2 ದಿನದಲ್ಲಿ 10 ಕೋಟಿ ಗಳಿಸಿದ ತೆಲುಗಿಗೆ ಡಬ್​ ಆದ ಕಾಂತಾರ!

blank

 

ಬೆಂಗಳೂರು: ಕಾಂತಾರ ಸಿನಿಮಾ ಬಿಡುಗಡೆಯಾಗಿ ಎರಡು ವಾರಗಳು ಕಳೆದರೂ, ಹೌಸ್​ಫುಲ್ ಪ್ರದರ್ಶನ ಮಾತ್ರ ಕಡಿಮೆಯಾಗಿಲ್ಲ. ಜನರು ಕುಟುಂಬ ಸಮೇತರಾಗಿ ಚಿತ್ರಮಂದಿರದತ್ತ ಬರುತ್ತಿದ್ದಾರೆ. ಅನೇಕರು ಟಿಕೆಟ್ ಸಿಗುತ್ತಿಲ್ಲ ಎಂದು ನಿರಾಸೆ ಅನುಭವಿಸುತ್ತಿದ್ದಾರೆ. 
 
ಕಾಂತಾರ ಸಿನಿಮಾ ಮೊದಲು ಕನ್ನಡ ಭಾಷೆಯಲ್ಲಿ ಬಿಡುಗಡೆ ಕಂಡಿತ್ತು. ಕನ್ನಡದಲ್ಲಿ ಸಿಕ್ಕ ಯಶಸ್ಸಿನ ನಂತರ ಇದೀಗ ಹಿಂದಿ, ತೆಲುಗು, ತಮಿಳು, ಮಲಯಾಳಂ ಭಾಷೆಗೆ ಡಬ್ಬಿಂಗ್ ಆಗಿ ಬಿಡುಗಡೆಯಾಗಿದೆ. ಇದೀಗ ದೇಶದಾದ್ಯಂತ ಈ ಸಿನಿಮಾ ಡಬ್ಬಿಂಗ್ ಮೂಲಕ ಬಿಡುಗಡೆಯಾಗಿದ್ದು, ಹೌಸ್​ಫುಲ್ ಪ್ರದರ್ಶನವನ್ನೇ ಕಾಣುತ್ತಿದೆ.
 
ಕಾಂತಾರ ಸಿನಿಮಾ ತೆಲುಗಿನಲ್ಲಿ ಬಿಡುಗಡೆಯಾದ ಎರಡೇ ದಿನದಲ್ಲಿ 10 ಕೋಟಿ ಕಲೆಕ್ಷನ್ ಮಾಡಿದೆ. ತೆಲುಗಿನಲ್ಲೂ ಪ್ರೇಕ್ಷಕರು ಮುಗಿಬಿದ್ದು ಕಾಂತಾರ ಸಿನಿಮಾ ವೀಕ್ಷಿಸುತ್ತಿದ್ದಾರೆ. ತೆಲುಗಿನ ಸೂಪರ್​ ಸ್ಟಾರ್​​ಗಳಾದ ಪ್ರಭಾಸ್, ನಾನಿ ಮುಂತಾದವರು ಕಾಂತಾರ ಸಿನಿಮಾ ನೋಡಿ ಮೆಚ್ಚಿಕೊಂಡಿದ್ದಾರೆ. ಇದೀಗ ಈ ಸಿನಿಮಾ 100 ಕೋಟಿ ರೂ. ಕಲೆಕ್ಷನ್ ಮಾಡಿ, ಯಶಸ್ಸಿನಿಂದ ಮುನ್ನುಗ್ಗುತ್ತಿದೆ.
Share This Article
blank

ಮನೆಯಲ್ಲಿರುವ ಹಲ್ಲಿಗಳನ್ನು ಓಡಿಸಲು ಇಲ್ಲಿದೆ ಸುಲಭ ಮಾರ್ಗ.. ಒಮ್ಮೆ ಟ್ರೈ ಮಾಡಿ | Lizards

Lizards: ಹಲ್ಲಿಗಳು ಹೆಚ್ಚಾಗಿ ಮನೆಯ ಗೋಡೆಗಳ ಮೇಲೆ ಮತ್ತು ಅಡುಗೆಮನೆಯಲ್ಲಿ ಹೆಚ್ಚಾಗಿ ಕಂಡುಬರುತ್ತವೆ. ಹಲ್ಲಿಗಳ ಬಗ್ಗೆ…

ಹನಿ-ಹನಿ ಮೂತ್ರ ಬರುತ್ತಿದ್ರೆ ಈ ಅಂಗಕ್ಕೆ ಹಾನಿಯಾಗಿದೆ ಎಂದರ್ಥ!; ಅನಿಯಂತ್ರಿತ ಮೂತ್ರದ ಸಮಸ್ಯೆಗೆ ಕಾರಣ ಏನು? | Urinary

Urinary : ಸಾಮಾನ್ಯವಾಗಿ ಬೇಸಿಗೆ ಸಮಯದಲ್ಲಿ ಮೂತ್ರ ಸಂಬಂಧಿತ ಸಮಸ್ಯೆಗಳು ಭಾಧಿಸುತ್ತವೆ. ಅನೇಕ ಜನರಿಗೆ ಮೂತ್ರ…

blank