More

    ಕಾನೂನು ಜಾಗೃತಿಗೆ ರಥ ಸಂಚಾರ ಆರಂಭ

    ಚಿಕ್ಕಬಳ್ಳಾಪುರ: ಜಿಲ್ಲೆಯ ಜನರಲ್ಲಿ ಕಾನೂನು ಅರಿವು ಮೂಡಿಸುವ ಸಾಕ್ಷರತಾ ಸಂಚಾರಿ ರಥಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕೆ.ಅಮರನಾರಾಯಣ ಶನಿವಾರ ಚಾಲನೆ ನೀಡಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯ, ವಕೀಲರ ಸಂಘ, ಜಿಲ್ಲಾಡಳಿತ, ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ ಸಹಯೋಗದಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜಿಲ್ಲೆಯ ಹಲವೆಡೆ ಜನತಾ ನ್ಯಾಯಾಲಯ ಮತ್ತು ಸಾಕ್ಷರತಾ ಸಂಚಾರಿ ರಥ ಸಂಚರಿಸಲಿದೆ.

    ಜ.4 ರಿಂದ ನಾಲ್ಕು ದಿನ ತಾಲೂಕು ಮತ್ತು ಗ್ರಾಪಂ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ನಡೆಸಲಿದ್ದು ನ್ಯಾಯಾಧೀಶರು, ಕಾನೂನು ತಜ್ಞರು, ವಿವಿಧ ಇಲಾಖೆ ಸ್ಥಳೀಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

    ಈ ವೇಳೆ ಮಾತನಾಡಿದ ನ್ಯಾಯಾಧೀಶ ಕೆ.ಅಮರನಾರಾಯಣ, ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸುವುದೇ ಕಾರ್ಯಕ್ರಮದ ಮುಖ್ಯ ಉದ್ದೇಶ. ಸಾಕ್ಷರತಾ ರಥವು ಬಾಲ್ಯ ವಿವಾಹ, ಭೂ ಕಂದಾಯ, ಆಸ್ತಿ ಹಕ್ಕು, ಫೋಕ್ಸೋ ಕಾಯ್ದೆ ಸೇರಿ 25 ಕ್ಕೂ ಹೆಚ್ಚು ಕಾಯ್ದೆಗಳ ಬಗ್ಗೆ ಮಾಹಿತಿ ನೀಡಲಿದೆ ಎಂದು ತಿಳಿಸಿದರು.

    ಕಾನೂನಿನ ಮುಂದೆ ಎಲ್ಲರೂ ಸಮಾನರು. ಸರ್ವರಿಗೂ ಕಾನೂನಿನ ಅರಿವು ಅತ್ಯಗತ್ಯ ಎಂದು ಜಿಪಂ ಸಿಇಒ ಬಿ.ೌಜಿಯಾ ತರನ್ನುಮ್ ಅಭಿಪ್ರಾಯಪಟ್ಟರು.

    ಕಕ್ಷಿದಾರರು ಪ್ರಕರಣಗಳ ಇತ್ಯರ್ಥಕ್ಕೆ ಉಚಿತ ಕಾನೂನು ಸೇವೆ ಮತ್ತು ಮಧ್ಯಸ್ಥಿಕೆ ಕೇಂದ್ರಗಳ ನೆರವು ಪಡೆಯಬೇಕು ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಕೆ.ಎಚ್.ತಮ್ಮೇಗೌಡ ತಿಳಿಸಿದರು.

    ನ್ಯಾಯಾಧೀಶರಾದ ನಟರಾಜ್, ಭಾನುಮತಿ, ರೂಪಾ, ಎಚ್.ದೇವರಾಜ್, ಆರೋಗ್ಯ ಮತ್ತು ಕುಟುಂಬ ಇಲಾಖೆ ಕಲ್ಯಾಣಾಧಿಕಾರಿ ಡಾ ಯೋಗೇಶ್‌ಗೌಡ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ವಿ.ವಿನೋದ್ ಕುಮಾರ್, ಜಂಟಿ ಕಾರ್ಯದರ್ಶಿ ಸುರೇಶ್‌ಬಾಬು, ಹಿರಿಯ ವಕೀಲ ಬಿ.ಆರ್. ಹರಿಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts