ಗಟ್ಟಿಗೊಳಿಸದಿದ್ದರೆ ಕನ್ನಡ ಶಾಲೆಗಳಿಗಿಲ್ಲ ಉಳಿಗಾಲ

Latest News

ಆಸಿಡ್ ದಾಳಿಯ ಹೀನಾಯ ಕೃತ್ಯ

ದೆಹಲಿ ಹೊರವಲಯದ ಸಹಕಾರಿ ಗೃಹನಿರ್ವಣ ಕಾಲನಿಯೊಂದರಲ್ಲಿ 23 ವರ್ಷದ ಪ್ರೀತಿ ರಾಠಿ ತನ್ನ ತಂದೆ ಅಮರ್ ಸಿಂಗ್, ತಾಯಿ ರೋಶನಿ ಮತ್ತು ಸೋದರ...

ಪ್ರಜಾಪ್ರೀತಿಯಿಂದಲೇ ಅರಸನಿಗೆ ಯಶಸ್ಸು

ಶರಶಯ್ಯೆಯಲ್ಲಿ ಮಲಗಿದ್ದ ಭೀಷ್ಮರು ಧರ್ಮಜನಿಗೆ ಹೇಳುತ್ತಿದ್ದ ರಾಜಧರ್ಮದ ಮಾತುಗಳು ಹೀಗೆ ಮುಂದುವರಿದವು: ‘ಯುಧಿಷ್ಠಿರ! ರಾಜನೀತಿ ಎಂಬುದು ಆರು ಬಗೆಯ ಗುಣಾವಲಂಬನೆಯಿಂದ ಕೂಡಿರುತ್ತದೆ. 1)....

ಅಮೃತ ಬಿಂದು

ಶ್ರೀ ಶೈವಾಗಮ ದೃಢವ್ರತಮಹಿಂಸಾ ಚ ತಸ್ಮೆ ೖ ಪಂಚೇದ್ರಿಯಾರ್ಪಣಂ | ಏಕಾಗ್ರಚಿತ್ತಸಂಪತ್ತಿಃ ಪರತತ್ತೆ್ವೕ ಸದಾ ರತಿಃ || ಲಿಂಗೇ ನಿಜಮನೋಲೀನಂ ಸದ್ಯೋಮುಕ್ತಿಶ್ಚ ಶಾಶ್ವತೀ |...

ಆಡದೇ ಮಾಡುವವನು ರೂಢಿಯೊಳಗೆ ಉತ್ತಮನು

ಯೇಸುಕ್ರಿಸ್ತರ ಬೋಧನೆಗಳನ್ನು ಕೇಳುತ್ತಿದ್ದ ಶಿಷ್ಯರಾದಿಯಾಗಿ ಸಾಮಾನ್ಯ ಜನರಿಗೂ ಅವರ ಮಾರ್ವಿುಕವಾದ ಮಾತುಗಳು ಹಾಗೂ ದೂರದೃಷ್ಟಿಯ ಬೋಧನೆಗಳನ್ನು ಅರ್ಥಮಾಡಿಕೊಳ್ಳಲು ಅನೇಕ ವೇಳೆ ಕಷ್ಟವಾಗುತಿತ್ತು. ಅಂತಹ...

ವೆಬ್ ಸರಣಿಯಲ್ಲಿ ಸಾಯಿ ಪಲ್ಲವಿ?

ಸಿನಿಮಾಗಳ ರೀತಿ-ನೀತಿಗೂ ವೆಬ್ ಸೀರಿಸ್​ಗಳ ವ್ಯಾಕರಣಕ್ಕೂ ಸಿಕ್ಕಾಪಟ್ಟೆ ವ್ಯತ್ಯಾಸ ಇದೆ. ವೆಬ್ ಸರಣಿಗಳಿಗೆ ಯಾವುದೇ ರೀತಿಯಲ್ಲಿ ಸೆನ್ಸಾರ್​ನ ಅಡೆತಡೆಗಳಿಲ್ಲ. ಸ್ವಲ್ಪ ಬೋಲ್ಡ್ ಎನಿಸುವ...

ಆಲೂರು: ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ ಒದಗಿಸಿ ಗಟ್ಟಿಗೊಳಿಸದಿದ್ದರೆ ಭವಿಷ್ಯದಲ್ಲಿ ಕನ್ನಡ ಶಾಲೆಗಳಿಗೆ ಉಳಿಗಾಲವಿಲ್ಲ ಎಂದು 8ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷ ಕೆ.ಬಿ.ಗುರುಮೂರ್ತಿ ಕಳವಳ ವ್ಯಕ್ತಪಡಿಸಿದರು.

ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪಟ್ಟಣದ ಶ್ರೀ ವೆಂಕಟೇಶ್ವರ ಕಲ್ಯಾಣ ಮಂಟಪದಲ್ಲ್ಲಿ ಬುಧವಾರ ಏರ್ಪಡಿಸಿದ್ದ 8ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರಂಭದಲ್ಲಿ ಮಾತನಾಡಿದರು.

ಖಾಸಗಿ ಶಿಕ್ಷಣ ಸಂಸ್ಥೆಗಳ ಅಬ್ಬರ ಹೆಚ್ಚಾಗಿರುವ ಇಂದಿನ ದಿನಗಳಲ್ಲಿ ಪಾಲಕರು ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗಿ ಮಕ್ಕಳನ್ನು ದುಬಾರಿ ಶುಲ್ಕ ಪಾವತಿಸಿ ಅದೇ ಶಾಲೆಗಳಲ್ಲಿ ಪೈಪೋಟಿಗೆ ಬಿದ್ದವರಂತೆ ಸೇರಿಸುತ್ತಿದ್ದಾರೆ. ಸರ್ಕಾರಿ ಶಾಲಾ ವ್ಯವಸ್ಥೆಯ ಬಗ್ಗೆ ಪಾಲಕರು ವಿಶ್ವಾಸ ಕಳೆದುಕೊಂಡಿದ್ದಾರೆ. ಇದರಿಂದಾಗಿ ಎಲ್ಲೆಡೆ ಇಂಗ್ಲಿಷ್ ಪ್ರಾಬಲ್ಯ ಅಧಿಕವಾಗಿ ಕನ್ನಡ ಸೊರಗುವಂತಾಗಿದೆ. ಈ ನಿಟ್ಟಿನಲ್ಲಿ ಪಾಲಕರಲ್ಲಿ ಸರ್ಕಾರಿ ಶಾಲಾ ವ್ಯವಸ್ಥೆಯ ಬಗ್ಗೆ ವಿಶ್ವಾಸ ಮೂಡಿಸುವ ಅಗತ್ಯವಿದೆ ಎಂದರು.

ರಾಜ್ಯದಲ್ಲಿಯೇ ಆಲೂರು ತಾಲೂಕು ಅತ್ಯಂತ ಹಿಂದುಳಿದ್ದು, ಸ್ನಾತಕೋತ್ತರ ಶಿಕ್ಷಣ ಕೇಂದ್ರ ಇಲ್ಲಿ ಸ್ಥಾಪಿತವಾಗಬೇಕು. ಹಲವು ದಶಕಗಳಿಂದ ತಾಲೂಕಿನಲ್ಲಿ ಕಾಡುತ್ತಿರುವ ಕಾಡಾನೆ-ಮಾನವ ಸಂಘರ್ಷಕ್ಕೆ ಇತಿಶ್ರೀ ಹಾಡಬೇಕು ಎಂದರು.

ಹಿರಿಯ ಸಾಹಿತಿ ಎಲ್.ಹನುಮಂತಯ್ಯ ಮಾತನಾಡಿ, ಕನ್ನಡ ಭಾಷೆಗೆ ಎರಡು ಸಾವಿರ ವರ್ಷಗಳ ಸುದೀರ್ಘ ಇತಿಹಾಸವಿದೆ. ಭಾಷೆ ಜನರ ಮಧ್ಯೆ ಬೆಳೆಯುವಂತದ್ದೇ ಹೊರತು ಪ್ರಯೋಗಾಲಯಗಳಿಂದ ಅಲ್ಲ. ಕನ್ನಡವನ್ನು ಕಟ್ಟಿಕೊಳ್ಳುವ ಪ್ರಕ್ರಿಯೆಯಲ್ಲಿ ನಾವು ಸೋಲುತ್ತಿದ್ದೇವೆ. ಅವರವರ ಜವಾಬ್ದಾರಿಗಳನ್ನರಿತು ಭಾಷಾಭಿಮಾನ ತೋರುವುದರಿಂದ ಕನ್ನಡ ಭಾಷೆ ಬೆಳವಣಿಗೆಯ ಜತೆಗೆ ಸಂಸ್ಕೃತಿ ಬೆಳವಣಿಗೆಯೂ ಆಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಸಾಪ ಗೌರವಾಧ್ಯಕ್ಷ ರವಿ ನಾಕಲಗೂಡು, ಮೈಸೂರು ಮಹಾರಾಜರು ಕಟ್ಟಿದ ಕನ್ನಡ ಸಾಹಿತ್ಯ ಪರಿಷತ್ ಅಂದಿನಿಂದ ಇಂದಿನವರೆಗೂ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಯನ್ನು ಉಳಿಸಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿದ್ದು ಅದರಡಿಯಲ್ಲಿ ಜಿಲ್ಲಾ ಕಸಾಪ ಕನ್ನಡ ಕಟ್ಟುವ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿದೆ ಎಂದು ತಿಳಿಸಿದರು.

ಸಮಾರಂಭಕ್ಕೂ ಮೊದಲು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ರಾಷ್ಟ್ರಧ್ವಜವನ್ನು ತಹಸೀಲ್ದಾರ್ ಶಿರಿನ್‌ತಾಜ್, ನಾಡಧ್ವಜವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀಕಾಂತ್, ಜಿಲ್ಲಾ ಕಸಾಪ ಅಧ್ಯಕ್ಷ ಮಂಜೇಗೌಡ ಕನ್ನಡ ಸಾಹಿತ್ಯ ಪರಿಷತ್ ಧ್ವಜಾರೋಹಣ ನೆರವೇರಿಸಿದರು.


ನಂತರ ಪಟ್ಟಣದ ಕೊನೆಪೇಟೆ ವೀರಶೈವ ಸಮುದಾಯದ ವೃತ್ತದಿಂದ ಒಕ್ಕಲಿಗರ ಕಲ್ಯಾಣ ಮಂಟಪದವರೆಗೆ ಸಮ್ಮೇಳನಾಧ್ಯಕ್ಷ ಕೆ.ಬಿ.ಗುರುಮೂರ್ತಿ ಅವರನ್ನು ಸಾರೋಟಿನಲ್ಲಿ ಕಲಾತಂಡದೊಂದಿಗೆ ಶಾಲಾ, ಕಾಲೇಜು ವಿದ್ಯಾರ್ಥಿಗಳ ಸಹಯೋಗದೊಂದಿಗೆ ಮುಖ್ಯಬೀದಿಯಲ್ಲಿ ಮೆರವಣಿಗೆ ನಡೆಸಿ ವೇದಿಕೆಗೆ ಕರೆತರಲಾಯಿತು.

ಕಸಾಪ ಜಿಲ್ಲಾಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ, ಕಾರ್ಯದರ್ಶಿ ಜಾವಗಲ್ ಪ್ರಸನ್ನಕುಮಾರ್, ತಾಲೂಕು ಕಸಾಪ ಗೌರವಾಧ್ಯಕ್ಷ ಕೆ.ಎಸ್.ಮಂಜೇಗೌಡ, ತಾಲೂಕು ಅಧ್ಯಕ್ಷ ಗಂಗರ ಶ್ರೀಕಾಂತ್, ಉಪಾಧ್ಯಕ್ಷ ನಟರಾಜು ನಾಕಲಗೂಡು, ಪಾಳ್ಯ ಹೋಬಳಿ ಅಧ್ಯಕ್ಷ ಪರಮೇಶ್, ಕಸಾಪ ನಿಕಟಪೂರ್ವ ಸಮ್ಮೇಳಾಧ್ಯಕ್ಷ ಕೊಟ್ರೇಶ್ ಎಸ್.ಉಪ್ಪಾರ್, ನಿಕಟಪೂರ್ವ ಅಧ್ಯಕ್ಷ ಎಸ್.ಶಿವಮೂರ್ತಿ, ಕೋಶಾಧ್ಯಕ್ಷ ಆರ್.ಟಿ.ಗುರುಸ್ವಾಮಿ, ಗೌರವ ಕಾರ್ಯದರ್ಶಿ ಎಚ್.ಡಿ.ಸೋಮೇಶ್, ತಾಪಂ ಕಾರ್ಯನಿರ್ವಣಾಧಿಕಾರಿ ಸತೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹೊನ್ನೇಶ್ ಕುಮಾರ್, ಸಮನ್ವಯಾಧಿಕಾರಿ ರಮೇಶ್, ಆಲೂರು ಪೊಲೀಸ್ ಠಾಣೆಯ ಪಿಎಸ್ಸೈ ರೇವಣ್ಣ, ಶಾಲಾ ಕಾಲೇಜಿನ ಶಿಕ್ಷಕರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಕನ್ನಡ ಸಾಹಿತ್ಯಾಭಿಮಾನಿಗಳು ಭಾಗವಹಿಸಿದ್ದರು.

 

- Advertisement -

Stay connected

278,507FansLike
569FollowersFollow
608,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....