More

    ಮೂರು ಭಾಷೆಗಳಲ್ಲಿ ತ್ರಿಕೋನ ಬಿಡುಗಡೆ; ವರಮಹಾಲಕ್ಷ್ಮೀ ಹಬ್ಬಕ್ಕೆ ಬಂತು ಮೋಷನ್​ ಪೋಸ್ಟರ್

    ಪೊಲೀಸ್ ಪ್ರಕ್ಕಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಜಶೇಖರ್ ನಿರ್ಮಿಸಿರುವ ‘ತ್ರಿಕೋನ` ಚಿತ್ರ ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ, ಯಾವುದೇ ಕಟ್ ನೀಡದೆ, ಸೌಂಡ್ ಮ್ಯೂಟ್ ಮಾಡದೆ, ಯು/ಎ ಅರ್ಹತಾ ಪತ್ರ ನೀಡಿದೆ. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

    ಇದನ್ನೂ ಓದಿ: ಇದೇನು ಗೂಂಡಾ ರಾಜ್ಯನಾ? ಟೀಮ್​ ಕಂಗನಾ ಪ್ರಶ್ನೆ

    ತ್ರಿಕೋನ ಚಿತ್ರತಂಡವೂ ಚಿತ್ರದ ಪ್ರಚಾರ ಕಾರ್ಯದ ಭಾಗವಾಗಿ ಮೋಷನ್ ಪೋಸ್ಟರ್ ಬಿಡುಗಡೆಯಾಗಿದ್ದು, ತ್ರಿಕೋನಂ ಎಂದು ತೆಲುಗಿನಲ್ಲಿ ಹಾಗೂ ಗೋಸುಲೋ ಎಂಬ ಹೆಸರಿನಿಂದ ತಮಿಳಿನಲ್ಲೂ ಬಿಡುಗಡೆ ಮಾಡಲಾಗಿದೆ.
    ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ಮಾಪಕ ರಾಜಶೇಖರ್ ಅವರೆ ಕಥೆ ಬರೆದದ್ದು, 143 ಚಿತ್ರ ಖ್ಯಾತಿಯ ಚಂದ್ರಕಾಂತ್ ನಿರ್ದೇಶನ ಮಾಡಿದ್ದಾರೆ. ನಿರ್ದೇಶಕರ ಹೊರತುಪಡಿಸಿ ಆಯಾ ಭಾಷೆಗಳಲ್ಲಿ ಅಲ್ಲಿನ ನುರಿತ ತಂತ್ರಜ್ಞರು‌ ಈ ಸಿನಿಮಾಕ್ಕಾಗಿ ಕೆಲಸ ಮಾಡಿದ್ದಾರೆ.

    ಇದನ್ನೂ ಓದಿ: ‘ನೈಟ್​ಮೇರ್​’ ಮೂಲಕ ಹೊಸ ತಂಡದ ಕನಸು ನನಸು..

    ಸುರೇಂದ್ರನಾಥ್ ಸಂಗೀತ ನಿರ್ದೇಶನ, ಶ್ರೀನಿವಾಸ್ ವೆನಕೋಟ ಛಾಯಾಗ್ರಹಣ, ಜೀವನ್ ಪ್ರಕಾಶ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ಜಾನಿ, ಚೇತನ್ ಡಿಸೋಜ ಸಾಹಸ ನಿರ್ದೇಶನ ಮಾಡಿದ್ದಾರೆ.
    ಸುರೇಶ್ ಹೆಬ್ಳೀಕರ್, ಲಕ್ಷ್ಮೀ, ಅಚ್ಯುತ್ ಕುಮರ್​, ಸುಧಾರಾಣಿ, ಸಾಧುಕೋಕಿಲ, ಭಜರಂಗಿ ಮಾರುತೇಶ್, ರಾಜವೀರ್, ಅದಿತಿ ರಾಜ್, ಹಾಸಿನಿ ತಾರಾಗಣದಲ್ಲಿದ್ದಾರೆ.

    ಸಾವಿಗೂ ಮುನ್ನ ಕೊನೆ 2 ಗಂಟೆಯವರೆಗೆ ಸುಶಾಂತ್​ ಮಾಡಿದ್ದೇನು?: ಪೊಲೀಸ್​ ಆಯುಕ್ತರ ಕುತೂಹಲಕಾರಿ ಹೇಳಿಕೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts