More

    ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ, ಹಲವು ಗಣ್ಯರಿಗೆ ಕಲಾ ಸಿರಿ ಪ್ರಶಸ್ತಿ ಪ್ರದಾನ..

    ಬೆಂಗಳೂರು: ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಇಂದು ಶ್ರೀ ಅಮ್ಮನ ಮಡಿಲು ಸಾಮಾಜಿಕ ಸಾಂಸ್ಕೃತಿಕ ಕಲಾ ಟ್ರಸ್ಟ್​​ನ ಮೂರನೇ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆ ಸಮಾರಂಭ ನಡೆಯಿತು.

    ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದ್ದು, ಅಮ್ಮನ ಮಡಿಲು ಸಂಸ್ಥೆ ಅಧ್ಯಕ್ಷೆ ವರಲಕ್ಷ್ಮೀ, ಮುನಿರತ್ನ, ಶಾಸಕರಾದ ಕೆ.ವೈ.ನಂಜೇಗೌಡ, ಬಿ.ಶಿವಣ್ಣ ಹಾಗೂ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಕರ್ನಾಟಕ ರಕ್ಷಣಾ ವೇದಿಕೆ (ವೀರ ಘರ್ಜನೆ) ಸಂಸ್ಥಾಪಕ ಅಧ್ಯಕ್ಷ ಮಂಜುನಾಥ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ನೀಲಮ್ಮ, ಜಂಟಿ ನಿರ್ದೇಶಕರಾದ ಅಶೋಕ ಛಲವಾದಿ, ಬನಶಂಕರಿ ಅಂಗಡಿ ಪತ್ರಕರ್ತರಾದ ಯಲಬುರ್ತಿ ಚಂದ್ರಶೇಖರ್, ಮಹೇಂದ್ರ ಮುನ್ನೋತ ಸಮಾಜ ಸೇವಕರು ಸೇರಿ ಹಲವು ಗಣ್ಯರು ಹಾಗೂ ಅಮ್ಮನ ಮಡಿಲು ಸಾಮಾಜಿಕ ಸಾಂಸ್ಕೃತಿಕ ಕಲಾ ಟ್ರಸ್ಟ್ ಪದಾಧಿಕಾರಿಗಳು ಭಾಗವಹಿಸಿದ್ದರು.

    ನಾಡಿನ ನೆಲ ಜಲ ಭಾಷೆ ಹಾಗೂ ಸಾಹಿತ್ಯವನ್ನು ನಾವೆಲ್ಲರೂ ಸೇರಿ ಎತ್ತಿ ಹಿಡಿಯಬೇಕು. ಇಂದಿನ ಜಾಗತಿಕ ಯುಗದಲ್ಲಿ ನಾಟಕ ಜಾನಪದ ಸೇರಿದಂತೆ ನಮ್ಮ ಹಲವು ನಾಡಿನ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಬೇಕು. ಅಮ್ಮನ ಮಡಿಲು ಸಾಮಾಜಿಕ ಸಾಂಸ್ಕೃತಿಕ ಕಲಾ ಟ್ರಸ್ಟ್ ಒಳ್ಳೆಯ ಕೆಲಸ ಮಾಡುತ್ತಿದೆ ಇವರ ಕಾರ್ಯ ಶ್ಲಾಘನೀಯ ಎಂದು ರಾಮಲಿಂಗಾರೆಡ್ಡಿ ಅವರು ಹೇಳಿದರು.

    ಪತ್ರಕರ್ತ ಯಲಬುರ್ತಿ ಚಂದ್ರಶೇಖರ್, ಯುನಾನಿ ವೈದ್ಯೆ ಡಾ. ನೈಲಾ, ಎಸ್. ವಿಮಲಾ, ಪ್ರೇಮಾ ರಾಥೋಡ್, ಆಡುರ ಎಂ. ಗೋಪಾಲ್ ಸೇರಿದಂತೆ ಹಲವರಿಗೆ ರಾಜ್ಯಮಟ್ಟದ ಕಲಾ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಹಾಗೆಯೇ ರಂಗಭೂಮಿಯ ಹಿರಿಯ ಕಲಾವಿದರಿಗೆ ಸನ್ಮಾನ ಮಾಡಿ ಗೌರವಿಸಲಾಯಿತು.

    ಸಂಸ್ಥೆಯ ಮೂರನೇ ವರ್ಷದ ವಾರ್ಷಿಕೋತ್ಸವ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿಶೇಷವಾಗಿ ಕುರುಕ್ಷೇತ್ರ ಎಂಬ ಪೌರಾಣಿಕ ಐತಿಹಾಸಿಕ ನಾಟಕ ಪ್ರಸ್ತುತ ಪಡಿಸಲಾಯಿತು. ಕನ್ನಡ ನಾಡಿನ ವೈಭವ ಸಾರುವ ಕನ್ನಡದ ನೃತ್ಯರೂಪಕವನ್ನು ಪ್ರದರ್ಶಿಸಲಾಯಿತು.

    ‘ದೈವ ದೇವರೆಂದರೆ ತಮಾಷೆಯಾ?’; ‘ಕಾಂತಾರ’ದ ‘ವರಾಹ ರೂಪಂ’ ಗೀತೆ ರಚಿಸಿದ ಸಾಹಿತಿ ಹೀಗಂದಿದ್ದೇಕೆ?

    ಬೆಲ್ಜಿಯಂ ಬೆಡಗಿ ಜತೆ ಹಂಪಿ ಆಟೋಚಾಲಕನ ಮದ್ವೆ; 3 ವರ್ಷದ ಹಿಂದೆ ಗೈಡ್​ಗೆ ಫಿದಾ ಆಗಿದ್ದ ವಿದೇಶಿ ಯುವತಿ, ಇಂದು ಲಗ್ನ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts