'ಕನ್ನಡದ ಸ್ವಾಮೀಜಿ' ಎಂದೇ ಖ್ಯಾತರಾಗಿದ್ದ ಅಲ್ಲಮಪ್ರಭು ಸ್ವಾಮೀಜಿ ಲಿಂಗೈಕ್ಯ

Kannada Swamiji
Published on

ಬೆಳಗಾವಿ: ಕನ್ನಡದ ಸ್ವಾಮೀಜಿ ಎಂದೇ ಪ್ರಖ್ಯಾತಿ ಪಡೆದಿದ್ದ ಚಿಂಚಣಿ ಸಿದ್ದಸಂಸ್ಥಾನ ಮಠದ ಪೀಠಾಧಿಕಾರಿ ಶ್ರೀ ಅಲ್ಲಮಪ್ರಭು ಮಹಾಸ್ವಾಮೀಜಿ ಭಾನುವಾರ ಮುಂಜಾನೆ ಲಿಂಗೈಕ್ಯರಾಗಿದ್ದಾರೆ. ಮೃತರಿಗೆ 63 ವರ್ಷ ವಯುಸ್ಸಾಗಿತ್ತು.

ಕಿಡ್ನಿ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಸ್ವಾಮೀಜಿ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮುಂಜಾನೆ ಮೃತಪಟ್ಟಿದ್ದಾರೆ.

ಗಡಿ ಭಾಗದಲ್ಲಿ ಕನ್ನಡದ ಮಠ, ಕನ್ನಡದ ಸ್ವಾಮೀಜಿ ಎಂದೇ ಚಿಂಚಣಿ ಶ್ರೀಗಳು ಖ್ಯಾತರಾಗಿದ್ದರು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಣಿ ಮಠದ ಸ್ವಾಮೀಜಿ ಅವರು ಅಪಾರ ಭಕ್ತರನ್ನು, ಅನುಯಾಯಿಗಳನ್ನು ಹೊಂದಿದ್ದರು. ಹಲವಾರು ದಶಕಗಳ ಕಾಲ ಕನ್ನಡದ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವ ಮೂಲಕ ರಾಜ್ಯದ ಗಮನ ಸೆಳೆದಿದ್ದರು.

ಶ್ರೀಗಳ ಅಂತ್ಯಸಂಸ್ಕಾರ ಇಂದೇ ನಡೆಯಲಿದ್ದು, ಮಠದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಶ್ರೀಗಳ ನಿಧನಕ್ಕೆ ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net