ನಾಳೆ ಕನ್ನಡ ಸಂಸ್ಕೃತಿ ಉತ್ಸವ, ಪ್ರಶಸ್ತಿ ಪ್ರದಾನ : ಶೋಭಾಯಾತ್ರೆ, ನಾಗರಿಕ ಸನ್ಮಾನ

ಕುಂಬಳೆ: ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ಜು.13ರಂದು ಸೀತಾಂಗೋಳಿ ಎಚ್.ಎ.ಎಲ್ ಸನಿಹದ ಅಲಯನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಜರುಗಲಿದೆ. ಬೆಳಗ್ಗೆ 9ಕ್ಕೆ ಸೀತಾಂಗೋಳಿ ಪೇಟೆಯಿಂದ ಆರಂಭಗೊಳ್ಳುವ ಶೋಭಾಯಾತ್ರೆಗೆ ಪುತ್ತಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ಬಣ್ಣ ಆಳ್ವ ಚಾಲನೆ ನೀಡುವರು.

ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಸಮಾರಂಭ ಉದ್ಘಾಟಿಸುವರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯೂಜೆ)ದ ಕರ್ನಾಟಕ ಅಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸುವರು. ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ರವಿ ನಾಯ್ಕಪು ಪ್ರಾಸ್ತಾವಿಕ ಮಾತುಗಳನ್ನಾಡುವರು. ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ಕೇಂದ್ರ ಪಶು ಸಂಗೋಪನೆ, ಮೀನುಗಾರಿಕೆ ಖಾತೆ ರಾಜ್ಯ ಸಚಿವ ಜಾರ್ಜ್ ಕುರಿಯನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಕರ್ನಾಟಕ ಅರಣ್ಯ ಸಚಿವರು ಈಶ್ವರ ಬಿ.ಖಂಡ್ರೆ ದತ್ತಿನಿಧಿ ಪ್ರಶಸ್ತಿ ಪ್ರದಾನ ಮಾಡುವರು.

ಆರ್ಯಭಟ ಪ್ರಶಸ್ತಿ ಪುರಸ್ಕೃತ ಉದ್ಯಮಿ ಕೆ. ಕೆ. ಶೆಟ್ಟಿ ಮತ್ತು ವಾಸ್ತುಶಿಲ್ಪಿ ರವೀಂದ್ರ ಕುಮಾರ್‌ಗೆ ನಾಗರಿಕ ಸನ್ಮಾನ ನಡೆಯಲಿದೆ. ಕರ್ನಾಟಕ ವಿಧಾನ ಪರಿಷತ್ತು ಉಪಸಭಾಪತಿ ಎಂ.ಕೆ.ಪ್ರಾಣೇಶ್ ಸಾಧಕರನ್ನು ಸನ್ಮಾನಿಸಲಿರುವರು. ಕರ್ನಾಟಕ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹಾಗೂ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸೋಮಣ್ಣ ಬೇವಿನಮರದ ಕೃತಿಗಳನ್ನು ಬಿಡುಗಡೆಗೊಳಿಸುವರು. ಉದ್ಯಮಿ ಕುಳೂರುಕನ್ಯಾನ ಸದಾಶಿವ ಶೆಟ್ಟಿ, ಕುದುಕೋಳಿ ಹವ್ವಾ ಹಸನ್ ಫೌಂಡೇಷನ್ ಸಂಸ್ಥಾಪಕ ಅಬ್ದುಲ್ಲಾ ಮಾದುಮೂಲೆ, ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್, ಶಾಸಕರಾದ ಎನ್.ಎ.ನೆಲ್ಲಿಕುನ್ನು, ಸಿ.ಎಚ್ ಕುಞಂಬು, ಎ.ಕೆ.ಎಂ ಅಶ್ರಫ್, ಜಿಪಂ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯರು ಗೌರವ ಅತಿಥಿಗಳಾಗಿ ಭಾಗವಹಿಸುವರು.

Share This Article

ಕರಗಿದ ಮೇಣದಬತ್ತಿಯಿಂದ ಏನೆಲ್ಲಾ ಉಪಯೋಗ; ಬಿಸಾಡುವ ಬದಲು ಮರುಬಳಕೆ ಮಾಡಿ..

ಮನೆಯಲ್ಲಿ ಉಪಯೋಗಿಸುವ ಎಷ್ಟೋ ವಸ್ತುಗಳು ಕೆಲಕಾಲದ ನಂತರ ಹಳೆಯದಾಗುತ್ತದೆ. ಮತ್ತೆ ಕೆಲವು ಬಳಸಿದ ನಂತರ ನಾಶವಾಗುತ್ತದೆ.…

ಈರುಳ್ಳಿ ಸಿಪ್ಪೆಯನ್ನು ಎಸೆಯುವ ತಪ್ಪನ್ನು ಮಾಡಬೇಡಿ! ಸಿಪ್ಪೆ ವೇಸ್ಟ್​ ಎಂದು ಬಿಸಾಡೋ ಬದಲು ಹೀಗೆ ಮಾಡಿ

ಯಾವುದೇ ಅಡುಗೆ ಮಾಡಿದ್ರು ಈರುಳ್ಳಿ ಬೇಕೆ... ಬೇಕು. ಈರುಳ್ಳಿಯು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ, ಆದರೆ…

ನಿಮ್ಮ ಅಂಗೈನಲ್ಲಿ ತ್ರಿಶೂಲ ಗುರುತು ಇದೆಯಾ ನೋಡಿ… ಇದರರ್ಥ ತಿಳಿದ್ರೆ ನಿಮ್ಮ ಹುಬ್ಬೇರೋದು ಖಚಿತ!

ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…