ಜ್ವಲಂತ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸಲಿ: ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಎಸ್.ಮಂಜುನಾಥ್ ಆಗ್ರಹ

Mandya
Published on

ಮಂಡ್ಯ: ನಗರದಲ್ಲಿ 45 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಶೀಘ್ರವೇ ಪ್ರಾರಂಭಿಸಲು ಸರ್ಕಾರ ಕ್ರಮ ವಹಿಸಬೇಕು ಎಂದು ಕನ್ನಡಸೇನೆ ಜಿಲ್ಲಾಧ್ಯಕ್ಷ ಎಚ್.ಎಸ್.ಮಂಜುನಾಥ್ ಆಗ್ರಹಿಸಿದರು.

ಕ್ಯಾನ್ಸರ್ ಆಸ್ಪತ್ರೆ ಸ್ಥಗಿತಗೊಂಡಿರುವುದರಿಂದ ರೋಗಿಗಳಿಗೆ ತೊಂದರೆಯಾಗಿದೆ. ಇನ್ನು ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವುದರ ಜತೆಗೆ ಮೈಷುಗರ್ ಕಾರ್ಖಾನೆಗೆ ಕೇಂದ್ರ ಸರ್ಕಾರ ಅನುದಾನ ನೀಡಬೇಕೆಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಜಿಲ್ಲೆಯ ಜನಪ್ರತಿನಿಧಿಗಳಿಗೆ ಇಚ್ಛಾಶಕ್ತಿಯ ಕೊರತೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸಬೇಕು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರಥಮ ಭಾರಿಗೆ ಮಂಡ್ಯ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಆದ್ದರಿಂದ ರಾಜ್ಯದ ರೈತರ ಬದುಕಿಗೆ ಹರ್ಷ ತರುವ ಯೋಜನೆಗಳನ್ನು ಈ ವೇಳೆ ಘೋಷಿಸಬೇಕು ಎಂದರು.

ಉಪಾಧ್ಯಕ್ಷ ಬೆಟ್ಟಹಳ್ಳಿ ಮಂಜುನಾಥ್, ರಾಜ್ಯ ಸಂಚಾಲಕಿ ದೇವಮ್ಮ, ಪ್ರಧಾನ ಕಾರ್ಯದರ್ಶಿ ಕಮ್ಮನಾಯಕನಹಳ್ಳಿ ಮಂಜು, ಬಂಡೂರು ಮಂಜು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net