More

    ನಿರಂತರ ಅಧ್ಯಯನಿಂದ ಉನ್ನತ ಹುದ್ದೆ ಲಭ್ಯ

    ಮದ್ದೂರು: ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉನ್ನತ ಹುದ್ದೆ ಅಲಂಕರಿಸಿದರೆ ನಮ್ಮ ದೇಶ ಉನ್ನತ ಮಟ್ಟಕ್ಕೆ ತಲುಪುತ್ತದೆ. ಇಂದಿನ ಮಕ್ಕಳೇ ಮುಂದಿನ ಭವಿಷ್ಯ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

    ತಾಲೂಕಿನ ಕೊಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಾಂಸ್ಕೃತಿಕ, ಕ್ರೀಡೆ, ರಾಷ್ಟ್ರೀಯ ಸೇವಾ ಯೋಜನೆ, ರೆಡ್ ಕ್ರಾಸ್, ರೋವರ್ ಮತ್ತು ರೇಂಜರ್ ಚಟುವಟಿಕೆ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿದ್ಯಾರ್ಥಿಗಳು ಸದಾ ಅಧ್ಯಯನಶೀಲರಾಗಿರಬೇಕು. ಆಗ ಮಾತ್ರ ಉನ್ನತ ಸ್ಥಾನ ಪಡೆಯಲು ಸಾಧ್ಯ ಎಂದರು.

    ಗ್ರಾಮೀಣ ಭಾಗದ ವಿದ್ಯಾರ್ಥಿಗಳು ತುಂಬ ಪರಿಶ್ರಮ ಪಟ್ಟು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಉನ್ನತ ಶಿಕ್ಷಣ ಪಡೆಯಲು ಮನೆಯ ಆರ್ಥಿಕ ಪರಿಸ್ಥಿತಿ ಹಾಗೂ ಇನ್ನಿತರ ಕಾರಣಗಳು ಅಡ್ಡಿ ಬರುತ್ತಿವೆ. ಸರ್ಕಾರ ಉನ್ನತ ವಿದ್ಯಾಭ್ಯಾಸಕ್ಕಾಗಿ ಹಲವಾರು ಯೋಜನೆ ಜಾರಿಗೆ ತಂದಿದ್ದು, ಇದನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

    ಕಾರ್ಯಕ್ರಮಕ್ಕೂ ಮುನ್ನ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಪಟ್ಟಣದ ಸಂತೆ ಮೈದಾನ ಆವರಣದಿಂದ ಪೂರ್ಣಕುಂಭ ಸಮೇತ ಎತ್ತಿನ ಗಾಡಿ ಮೆರವಣಿಗೆ ಮೂಲಕ ಕಾಲೇಜಿಗೆ ಕರೆತರಲಾಯಿತು. ಸರ್ಕಾರಿ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಎಂ.ವೈ. ಡಾ.ಶಿವರಾಮು, ನಿವೃತ್ತ ಇಂಜಿನಿಯರ್ ಕೆ.ಟಿ.ಜಗದೀಶ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಅಣ್ಣಯ್ಯ ತೈಲೂರು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಸಿ.ಜೋಗಿಗೌಡ, ನಾಗಮಂಗಲ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ದಿವಾಕರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts