ಸಂತ ಪ್ರಾನ್ಸಿಸ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ; ತಮಟೆ ಕಲಾವಿದನಿಗೆ ಸನ್ಮಾನ

francis
Published on

ಬೆಂಗಳೂರು: ಕೋರಮಂಗಲದಲ್ಲಿರುವ ಸಂತ ಫ್ರಾನ್ಸಿಸ್ ಪದವಿ ಕಾಲೇಜಿನಲ್ಲಿ ಇತ್ತೀಚೆಗೆ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾಲೇಜಿನ ನಿರ್ದೇಶಕರಾದ ರೆವೆರೆಂಡ್ ಬ್ರದರ್ ಪೀಟರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಪದ್ಮಶ್ರೀ ಹಾಗೂ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತಮಟೆ ವಾದಕ ಡಾ. ನಾಡೋಜ ಪಿಂಡಿ ಪಾಪನಹಳ್ಳಿ ಮುನಿವೆಂಕಟಪ್ಪ ವಿಶೇಷ ತಮಟೆ ಪ್ರದರ್ಶನವನ್ನು ನೀಡಿ ನೆರೆದವರನ್ನು ರಂಜಿಸಿದರು.

ಸಮಾರಂಭದಲ್ಲಿ ಕಾರ್ಮಿಕ ಇಲಾಖೆಯ ಜಂಟಿ ಆಯುಕ್ತ ಸಂಗಮೇಶ ಉಪಾಸೆ ಮತ್ತಿತರ ಕ್ಷೇತ್ರದ ಗಣ್ಯರು ಪಾಲ್ಗೊಂಡಿದ್ದರು.

ಕಾಲೇಜಿನ ವಿದ್ಯಾರ್ಥಿಗಳು ನಾಟಕ, ನೃತ್ಯ, ಗಾಯನ ಇತ್ಯಾದಿ ಮನೋರಂಜನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಪ್ರಾಂಶುಪಾಲರಾದ ಡಾ. ಆರ್. ಎನ್.ಸುಬ್ಬರಾವ್, ಕನ್ನಡ ವಿಭಾಗದ ಸಹಪ್ರಾಧ್ಯಾಪಕರಾದ ಡಾ. ಜಗದೀಶ್ ಬಾಬು ಬಿ.ವಿ, ಉಪ ಪ್ರಾಂಶುಪಾಲರಾದ ಪಿ.ಕಾರ್ತಿಕ್, ಡಾ. ಸಂತೋಷ್ ಕುಮಾರ್, ಸಾಂಸ್ಕೃತಿಕ ಸಮಿತಿಯ ಶಾಲಿನ್ ಸ್ಯಾಮ್ಯುಯಲ್ ಹಾಗೂ ಕಾಲೇಜಿನ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿದ್ದರು.

ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ತಮಟೆ ಕಲಾವಿದ ನಾಡೋಜ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪನವರನ್ನು ಸನ್ಮಾನಿಸಲಾಯಿತು. ಕಾಲೇಜಿನ ಸಿಬ್ಬಂದಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net