More

    ನುಡಿ ಹಬ್ಬ| 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿದ್ಧತೆ

    ಬೆಂಗಳೂರು: ಕಲಬುರಗಿಯಲ್ಲಿ ಫೆ.5ರಿಂದ 7ರವರೆಗೆ ನಡೆಯಲಿರುವ ‘85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ಭರದ ಸಿದ್ಧತೆ ನಡೆಯುತ್ತಿದ್ದು, ರಾಜ್ಯ ಸರ್ಕಾರ 10 ಕೋಟಿ ರೂ. ಮಂಜೂರು ಮಾಡಿದೆ ಎಂದು ಕಸಾಪ ಅಧ್ಯಕ್ಷ ಡಾ. ಮನು ಬಳಿಗಾರ್ ಹೇಳಿದರು.

    ಸಮ್ಮೇಳನಕ್ಕೆ 14 ಕೋಟಿ ರೂ. ಅಂದಾಜು ವೆಚ್ಚ ಆಗಲಿದೆ. ಸೂಕ್ತ ಅನುದಾನ ನೀಡುವಂತೆ ಕೋರಿ ಜಿಲ್ಲಾಡಳಿತ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಸರ್ಕಾರ 10 ಕೋಟಿ ರೂ. ಮಂಜೂರು ಮಾಡಿದೆ. ಉಳಿದಂತೆ ಸಮ್ಮೇಳನದ ಯಶಸ್ಸಿಗೆ ದೇಣಿಗೆ ನೀಡಲು ದಾನಿಗಳು ಮುಂದೆ ಬಂದಿದ್ದಾರೆ. ನಂತರ ಉಳಿದ ಹಣ ಬಿಡುಗಡೆ ಮಾಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

    ಈಗಾಗಲೇ 10,835 ಪ್ರತಿನಿಧಿಗಳು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಆಸ್ಟ್ರೇಲಿಯಾ, ಬಹರೈನ್ ಹಾಗೂ ಕತಾರ್ ದೇಶದ ಕನ್ನಡ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಅತಿಥಿಗಳಿಗೆ ‘ಎ’ ಶ್ರೇಣಿಯ 174 ಕೊಠಡಿ, ‘ಬಿ’ ಶ್ರೇಣಿಯ 184 ಕೊಠಡಿ ಸೇರಿ ಒಟ್ಟು 2,300 ಮಂದಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ಕಲ್ಯಾಣ ಮಂಟಪ, ವಿದ್ಯಾರ್ಥಿನಿಲಯಗಳನ್ನೂ ಬಳಸಿಕೊಳ್ಳಲಾಗುವುದು ಎಂದರು.

    ಕಾರ್ಯಕ್ರಮ: ಫೆ.5ರ ಬೆಳಗ್ಗೆ 8ಕ್ಕೆ ರಾಷ್ಟ್ರಧ್ವಜ, ಪರಿಷತ್ತಿನ ಧ್ವಜ ಮತ್ತು ನಾಡಧ್ವಜಾರೋಹಣ ಆಗಲಿದೆ. 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಸಾಗಲಿದ್ದು, 60 ಜಾನಪದ ಕಲಾತಂಡಗಳು ಪಾಲ್ಗೊಳ್ಳಲಿವೆ. 11.30ಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದರು.

    ಬೃಹತ್ ವೇದಿಕೆ ಸಜ್ಜು: ಗುಲಬರ್ಗಾ ವಿವಿ ಆವರಣದಲ್ಲಿ 35 ಎಕರೆ ಪ್ರದೇಶದಲ್ಲಿ ವೇದಿಕೆ ಸಜ್ಜಾಗುತ್ತಿದೆ. ಶ್ರೀವಿಜಯ ಪ್ರಧಾನ ವೇದಿಕೆಯಲ್ಲಿ 10 ಗೋಷ್ಠಿ ಹಾಗೂ ಸಮಾನಂತರ ವೇದಿಕೆಗಳಲ್ಲಿ 12 ಗೋಷ್ಠಿ ನಡೆಯಲಿದೆ. ಗೋಷ್ಠಿಗಳಿಗೆ ಕಲ್ಯಾಣ ಕರ್ನಾಟಕದ ಆರು ಜಿಲ್ಲೆಗಳ ಸಾಮಾಜಿಕ, ಆರ್ಥಿಕ, ಸಾಹಿತ್ಯಕ ಹಾಗೂ ಸಾಂಸ್ಕೃತಿಕ ವಿಷಯಗಳನ್ನೇ ಆಯ್ಕೆ ಮಾಡಲಾಗಿದೆ ಮೂರು ವೇದಿಕೆಗಳಲ್ಲೂ ಕವಿಗೋಷ್ಠಿ ಗಳು ನಡೆಯಲಿದ್ದು, ನೂರು ಕವಿಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಫೆ.6ರಂದು ಸಾಹಿತಿ, ಸಂಶೋಧಕ ಡಾ.ಷ.ಶೆಟ್ಟರ್ ಅವರಿಂದ ‘ಕನ್ನಡ ಉಳಿಸಿ ಬೆಳೆಸುವ ಬಗೆ’ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ. ಸಮ್ಮೇಳನದಲ್ಲಿ 380 ಪುಸ್ತಕ ಮಳಿಗೆ, 150 ವಾಣಿಜ್ಯ ಮಳಿಗೆ ತೆರೆಯಲಿವೆ ಎಂದು ವಿವರಿಸಿದರು.

    ಖಾದ್ಯ ವಿಶೇಷ: ಈ ಬಾರಿ ಸಮ್ಮೇಳನದಲ್ಲಿ ಸುಮಾರು 5 ಲಕ್ಷ ಮಂದಿ ಭಾಗವಹಿಸುವ ನಿರೀಕ್ಷೆ ಹೊಂದಿದ್ದು, ಎಲ್ಲರಿಗೂ ಊಟದ ವ್ಯವಸ್ಥೆ ಇರಲಿದೆ. ಮೂರು ದಿನಗಳ ಸಮ್ಮೇಳನದಲ್ಲಿ ದಿನಕ್ಕೊಂದು ಶೈಲಿಯಂತೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಭಾಗದ ಖಾದ್ಯಗಳನ್ನು ಉಣಬಡಿಸಲು ಸಿದ್ಧತೆ ನಡೆದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts