More

    ಬೆಂಗಳೂರಲ್ಲಿ ‘ಕನ್ನಡ ರಥ’ಕ್ಕೆ ಅದ್ದೂರಿ ಪೂಜೆ: ಕನ್ನಡ ಜ್ಯೋತಿ ಹಿಡಿದು ನಗರ ಸಂಚಾರ

    ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ ರಾಜ್ಯಾದ್ಯಂತ ಸಂಚರಿಸಲಿರುವ ಕನ್ನಡ ರಥ ಬೆಂಗಳೂರು ತಲುಪಿದ್ದು, ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆವರಣದಲ್ಲಿ ರಥಕ್ಕೆ ಪೂಜೆ ಸಲ್ಲಿಸಲಾಯಿತು.

    ಬೇಲಿಮಠದ ಶ್ರೀ ಶಿವರುದ್ರ ಸ್ವಾಮೀಜಿ, ಸಮ್ಮೇಳನಾಧ್ಯಕ್ಷ ಡಾ. ದೊಡ್ಡರಂಗೇಗೌಡ, ಕಸಾಪ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ, ಮಾಜಿ ಅಧ್ಯಕ್ಷ ಡಾ. ಮನುಬಳಿಗಾರ್, ಇತಿಹಾಸ ತಜ್ಞ ಡಾ. ತಲಕಾಡು ಚಿಕ್ಕರಂಗೇಗೌಡ, ಕರ್ನಾಟಕ ನವ ನಿರ್ಮಾಣ ಸೇನೆ ಅಧ್ಯಕ್ಷ ಭೀಮಾಶಂಕರ ಪಾಟೀಲ್, ಕಸಾಪ ಗೌರವ ಕಾರ್ಯದರ್ಶಿಗಳಾದ ನೇ.ಭ. ರಾಮಲಿಂಗಶೆಟ್ಟಿ, ಕೆ. ಮಹಾಲಿಂಗಯ್ಯ, ಗೌರವ ಕೋಶಾಧ್ಯಕ್ಷ ಬಿ.ಎಂ. ಪಟೇಲ್ ಪಾಂಡು ಸೇರಿ ನೂರಾರು ಕನ್ನಡಾಭಿಮಾನಿಗಳು ರಥಕ್ಕೆ ಪೂಜೆ ಸಲ್ಲಿಸಿ ಜಾಥಾಗೆ ಚಾಲನೆ ನೀಡಿದರು.

    ಡಾ. ಮಹೇಶ ಜೋಶಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಕನ್ನಡದ ಸ್ವಾಭಿಮಾನದ ಸಂಕೇತವಾದ ಕನ್ನಡ ಜ್ಯೋತಿಯನ್ನು ಹೊತ್ತ ‘ಕನ್ನಡ ರಥ’ದ ಜಾಥಾ ಹಮ್ಮಿಕೊಂಡಿದ್ದು, ಹೊಸ ಪರಂಪರೆಗೆ ನಾಂದಿ ಹಾಡಲಾಗಿದೆ ಎಂದು ಹೇಳಿದರು.

    ಬೆಂಗಳೂರಲ್ಲಿ ‘ಕನ್ನಡ ರಥ’ಕ್ಕೆ ಅದ್ದೂರಿ ಪೂಜೆ: ಕನ್ನಡ ಜ್ಯೋತಿ ಹಿಡಿದು ನಗರ ಸಂಚಾರ

    ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಭುವನಗಿರಿಯ ತಾಯಿ ಕನ್ನಡ ಭುವನೇಶ್ವರಿ ದೇವಾಲಯದಿಂದ ಜ್ಯೋತಿ ಹಿಡಿದು ಸಾಗಿರುವ ಕನ್ನಡ ರಥ ಜಾಥಾ, ರಾಜ್ಯಾದ್ಯಂತ ಸಂಚರಿಸಿ ಹಾವೇರಿಯಲ್ಲಿ ಜನವರಿ 6ರಿಂದ 8ವರೆಗೆ ನಡೆಯಲಿರುವ ನುಡಿಜಾತ್ರೆಗೆ ಕನ್ನಡ ಜ್ಯೋತಿ ದರ್ಶನ ಮಾಡಿಸುವ ಮೂಲಕ ಕನ್ನಡಿಗರನ್ನು ಆಹ್ವಾನಿಸಲಿದೆ. ಕನ್ನಡ ರಥ ಹೊತ್ತು ತರುವ ಜ್ಯೋತಿಯಿಂದ ಸಾಹಿತ್ಯ ಸಮ್ಮೇಳನದ ಉದ್ಘಾಟನಾ ದೀಪ ಬೆಳಗಿಸಲಾಗುವುದು ಎಂದು ತಿಳಿಸಿದರು.

    ಬೇಲಿಮಠದ ಶ್ರೀ ಶಿವರುದ್ರ ಸ್ವಾಮಿಜಿ ಮಾತನಾಡಿ, ಕನ್ನಡ ತಾಯಿ ಭುವನೇಶ್ವರಿಯ ಪೂರ್ಣ ಕೃಪೆ ಸಮಸ್ತ ಕನ್ನಡಿಗರ ಮೇಲಿದೆ. ಈ ಸತ್ಯವನ್ನು ಇಂದು ಕನ್ನಡ ಸಾಹಿತ್ಯ ಪರಿಷತ್ತು ನಾಡಿನ ಎಲ್ಲ ಮೂಲೆ ಮೂಲೆಗಳ ಕನ್ನಡಿಗರಿಗೆ ಕನ್ನಡ ರಥದಲ್ಲಿ ಕನ್ನಡ ಜ್ಯೋತಿ ದರ್ಶನ ಮಾಡಿಸುವ ಮೂಲಕ ತೋರಿಸಿ ಕೊಡಲಿದೆ ಎಂದು ಹೇಳಿದರು.

    86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾದ್ಯಕ್ಷ ಡಾ. ದೋಡ್ಡರಂಗೇಗೌಡ ಮಾತನಾಡಿ, ಕನ್ನಡ ಸಾಹಿತ್ಯ ಸಮ್ಮೇಳವು ಕನ್ನಡಿಗರ ಹೆಮ್ಮೆಯ ಪ್ರತೀಕ ಆಗಬೇಕಿದೆ. ಆ ನಿಟ್ಟಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಸಕಾರಾತ್ಮಕವಾದ ಹೆಜ್ಜೆಯನ್ನು ಇಡುತ್ತಿದೆ. ಎಲ್ಲ ಕನ್ನಡಿಗರು ಹಾವೇರಿಯಲ್ಲಿ ನಡೆಯುವ ಕನ್ನಡದ ಅಕ್ಷರ ಜಾತ್ರೆಯಲ್ಲಿ ಭಾಗವಹಿಸುವ ಮೂಲಕ ಕನ್ನಡಾಭಿಮಾನ ಎತ್ತಿ ತೋರಿಸಬೇಕಿದೆ ಎಂದರು.

    ಬೆಂಗಳೂರಲ್ಲಿ ‘ಕನ್ನಡ ರಥ’ಕ್ಕೆ ಅದ್ದೂರಿ ಪೂಜೆ: ಕನ್ನಡ ಜ್ಯೋತಿ ಹಿಡಿದು ನಗರ ಸಂಚಾರ

    ನಗರ ಸಂಚಾರ ನಡೆಸಿದ ಕನ್ನಡ ರಥ: ಕನ್ನಡ ಸಾಹಿತ್ಯ ಪರಿಷತ್ತು ಆವರಣದಲ್ಲಿ ಪೂಜೆ ಸ್ವೀಕರಿಸಿದ ಕನ್ನಡ ರಥ ಜಾನಪದ ಕಲಾಮೇಳಗಳೊಂದಿಗೆ ಚಾಮರಾಜಪೇಟೆಯ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ, ನಂತರ ಬಸವನಗುಡಿ ಮಾರ್ಗವಾಗಿ ಬನಶಂಕರಿಗೆ ತೆರಳಿ ಅಲ್ಲಿ ಬನಶಂಕರಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿತು. ಬಳಿಕ ಕೋಣನಕುಂಟೆ, ಬನ್ನೇರುಘಟ್ಟ, ಜಿಗಣಿ ಮಾರ್ಗವಾಗಿ ತೆರಳಿದ ರಥವನ್ನು ಆನೇಕಲ್ಲಿನಲ್ಲಿ ಭವ್ಯ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಅಲ್ಲಿಂದ ಚಂದಾಪುರ, ಮಡಿವಾಳ, ಡೈರಿ ಸರ್ಕಲ್, ಲಾಲ್‌ಬಾಗ್ ಮಾರ್ಗವಾಗಿ ಸಂಜೆ ಕನ್ನಡ ಸಾಹಿತ್ಯ ಪರಿಷತ್ತು ತಲುಪಿತು.

    ಇಂದು ದೇವಾಲಯದಲ್ಲಿ ಪೂಜೆ: ಶನಿವಾರ ಬೆಳಗ್ಗೆ ಕಸಾಪ ಆವರಣದಿಂದ ಹೊರಡುವ ಕನ್ನಡ ರಥ ಮೈಸೂರು ಸರ್ಕಲ್ ಬಳಿಯ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸ್ವೀಕರಿಸಿ ಕೆಂಗೇರಿ ಮಾರ್ಗವಾಗಿ ರಾಮನಗರ ಜಿಲ್ಲೆ ತಲುಪಲಿದೆ.

    ನಿಮ್ಮನ್ನು ನೋಡ್ಬೇಕು ಬನ್ನಿ ಎಂದು ಗೋಗರೆದರೂ ಹಾಸ್ಟೆಲ್​ಗೆ ಬಾರದ ಅಪ್ಪ-ಅಮ್ಮ… ಬೆಂಗಳೂರಲ್ಲಿ ಬಿಇ ವಿದ್ಯಾರ್ಥಿ ದುರಂತ ಅಂತ್ಯ

    ಈಕೆಯ ಮಾದಕ ಫೋಟೋ, ಉದ್ರೇಕಕಾರಿ ಮೆಸೇಜ್​ಗೆ ಬೋಲ್ಡ್ ಆದ ಬಳ್ಳಾರಿ ಶಿಕ್ಷಕನಿಗೆ 4 ವರ್ಷದ ಬಳಿಕ ಎದುರಾಯ್ತು ಸಂಕಷ್ಟ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts