‘ಕಾಂತಾರ ಚಾಪ್ಟರ್ 1’ ಸಿನಿಮಾದ ಕಲಾವಿದ ನಿಧನ...Kantara Chapter 1

kantara
Published on

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಶೂಟಿಂಗ್ ವೇಳೆ, ಸೆಟ್​ನಲ್ಲಿದ್ದ ಜೂನಿಯರ್ ಆರ್ಟಿಸ್ಟ್​ ನಿಧನರಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರಿನ ಕೊಲ್ಲೂರಿನಲ್ಲಿ ಈ ಘಟನೆ ನಡೆದಿದೆ.

ಸಿನಿಮಾದಲ್ಲಿ ಕೆಲಸ ಮಾಡುತ್ತಿದ್ದ ಕೇರಳ ಮೂಲದ ಜೂನಿಯರ್ ಆರ್ಟಿಸ್ಟ್ ಕಪಿಲ್ ಅವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ.

ಸಿನಿಮಾ ತಂಡಕ್ಕೆ ವಿಘ್ನ ಎದುರಾದಂತೆ ಆಗಿದೆ. ರಿಷಬ್ ಶೆಟ್ಟಿ  ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net