More

    ಸಿಎಂ ಬೊಮ್ಮಾಯಿ ಭೇಟಿಗಾಗಿ ಮಹಾರಾಷ್ಟ್ರದಿಂದ ಬಂದ ಕನ್ನಡಿಗರು..!

    ಬೆಳಗಾವಿ: ಕರ್ನಾಟಕದಲ್ಲಿ ಮರಾಠಿ ಭಾಷಿಕರಿಗೆ ನೀಡುತ್ತಿರುವ ಶಿಕ್ಷಣ , ಉದ್ಯೋಗದಲ್ಲಿನ ಮೀಸಲಾತಿ ಸೌಲಭ್ಯಗಳನ್ನು ಮಹಾರಾಷ್ಟ್ರ ದಲ್ಲಿರುವ ಕನ್ನಡಿಗರಿಗೆ ನೀಡುವಂತೆ ಆಗ್ರಹಿಸಿ ಬೆಳಗಾವಿಗೆ ಆಗಮಿಸಿದ ಮಹಾರಾಷ್ಟ್ರ ಜತ್ತ ತಾಲೂಕಿನ ಕನ್ನಡಿಗರು.

    ‘ಕರ್ನಾಟಕ ಸರ್ಕಾರವು ಬೆಳಗಾವಿ ಸೇರಿದಂತೆ ವಿವಿಧ ಭಾಗದಲ್ಲಿರುವ ಮರಾಠಿ ಭಾಷಿಕರಿಗೆ ಪ್ರತ್ಯೇಕ ಪ್ರಾಥಮಿಕ ಶಾಲೆಗಳನ್ನು ಆರಂಭಿಸಿದೆ. ಆದರೆ, ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಅಲ್ಲಿನ ಸರ್ಕಾರ ಯಾವುದೇ ಸೌಲಭ್ಯಗಳನ್ನು ಕಲ್ಪಿಸುತ್ತಿಲ್ಲ.

    ಕೂಡಲೇ ಕರ್ನಾಟಕ ಸರ್ಕಾರ, ನೆರೆಯ ಮಹಾರಾಷ್ಟ್ರದಲ್ಲಿರುವ ಕನ್ನಡಿಗರ ರಕ್ಷಣೆಗಾಗಿ ಪ್ರಾಥಮಿಕ ಶಾಲೆ, ಅಂಗನವಾಡಿ ಕೇಂದ್ರಗಳನ್ನು ಆರಂಭಿಸಬೇಕು. ಹೊರ ರಾಜ್ಯಗಳಲ್ಲಿರುವ ಕನ್ನಡಿಗರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ.5 ರಷ್ಟು ಮೀಸಲಾತಿ‌ ನೀಡಬೇಕು. ಹೊರ ರಾಜ್ಯಗಳಲ್ಲಿ ಕನ್ನಡ ಕಲಿಯುತ್ತಿರುವ ಒಂದೇ ತರಗತಿ ಮಕ್ಕಳಿಗಾಗಿ 5000 ರೂ. ಠೇವಣಿಗಳನ್ನು ಇಡುವ ಯೋಜನೆ ಜಾರಿಗೆ ತರಬೇಕು.

    ಮಹಾರಾಷ್ಟ್ರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ‌ ಪರೀಕ್ಷೆಯನ್ನು ಕನ್ನಡ ಮಾಧ್ಯಮದಲ್ಲಿ ನಡೆಸುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಒತ್ತಡ ಹಾಕಬೇಕು. ನಲಿ-ಕಲಿ ಸಾಮಗ್ರಿಗಳನ್ನು ಹೊರರಾಜ್ಯದ ಕನ್ನಡ ಮಕ್ಕಳಿಗೂ ನೀಡಬೇಕು ಎಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts