16 C
Bangalore
Thursday, December 12, 2019

ರಾಜ್ಯೋತ್ಸವ ಪ್ರಶಸ್ತಿಗೆ ಗ್ರಹಣ

Latest News

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ಪೊಲೀಸರ ಹಸ್ತಕ್ಷೇಪಕ್ಕೆ ಕೋರ್ಟ್ ಕಿಡಿ

ಬೆಂಗಳೂರು: ಸ್ಥಿರಾಸ್ತಿ ವ್ಯಾಜ್ಯವೊಂದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸಲು ಖುದ್ದು ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚಿಸಿ ವಕೀಲರೊಬ್ಬರಿಗೆ ನೋಟಿಸ್ ನೀಡಿದ ಪ್ರಕರಣದಲ್ಲಿ ವಿಜಯನಗರ ಠಾಣೆ ಇನ್​ಸ್ಪೆಕ್ಟರ್...

ಗಣಿತಶಾಸ್ತ್ರಜ್ಞ, ತಂತ್ರಜ್ಞಾನ ನಿಪುಣ, ಇತಿಹಾಸ ಸಂಶೋಧಕ

ಎರಡು ಶತಮಾನಗಳ ಕಾಲ ಭಾರತದಲ್ಲಿ ಆಧಿಕಾರಿಕವಾಗಿ ತಳವೂರಿದ್ದ ಬ್ರಿಟಿಷರು ಭೌಗೋಳಿಕವಾಗಿ ಅಲ್ಲದೆ ಬೌದ್ಧಿಕವಾಗಿ- ಮಾನಸಿಕವಾಗಿಯೂ ಭಾರತೀಯರನ್ನು ದಾಸ್ಯಕ್ಕೊಳಪಡಿಸಲು ಪ್ರಯತ್ನಿಸಿದರು; ತಮ್ಮ ಇತಿಹಾಸ-ಸಂಸ್ಕೃತಿಗಳನ್ನು ಕುರಿತು ಭಾರತೀಯರಲ್ಲಿ ಕೀಳರಿಮೆ...

ಡಿಸೆಂಬರ್ 14 ರಂದು ಕರ್ಕಿ ಕಾವ್ಯ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ಡಾ. ಡಿ.ಎಸ್. ರ್ಕ ಸಾಹಿತ್ಯ ವೇದಿಕೆಯಿಂದ ಜಗದೀಶ ಶೆಟ್ಟರ್ ದತ್ತಿ ಆಶ್ರಯದಲ್ಲಿ ಕೊಡಮಾಡುವ ಪ್ರಸಕ್ತ ಸಾಲಿನ ಡಾ. ಡಿ.ಎಸ್. ರ್ಕ ಕಾವ್ಯ ಪ್ರಶಸ್ತಿಯು...

ಬೆಂಗಳೂರು: ಕಳೆದ ನಾಲ್ಕೈದು ವರ್ಷಗಳಿಂದ ಘನತೆ ಹೆಚ್ಚಿಸಿಕೊಳ್ಳುವತ್ತ ಸಾಗಿದ್ದ ರಾಜ್ಯೋತ್ಸವ ಪ್ರಶಸ್ತಿಯ ಗೌರವವನ್ನು ನಿರೀಕ್ಷೆಯಂತೆಯೇ ಮೈತ್ರಿ ಸರ್ಕಾರದ ರಾಜಕಾರಣ, ನಿರ್ಲಕ್ಷ್ಯ ಬಲಿ ಪಡೆಯಲು ಮುಂದಾಗಿವೆ. ರಾಜಕೀಯ ಲಾಬಿ, ಮಾರ್ಗಸೂಚಿ ಪಾಲಿಸದೆ ಬೇಕಾಬಿಟ್ಟಿ ಪ್ರಕ್ರಿಯೆ ನಡೆಸಿದ್ದರಿಂದ ಪಟ್ಟಿ ಅಂತಿಮಗೊಳಿಸಲು ವಿಫಲವಾದ ಸರ್ಕಾರ ಕೊನೆಗೆ ಉಪಚುನಾವಣೆಯ ನೀತಿಸಂಹಿತೆ ಮೇಲೆ ಗೂಬೆ ಕೂರಿಸಿ ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಪ್ರಶಸ್ತಿ ನೀಡಿಕೆ ಪ್ರಕ್ರಿಯೆಯನ್ನೇ ಮುಂದೂಡಿದೆ. ಪ್ರಶಸ್ತಿ ನೀಡಲು ಚುನಾವಣಾ ಆಯೋಗವೂ ಒಪ್ಪಿಗೆ ನೀಡಿತ್ತು ಎಂಬ ವಿಚಾರ ಬೆಳಕಿಗೆ ಬಂದಿರುವುದರಿಂದ ಕನ್ನಡ ಮತ್ತು ಸಂಸ್ಕೃತಿ ಸಚಿವರು ಸೇರಿ ಇದರ ಹೊಣೆ ಹೊತ್ತವರ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.

ಮೂರೇ ನಿಮಿಷಕ್ಕೆ ಮುಕ್ತಾಯ: ಕನ್ನಡ ಮತ್ತು ಸಂಸ್ಕೃತಿ ಸಚಿವ ಜಯಮಾಲಾ ಅಧ್ಯಕ್ಷತೆಯ ಸಲಹಾ ಸಮಿತಿ ಮೂರ್ನಾಲ್ಕು ದಿನ ನಗರ ಹೊರವಲಯದ ಕಲಾಗ್ರಾಮದಲ್ಲಿ ಸಭೆ ನಡೆಸಿ ಮುಚ್ಚಿದ ಲಕೋಟೆಯಲ್ಲಿ ಹೆಸರುಗಳ ಪಟ್ಟಿಯನ್ನು ಅಂತಿಮಗೊಳಿಸಿತ್ತು.

ಸಿಎಂ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯ ಉನ್ನತ ಮಟ್ಟದ ಸಭೆ ನಿಗದಿಯಾದ್ದರಿಂದ ಸಲಹಾ ಸಮಿತಿ ಸದಸ್ಯರ ಜತೆಗೆ ಉನ್ನತ ಮಟ್ಟದ ಸಮಿತಿ ಸದಸ್ಯರೂ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೂ ಕಾದು ಕುಳಿತಿದ್ದರು. ಜೆಪಿ ನಗರದ ನಿವಾಸದಲ್ಲೇ ಇದ್ದ ಸಿಎಂ ಕುಮಾರಸ್ವಾಮಿ ಸಭೆಗೆ ಆಗಮಿಸಿದರಾದರೂ ಮೂರೇ ನಿಮಿಷಕ್ಕೆ ಸಭೆ ಮುಗಿಸಿದರು. ನೀತಿ ಸಂಹಿತೆ ಕಾರಣಕ್ಕೆ ಪ್ರಶಸ್ತಿ ಘೋಷಣೆ ಸಾಧ್ಯವಿಲ್ಲ. ಸಭೆ ರದ್ದಾಗಿದೆ ಎಂದು ಭಾವಿಸಿ ಮನೆಯಲ್ಲಿದ್ದೆ. ನಿಮ್ಮನ್ನೆಲ್ಲ ಕಾಯಿಸಿದ್ದಕ್ಕೆ ಕ್ಷಮಿಸಿ ಎನ್ನುತ್ತ ಸಭೆ ಮುಗಿಸಿದರು ಎಂದು ಮೂಲಗಳು ತಿಳಿಸಿವೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿಎಂ ಕಚೇರಿ, ರಾಜ್ಯದಲ್ಲಿ ಉಪಚುನಾವಣೆ ನಡೆಯು ತ್ತಿರುವ ಹಿನ್ನೆಲೆಯಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮುಂದೂಡಲಾಗಿದೆ. ನೀತಿಸಂಹಿತೆ ಅವಧಿ ಮುಗಿದ ನಂತರ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಿ ಆಯ್ಕೆಯಾದ ಎಲ್ಲರಿಗೂ ಪ್ರಶಸ್ತಿ ಪ್ರದಾನ ಮಾಡುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಯಿತು ಎಂದಿದೆ.

ಒಪ್ಪಿಗೆ ನೀಡಿದ್ದ ಆಯೋಗ

ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪ್ರಶಸ್ತಿ ಘೋಷಣೆ ಸಾಧ್ಯವಿಲ್ಲ ಎಂದು ಸರ್ಕಾರ ಹೇಳುತ್ತಿದೆಯಾದರೂ ಚುನಾವಣಾ ಆಯೋಗದ ಮಾತೇ ಬೇರೆ. ರಾಜ್ಯೋತ್ಸವ ಪ್ರಶಸ್ತಿ ಕುರಿತು ಅ.16ಕ್ಕೇ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮುಖ್ಯ ಕಾರ್ಯದರ್ಶಿ ಕಚೇರಿಗೆ ಈ ಕುರಿತು ಸ್ಪಷ್ಟನೆ ಕೋರಿ ಪತ್ರ ರವಾನೆಯಾಗಿತ್ತು. ಪತ್ರವನ್ನು ಚುನಾವಣೆ ಆಯೋಗಕ್ಕೆ ಕಳಿಸದ ಸರ್ಕಾರ, ಮೌಖಿಕವಾಗಿ ಅಭಿಪ್ರಾಯ ಕೇಳಿತ್ತು. ಈ ಕುರಿತು ಮಾಹಿತಿ ನೀಡಿರುವ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್, ರಾಜ್ಯ ಸರ್ಕಾರದಿಂದ ಯಾವುದೇ ಪತ್ರ ಬಂದಿಲ್ಲ. ಆದರೆ ಮೌಖಿಕವಾಗಿ ಈ ಕುರಿತು ಕೇಳಿದ್ದರು. ರಾಜಕೀಯ ವ್ಯಕ್ತಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡದಂತೆ, ರಾಜಕೀಯ ಒತ್ತಡಗಳಿಲ್ಲದಂತೆ ಪ್ರಶಸ್ತಿ ಸಮಾರಂಭ ನಡೆಸಲು ಯಾವುದೇ ಅಭ್ಯಂತರವಿಲ್ಲ ಎಂದು ಸರ್ಕಾರಕ್ಕೆ ತಿಳಿಸಲಾಗಿತ್ತು ಎಂದಿದ್ದಾರೆ.

ಸಚಿವದ್ವಯರ ಒತ್ತಡತಂತ್ರ

ರಾಜ್ಯೋತ್ಸವ ಪಟ್ಟಿಯಲ್ಲಿ ತಮಗಿಷ್ಟವಾದವರ ಹೆಸರನ್ನು ಸೇರಿಸಲೇಬೇಕು ಎಂದು ಸರ್ಕಾರದಲ್ಲಿರುವ ಇಬ್ಬರು ಪ್ರಭಾವಿ ಸಚಿವರು ಹೇರುತ್ತಿರುವ ಒತ್ತಡವೂ ಒಟ್ಟಾರೆ ಪ್ರಕ್ರಿಯೆ ವಿಳಂಬ ಹಾಗೂ ಗೋಜಲಾಗಲು ಕಾರಣ ಎನ್ನಲಾಗಿದೆ. ಒಬ್ಬ ಜೆಡಿಎಸ್ ಹಾಗೂ ಮತ್ತೊಬ್ಬ ಕಾಂಗ್ರೆಸ್ ಸಚಿವರು ತಾವು ಸೂಚಿಸಿದ ಹೆಸರುಗಳು ಇರಲೇಬೇಕು ಎಂದು ಪಟ್ಟು ಹಿಡಿದಿದ್ದಾರೆ. ಒಬ್ಬರು ನೇರವಾಗಿ ಸಿಎಂ ಮೇಲೆ, ಮತ್ತೊಬ್ಬರು ಕನ್ನಡ ಮತ್ತು ಸಂಸ್ಕೃತಿ ಸಚಿವೆ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದೇ ವೇಳೆ ಸಚಿವೆ ಜಯಮಾಲಾ ಸಹ ಇಡೀ ಪ್ರಶಸ್ತಿ ಆಯ್ಕೆ ಪ್ರಕ್ರಿಯೆಯಲ್ಲಿ ಪೂರ್ಣ ಭಾಗಿಯಾಗಿಲ್ಲ. ಕಲಾಗ್ರಾಮದಲ್ಲಿ ನಡೆದ ಸಭೆಗಳಲ್ಲಿ ಭಾಗವಹಿಸದೆ ಚುನಾವಣಾ ಪ್ರಚಾರದಲ್ಲಿದ್ದರೂ ಸಚಿವರ ಕಾರು ಮಾತ್ರ ಕಲಾಗ್ರಾಮದಲ್ಲಿ ನಿಂತಿರುತ್ತಿತ್ತು. ಅನರ್ಹರಿಗೆ ಪ್ರಶಸ್ತಿ ನೀಡಿದ ಅನೇಕ ಉದಾಹರಣೆಗಳಿದ್ದಾಗ್ಯೂ ಇಲ್ಲಿಯವರೆಗೆ ಪ್ರಶಸ್ತಿ ನೀಡಿಕೆಯನ್ನೇ ಮುಂದೂಡಿದ ಉದಾಹರಣೆಯಿರಲಿಲ್ಲ.

ಮಾರ್ಗಸೂಚಿ ಪಾಲಿಸಿಲ್ಲ

ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ಗೆ ನೀಡಿರುವ ಮಾರ್ಗಸೂಚಿಯನ್ನೂ ಸರ್ಕಾರ ಪಾಲಿಸಿಲ್ಲ. ಸೆ.1-30ರವರೆಗೆ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಸ್ವೀಕಾರ, ಅ.15ರೊಳಗೆ 1:2 ಅನುಪಾತದಲ್ಲಿ ಸಲಹಾ ಸಮಿತಿ ಪಟ್ಟಿ ಸಿದ್ಧಪಡಿಸಿ ಮುಖ್ಯಮಂತ್ರಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಕಳುಹಿಸಬೇಕು. ಸೆ.25ರೊಳಗೆ ಸಿಎಂ ಸಮಿತಿ ಪಟ್ಟಿ ಅಂತಿಮಗೊಳಿಸಬೇಕಿತ್ತು. ವಿಪರ್ಯಾಸವೆಂದರೆ ಮೊದಲ ಸಲಹಾ ಸಮಿತಿ ಸಭೆ ನಡೆದಿರುವುದೇ ಸೆ.24ರಂದು.

 

ಪಾರದರ್ಶಕವಾಗಿ ಹೆಸರುಗಳ ಕುರಿತು ರ್ಚಚಿಸಿ ಪಟ್ಟಿ ತಯಾರಿಸಲಾಗಿದೆ. ನ.8ರ ನಂತರ ಹೆಸರುಗಳನ್ನು ಘೋಷಿಸಿ ಸಮಾರಂಭ ನಡೆಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

| ಜಯಮಾಲಾ, ಕನ್ನಡ ಮತ್ತು ಸಂಸ್ಕೃತಿ ಸಚಿವೆ

 

ಸಿಎಂ ಕುಮಾರಸ್ವಾಮಿ ಸಭೆಗೆ ಆಗಮಿಸದ ಹಿನ್ನಲೆಯಲ್ಲಿ ವಾಪಸಾದೆ. ನೀತಿ ಸಂಹಿತೆ ಇರುವುದರಿಂದ ಪ್ರಶಸ್ತಿ ಘೊಷಣೆ ಸಾಧ್ಯವೋ ಇಲ್ಲವೋ ಎನ್ನುವ ಬಗ್ಗೆ ಮಾಹಿತಿಯಿಲ್ಲ.

| ಮನು ಬಳಿಗಾರ್, ಕಸಾಪ ಅಧ್ಯಕ್ಷ

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...