ಬಸವನಬಾಗೇವಾಡಿ: ತಾಲೂಕಿನ ಇವಣಗಿ ಗ್ರಾಮದಲ್ಲಿ ಹತ್ತನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕ ಕಾರಣದಿಂದ ಮುಂದೂಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಶಿವಾನಂದ ಡೋಣೂರ ಹೇಳಿದರು.
ಪಟ್ಟಣದ ಬಸವೇಶ್ವರ ದೇವಸ್ಥಾನದ ಒಳ ಆವರಣದಲ್ಲಿರುವ ಕಸಾಪ ಕಚೇರಿಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ವಿವಿಧ ಪದಾಧಿಕಾರಿಗಳ ಸಭೆಯಲ್ಲಿ ಶುಕ್ರವಾರ ತೀರ್ಮಾನ ಕೈಗೊಳ್ಳಲಾಯಿತು.
ನವೆಂಬರ್ 13 ರಂದು ತಾಲೂಕಿನ ಇವಣಗಿ ಗ್ರಾಮದಲ್ಲಿ 10ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ಈ ಹಿಂದೆ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ರಾಜ್ಯದ ಮೂರು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಮ್ಮೇಳನ ಮುಂದೂಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ನವೆಂಬರ್ ಕೊನೆಯ ವಾರದಲ್ಲಿ ಸಮ್ಮೇಳನದ ದಿನಾಂಕ ನಿಗದಿಪಡಿಸಲಾಗುವುದು ಎಂದರು.
ಸಭೆಯಲ್ಲಿ ಕೊಟ್ರೇಶ ಹೆಗಡ್ಯಾಳ, ಎಚ್.ಬಿ.ಬಾರಿಕಾಯಿ, ಶಿವಾನಂದ ಮಡಿಕೇಶ್ವರ, ಬಸವರಾಜ ಮೇಟಿ, ಎಂ.ಎನ್. ಅಂಗಡಗೇರಿ, ಎಸ್.ಎಲ್. ಓಂಕಾರ, ಬಸವರಾಜ ಚಿಂಚೋಳಿ, ಯಮನಪ್ಪ ಮಿಣಜಗಿ, ಬಸವರಾಜ ಪಟ್ಟಣಶೆಟ್ಟಿ, ಚಿದಾನಂದ ಹೂಗಾರ, ಮಾದೇವಿ ಬಿರಾದಾರ, ಶಾಂತಾ ಪಾಟೀಲ, ನಿರ್ಮಲ ಅಂಗಡಿ ಇತರರಿದ್ದರು.