ಕನ್ನಂಗಾರ್ ದರ್ಗಾ ಶರೀಫ್ ಉರುಸ್

urus
Published on

ಪಡುಬಿದ್ರಿ: ಹೆಜಮಾಡಿ ಗ್ರಾಮದ ಕನ್ನಂಗಾರ್ ಜುಮ್ಮಾ ಮಸೀದಿ ಮುಂಭಾಗದಲ್ಲಿರುವ ಶೈಖುನಾ ಸಿರಾಜುದ್ದೀನ್ ವಲಿಯುಲ್ಲಾಹಿ ದರ್ಗಾ ಶರೀಫ್‌ನಲ್ಲಿ ಮೂರು ವರ್ಷಗಳಿಗೊಮ್ಮೆ ನಡೆಯುವ ಕನ್ನಂಗಾರ್ ಉರುಸ್ ಸಮಾರಂಭ ಏ.11ರಿಂದ 19ರವರೆಗೆ ನಡೆಯಲಿದೆ ಎಂದು ಉರುಸ್ ಸಮಿತಿ ಅಧ್ಯಕ್ಷ ಗುಲಾಂ ಮುಹಮ್ಮದ್ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿಯ ಪ್ರತಿಷ್ಠಿತ ಜಮಾಅತ್ ಆಗಿರುವ ಇಲ್ಲಿನ ಉರುಸ್ ಸಮಾರಂಭಕ್ಕೆ ಜಿಲ್ಲೆ ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳಿಂದ ಎಲ್ಲ ಸಮುದಾಯದವರು ಭಾಗವಹಿಸುತ್ತಾರೆ. 11ರಂದು ಜುಮಾ ನಮಾಜು ಬಳಿಕ ಧ್ವಜಾರೋಹಣ ನೆರವೇರಲಿದ್ದು, ಅಸಯ್ಯದ್ ಕೆ.ಎಸ್.ಆಟಕೋಯ ತಂಙಳ್ ಕುಂಬೋಳ್ ನೇತೃತ್ವ ವಹಿಸಲಿದ್ದಾರೆ. ರಾತ್ರಿ ನಡೆಯುವ ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಂಯುಕ್ತ ಖಾಝಿ ಝೈನುಲ್ ಉಲಮಾ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉದ್ಘಾಟನೆ ನೆರವೇರಿಸುವರು. ಅಸಯ್ಯದ್ ಅಬ್ದರ‌್ರಹ್ಮಾನ್ ಮಸೂದ್ ತಂಙಳ್ ಕೂರತ್ ದುವಾ ನೆರವೇರಿಸಲಿದ್ದಾರೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

ಉರುಸ್ ದಿನಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ, ಅಬ್ದರ‌್ರಹ್ಮಾನ್ ಮದನಿ, ಪೇರೋಡ್ ಅಬ್ದರ‌್ರಹ್ಮಾನ್ ಸಖಾಫಿ, ಅಬ್ದರ‌್ರಹ್ಮಾನ್ ವಿಪಿಎ ತಂಙಳ್ ದಾರಿಮಿ ಆಟೀರಿ, ಮುಹಮ್ಮದ್ ಫಾರೂಕ್ ನಈಮಿ ಕೊಲ್ಲಂ, ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ, ಹಂಝ ಮದನಿ ಮಿತ್ತೂರು, ನೌಫಲ್ ಸಖಾಫಿ ಕಳಸ, ನೂರುಸ್ಸಾದಾತ್ ಅಬ್ದರ‌್ರಹ್ಮಾನ್ ಇಂಬಿಚ್ಚಿಕೋಯ ತಂಙಳ್ ಬಾಯಾರ್, ಅಸ್ಸಯ್ಯದ್ ಜಲಾಲುದ್ದೀನ್ ತಂಙಳ್ ಮಳ್ಹರ್, ಕೆ.ಪಿ. ಹುಸೈನ್ ಸಅದಿ ಕೆ.ಸಿ. ರೋಡ್ ಭಾಗವಹಿಸುವರು. ಅಸಯ್ಯದ್ ಕೆ.ಎಸ್. ಜಅಫರ್ ಸ್ವಾದಿಕ್ ತಂಙಳ್ ಕುಂಬೋಳ್ ನೇತೃತ್ವದಲ್ಲಿ 16ರಂದು ಜಲಾಲಿಯ್ಯ ದಿಕ್ರ್ ಮಜ್ಲಿಸ್ ನೆರವೇರಲಿದೆ ಎಂದು ತಿಳಿಸಿದರು. ಕಾರ್ಯದರ್ಶಿ ರಕೀಬ್ ಕನ್ನಂಗಾರ್, ಹಮಿದ್ ಹಾಜಿ, ಅಬ್ದುಲ್ ಹಮೀದ್ ಮಿಲಾಫ್ ಉಪಸ್ಥಿತರಿದ್ದರು.

19ರಂದು ಸಮಾರೋಪ

19ರಂದು ಉರುಸ್ ಸಮಾರೋಪ ಸಮಾರಂಭ ನಡೆಯಲಿದೆ. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಕಾಂತಪುರಂ, ಬದ್ರುಸ್ಸಾದಾತ್ ಅಸಯ್ಯದ್ ಇಬ್ರಾಹಿಂ ಖಲೀಲ್ ಬುಖಾರಿ ತಂಙಳ್ ಕಡಲುಂಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹಸಚಿವ ಜಿ.ಪರಮೇಶ್ವರ್, ಸಚಿವರಾದ ಜಮೀರ್ ಅಹಮದ್, ಮಂಕಾಳ ವೈದ್ಯ, ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಮತ್ತಿತರರು ಪಾಲ್ಗೊಳ್ಳುವರು. 13ರಂದು ಸೌಹಾರ್ದ ಸಂಗಮ, ರಕ್ತದಾನ, ಉಚಿತ ವೈದ್ಯಕೀಯ ಶಿಬಿರ ಆಯೋಜಿಸಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net