More

    85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಸಿಎಂ: ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಬೋಧನೆ ಖಾತ್ರಿಪಡಿಸಲು ನಮ್ಮ ಸರ್ಕಾರ ಬದ್ಧ – ಬಿ.ಎಸ್. ಯಡಿಯೂರಪ್ಪ

    ಕಲಬುರಗಿ(ಶ್ರೀವಿಜಯ ಪ್ರಧಾನ ವೇದಿಕೆ): ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಬೋಧನೆ ಖಾತ್ರಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಈ ನಾಡಿನ ನೆಲ, ಜಲ, ಭಾಷೆಯ ರಕ್ಷಣೆಗೆ ಬೇಕಾದ ಎಲ್ಲ ಪೂರಕ ಕಾರ್ಯತಂತ್ರಗಳನ್ನು ಸರ್ಕಾರ ಕೈಗೊಳ್ಳಲು ಕಟಿಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.

    ಕಲಬುರಗಿಯಲ್ಲಿ ಏರ್ಪಡಿಸಲಾಗಿರುವ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ಕನ್ನಡ ಸಾಹಿತ್ಯ ಸಮೃದ್ಧಿಯೊಂದಿಗೆ ಆಡುಭಾಷೆಯಾಗಿಯೂ ತನ್ನ ಕಂಪು ಪಸರಿಸಬೇಕು. ಇತರ ಭಾಷೆಗಳ ಜ್ಞಾನ ನಮ್ಮ ಯೋಚನೆಯ ಪರಿಧಿಯನ್ನು ವಿಸ್ತರಿಸಲಿ, ಆದರೆ ನಮ್ಮ ಆಲೋಚನೆಗಳು ಕನ್ನಡದಲ್ಲಿಯೇ ಇರಲಿ. ಈ ನಿಟ್ಟಿನಲ್ಲಿ ಖಾಸಗಿ ಶಾಲೆಗಳಲ್ಲಿ ಕನ್ನಡ ಭಾಷೆ ಕಡ್ಡಾಯ ಬೋಧನೆ ಖಾತ್ರಿಪಡಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ರಾಜ್ಯದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಬೋಧಿಸುತ್ತಿರುವ ಬಗ್ಗೆ ಮತ್ತು ಸರ್ಕಾರಿ ಶಾಲೆಗಳ ಸಬಲೀಕರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಇತರ ಸದಸ್ಯರನ್ನೊಳಗೊಂಡು ಶಿಕ್ಷಣ ಸಚಿವರ ಅಧ್ಯಕ್ಷತೆಯ ಸಮಿತಿ ರಚಿಸಲಾಗಿದೆ. ಸರ್ಕಾರಿ ಶಾಲೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಅಗತ್ಯ ಮೂಲಭೂತ ಸೌಕರ್ಯ, ಶಿಕ್ಷಕರ ತರಬೇತಿ ಕಾರ್ಯಕ್ರಮ ಮೊದಲಾದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದರೆ ಸಮುದಾಯದ ಬೆಂಬಲವಿಲ್ಲದೆ ಸರ್ಕಾರಿ ಶಾಲೆಗಳನ್ನು ಉಳಿಸುವುದು ಕಷ್ಟ ಸಾಧ್ಯ ಎಂಬುದನ್ನು ಎಲ್ಲರೂ ಅರಿತುಕೊಳ್ಳಬೇಕಿದೆ. ಪೋಷಕರೂ ತಮ್ಮ ಮಕ್ಕಳ ಶಿಕ್ಷಣದ ಬಗ್ಗೆ ಆಸಕ್ತಿ ವಹಿಸಿ, ಸರ್ಕಾರಿ ಶಾಲೆಗಳ ಬಗ್ಗೆ ಒಲವು ಬೆಳೆಸಿಕೊಂಡಾಗ ಮಾತ್ರ ಶಾಲೆಗಳನ್ನು ಉನ್ನತಿಗೇರುತ್ತವೆ ಎಂದು ಸರ್ಕಾರಿ ಶಾಲೆಗಳ ಬಗ್ಗೆ ಆಶಯ ವ್ಯಕ್ತಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts