More

    ರಾಣೆಬೆನ್ನೂರಿನ ಕನ್ನಡ ಹೋರಾಟಗಾರರಿಗೆ ‘ರಾಣೆಬೆನ್ನೂರ ರತ್ನ’ ಪ್ರಶಸ್ತಿ: ಅರುಣಕುಮಾರ ಪೂಜಾರ ಘೋಷಣೆ

    ರಾಣೆಬೆನ್ನೂರ: ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ವಿತರಣೆ ಮಾಡುತ್ತಿರುವ ಮಾದರಿಯಲ್ಲಿಯೆ ರಾಣೆಬೆನ್ನೂರಿನಲ್ಲಿರುವ ಕನ್ನಡಕ್ಕಾಗಿ ಹೋರಾಟ ಮಾಡಿದವರು ಹಾಗೂ ಕನ್ನಡಕ್ಕಾಗಿ ದುಡಿಯುತ್ತಿರುವವರನ್ನು ಗುರುತಿಸಿ ಅವರಿಗೆ ರಾಣೆಬೆನ್ನೂರ ರತ್ನ ಪ್ರಶಸ್ತಿ ವಿತರಣೆ ಮಾಡಲಾಗುವುದು ಎಂದು ಶಾಸಕ ಅರುಣಕುಮಾರ ಪೂಜಾರ ಘೋಷಿಸಿದರು.

    ತಾಲೂಕು ಆಡಳಿತ, ತಾಪಂ, ನಗರಸಭೆ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ವತಿಯಿಂದ ಇಲ್ಲಿಯ ನಗರಸಭೆಯ ಸ್ಮಾರಕ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

    ಉತ್ತರ ಕರ್ನಾಟಕ ಹೆಬ್ಬಾಗಿಲು ಎಂದು ಕರೆಯಿಸಿಕೊಳ್ಳುವ ರಾಣೆಬೆನ್ನೂರ ಅನ್ನು ಪ್ರವೇಶಿಸುವ ರಾಷ್ಟ್ರೀಯ ಹೆದ್ದಾರಿ ಬಳಿ ಬೃಹತ್ ಮಹಾದ್ವಾರ ನಿರ್ಮಿಸಿ ಅಲ್ಲಿ ರಾಣಿ ಚೆನ್ನಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುವುದು. ಇಂದಿನ ಎಲ್ಲರೂ ಕನ್ನಡದಲ್ಲಿಯೆ ಸಹಿ ಮಾಡುವ ಕುರಿತು ಸರ್ಕಾರ ಸೂಚಿಸಿದೆ. ನಾನು ಕೂಡ ಇಂದು ಕನ್ನಡದಲ್ಲಿ ಸಹಿ ಮಾಡಿದ್ದೇನೆ. ಶಿಕ್ಷಕರು ಸೇರಿ ಪ್ರತಿಯೊಬ್ಬರೂ ಕನ್ನಡದಲ್ಲೇ ಸಹಿ ಮಾಡಲು ಮುಂದಾಗುವ ಮೂಲಕ ಕನ್ನಡ ಉಳಿಸಿ, ಬೆಳೆಸಬೇಕು ಎಂದರು.

    ರಾಮಕೃಷ್ಣ ಆಶ್ರಮದ ಪ್ರಕಾಶಾನಂದ ಮಹಾರಾಜ್ ಸಾನ್ನಿಧ್ಯ ವಹಿಸಿದ್ದರು. ನಗರಸಭೆ ಅಧ್ಯಕ್ಷೆ ರೂಪಾ ಚಿನ್ನಿಕಟ್ಟಿ ಅಧ್ಯಕ್ಷತೆ ವಹಿಸಿದ್ದರು. ಹಲವರು ಸ್ವಯಂ ಪ್ರೇರಣೆಯಿಂದ ರಕ್ತದಾನ ಮಾಡಿದರು.

    ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಶಿವಕುಮಾರ ನರಸಗೊಂಡರ, ಮಾಜಿ ಅಧ್ಯಕ್ಷ ಚೋಳಪ್ಪ ಕಸವಾಳ, ಎಪಿಎಂಸಿ ಮಾಜಿ ಸದಸ್ಯ ಬಸವರಾಜ ಹುಲ್ಲತ್ತಿ, ನಗರಸಭೆ ಉಪಾಧ್ಯಕ್ಷೆ ಪ್ರಭಾವತಿ ತಿಳವಳ್ಳಿ, ಸ್ಥಾಯಿ ಸಮಿತಿ ಅಧ್ಯಕ್ಷ ಸಿದ್ದಪ್ಪ ಬಾಗಲರ, ಸದಸ್ಯರಾದ ಮಲ್ಲಣ್ಣ ಅಂಗಡಿ, ನಿಂಗರಾಜ ಕೋಡಿಹಳ್ಳಿ, ಪ್ರಕಾಶ ಪೂಜಾರ, ಕೆಎಂಪಿ ಮಣಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts