಗರ ಹೊಣೆಯಾಗಿದೆ ಎಂದು ಅಖಂಡ ಕಸಾಪ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ಅಭಿಪ್ರಾಯಪಟ್ಟರು.

    ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಕನ್ನಡ ಸಾಹಿತ್ಯ ಪರಿಷತ್ತು ಹೊಸಪೇಟೆ ತಾಲೂಕು ಘಟಕದಿಂದ ನಗರದ ಮಹಿಳಾ ಸಮಾಜ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ದಸರಾ ಕಥಾ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಮತ್ತು ಅಂಚೆ ಕುಂಚ ಕನ್ನಡ ಧ್ವಜ ಸ್ಪರ್ಧೆ ಬಹುಮಾನ ವಿತರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಕನ್ನಡ ನಾಡಿನ ಪ್ರಾತಿನಿಧಿಕ ಸಂಸ್ಥೆಯಾಗಿರುವ ಕನ್ನಡ ಸಾಹಿತ್ಯ ಪರಿಷತ್ತು ನಾಡು ನುಡಿ, ನೆಲ ಜಲ, ಕಲೆ ಸಾಹಿತ್ಯ ಸಂಸ್ಕೃತಿ ಸಂರಕ್ಷಣೆ ಮತ್ತು ಸಂವರ್ಧನೆಗಾಗಿ ನಿರಂತರವಾಗಿ ಶ್ರಮಿಸುತ್ತಿದೆ. ನಾಡಿನ ಪ್ರತಿಯೊಬ್ಬರೂ ನಾಡು ನುಡಿಗಾಗಿ ಪ್ರಾಮಾಣಿಕವಾಗಿ ದುಡಿಯಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮವಾಗಬೇಕು. ಮಾತೃ ಭಾಷಾಭಿಮಾನದಲ್ಲಿ ನೆರೆ ರಾಜ್ಯದ ಜನರು ನಮಗೆ ಮಾದರಿಯಾಗಬೇಕು ಎಂದು ಸಲಹೆ ನೀಡಿದರು.

    ಶಿಗ್ಗಾವಿ ತಾಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಂಶೋಧನಾಧಿಕಾರಿ ಡಾ.ಮಲ್ಲಿಕಾರ್ಜುನ ಬಿ.ಮಾನ್ಪಡೆ ಉಪನ್ಯಾಸ ನೀಡಿ, ಕನ್ನಡ ಭಾಷೆ ಕೇವಲ ಒಂದು ಸಂವಹನ ಮಾಧ್ಯಮವಲ್ಲ. ಕನ್ನಡ ನಮ್ಮ ಅಸ್ಮಿತೆಯಾಗಿದ್ದು, ನಮ್ಮ ಸಂಸ್ಕೃತಿ ಮತ್ತು ಪರಂಪರೆ ಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವಾಗಬೇಕು ಎಂದು ಅಭಿಪ್ರಾಯ ಪಟ್ಟರು.

    ಕಸಾಪ ತಾಲೂಕಾಧ್ಯಕ್ಷ ನಾಯಕರ ಹುಲುಗಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಜನ ಸಾಮಾನ್ಯರಿಗೆ ತಲುಪಿಸುವ ಕೆಲಸವನ್ನು ಕಸಾಪ ಅಚ್ಚುಕಟ್ಟಾಗಿ ನಿರ್ವಹಿಸುತ್ತಿದೆ. ಕನ್ನಡದ ಮನಸ್ಸುಗಳು ಒಂದಾಗಿ ಕನ್ನಡ ಸಾಹಿತ್ಯ ಪರಿಷತ್ತನ್ನು ಬಲ ಪಡಿಸಬೇಕು ಎಂದು ಮನವಿ ಮಾಡಿದರು.
    ಇದೇ ಸಂದರ್ಭದಲ್ಲಿ ದಸರ ಕಥಾ ಸ್ಪರ್ಧೆ ಮತ್ತು ಅಂಚೆ ಕುಂಚ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಸ್ಮರಣಿಕೆ ಮತ್ತು ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

    ಕನ್ನಡ ನಾಡು, ನುಡಿಯ ರಕ್ಷಣೆ ಕನ್ನಡಿಗರ ಹೊಣೆ: ಡಾ. ನಿಷ್ಠಿ ರುದ್ರಪ್ಪ
    ಹೊಸಪೇಟೆ ತಾಲೂಕು ಮಟ್ಟದ(ಎಲ್ ಕೆಜಿಯಿಂದ 4ನೇ ತರಗತಿ) ಅಂಚೆ- ಕುಂಚ ಕನ್ನಡ ಧ್ವಜ ಚಿತ್ರ ಸ್ಪರ್ಧೆಯ ವಿಜೇತರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.

    ಶಾಲೆಯ ಆಡಳಿತಾಧಿಕಾರಿ ಗುರು ರಾಘವೇಂದ್ರಾಚಾರ್ ಎಂ., ವಿಜಯನಗರ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಕಟಗಿ ಜಂಬಯ್ಯ ನಾಯಕ, ಸಮಾಜ ಸೇವಕ ಗೋವಿಂದ ಕುಲಕರ್ಣಿ, ಕರುನಾಡಕಲಿಗಳ ಕ್ರಿಯಾಶೀಲ ಸಂಘದ ಉಪಾಧ್ಯಕ್ಷ ಗುಜ್ಜಲ್ ಗಣೇಶ, ಕಾರಿಗನೂರಿನ ಸರ್ಕಾರಿ ಶಾಲೆಯ ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಎಸ್. ಯರಿಸ್ವಾಮಿ, ದಸರಾ ಕಥಾ ಸ್ಪರ್ಧೆಯ ತೀರ್ಪುಗಾರ ಡಾ. ಉತ್ತಂಗಿ ವೀರೇಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts