

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ
ಕನ್ಯಾಡಿ ಶ್ರೀ ಸಮಸ್ತ ಭಕ್ತರ ನೆಮ್ಮದಿ ಬಯಸುವುದಲ್ಲದೆ ದೇಶದುದ್ದಕ್ಕೂ ಶಾಖಾ ಮಠಗಳನ್ನು ಪ್ರಾರಂಭಿಸಿ ಅನ್ನದಾಸೋಹ ಸಂಕಲ್ಪ ಮಾಡಿದ್ದು, ಅದಕ್ಕಾಗಿ ಶಾಖಾ ಮಠಗಳ ನಿರ್ಮಾಣದಲ್ಲಿ ಭಕ್ತರು ಕೈಜೋಡಿಸಬೇಕು ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಾಂಕಾಳ್ ಎಸ್.ವೈದ್ಯ ಹೇಳಿದರು.
ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜರ ಪಟ್ಟಾಭಿಷೇಕ 17ನೇ ವರ್ಧಂತ್ಯುತ್ಸವ ಸಮಾರಂಭದಲ್ಲಿ ಬುಧವಾರ ಮಾತನಾಡಿದರು.
ವಿಧಾನಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಶಾಸಕ ಯಶ್‌ಪಾಲ್ ಸುವರ್ಣ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಸೂರಜ್ ಸೋನಿ ಶುಭಹಾರೈಸಿದರು. ಶ್ರೀ ಗುರುದೇವ ಮಠದ ಟ್ರಸ್ಟಿ ಚಿತ್ತರಂಜನ್ ಗರೋಡಿ ಅಧ್ಯಕ್ಷತೆ ವಹಿಸಿದ್ದರು.
ಶ್ರೀ ರಾಮ ಕ್ಷೇತ್ರ ಸಮಿತಿ ಸಂಚಾಲಕ ಜಯಂತ ಕೋಟ್ಯಾನ್, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘ ಅಧ್ಯಕ್ಷ ಭಗೀರಥ ಜಿ., ವಿಶೇಷಾಧಿಕಾರಿ ಮೋನಪ್ಪ ಪೂಜಾರಿ, ಕುಮುಟಾ ಶ್ರೀ ರಾಮ ಕ್ಷೇತ್ರ ಅಧ್ಯಕ್ಷ ಎಚ್.ಆರ್.ನಾಯ್ಕ, ಕುಮುಟಾ ನಾಮಧಾರಿ ಆರ್ಯ ಈಡಿಗ ಸಂಘ ಅಧ್ಯಕ್ಷ ಮಂಜುನಾಥ್ ನಾಯ್ಕ, ಹೊನ್ನಾವರ ಶ್ರೀ ರಾಮ ಕ್ಷೇತ್ರ ಸಮಿತಿ ಅಧ್ಯಕ್ಷ ವಾಮನ ನಾಯ್ಕ, ಹೊನ್ನಾವರ ನಾಮಧಾರಿ ಸಂಘ ಅಧ್ಯಕ್ಷ ಟಿ.ಟಿ.ನಾಯ್ಕ, ಶಿರಾಲಿ ಹನುಮಂತ ದೇವಸ್ಥಾನ ಅಧ್ಯಕ್ಷ ಆರ್.ಕೆ.ನಾಯ್ಕ, ಶಿರಾಲಿ ದೇವಸ್ಥಾನ ಮೊಕ್ತೇಸರ ಸುಬ್ರಾಯ ನಾಯ್ಕ, ಭಟ್ಕಳ ನಿಚ್ಚಲಮಕ್ಕಿ ವೆಂಕಟ್ರಮಣ ದೇವಸ್ಥಾನ ಅಧ್ಯಕ್ಷ ಅರುಣ ನಾಯ್ಕ, ಭಟ್ಕಳ ಶ್ರೀ ರಾಮ ಕ್ಷೇತ್ರ ಸಮಿತಿ ಅಧ್ಯಕ್ಷ ಶ್ರೀಧರ ನಾಯ್ಕ, ಬೆಳ್ತಂಗಡಿ ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಸದಾನಂದ ಉಂಗಿಲಬೈಲು, ಬೆಳ್ತಂಗಡಿ ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ಸುಮತಿ ಪ್ರಮೋದ್, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಯುವವಾಹಿನಿ ಅಧ್ಯಕ್ಷ ಗುರುರಾಜ ಗುರಿಪಳ್ಳ, ಚಿಕ್ಕಮಗಳೂರು ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಸಂಚಾಲಕ ಅಶೋಕ ಸಾಲ್ಯಾನ್, ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಾಜಿ ಅಧ್ಯಕ್ಷ ಪಿ.ಕೆ.ರಾಜು ಪೂಜಾರಿ, ಬೆಂಗಳೂರು ಶ್ರೀ ರಾಮ ಕ್ಷೇತ್ರ ಸೇವೆ ಸಮಿತಿ ಅಧ್ಯಕ್ಷ ಆಟೋ ಗಂಗಾಧರ್, ಉಡುಪಿ ಬಾರ್ಕೂರು ಆತ್ಮಾನಂದ ಐಟಿಐ ಅಧ್ಯಕ್ಷ ಓಬು ಪೂಜಾರಿ, ಶಿವಮೊಗ್ಗ ಶ್ರೀ ರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಹರೀಶ್, ಮಂಗಳ ನಾಯ್ಕ ಸಿರ್ಸಿ, ಈಶ್ವರ ನಾಯ್ಕ ಮಂಕಿ, ತಿಮ್ಮಪ್ಪ ಗೌಡ ಬೆಳಾಲು, ಧರ್ಮಸ್ಥಳ ಗ್ರಾಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್, ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘ ಉಪಾಧ್ಯಕ್ಷ ಸುಂದರ ಪೂಜಾರಿ, ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್. ಮೊದಲಾದವರಿದ್ದರು. ಉಪನ್ಯಾಸಕ ಕೇಶವ ಗೇರುಕಟ್ಟೆ ಪ್ರಸ್ತಾವನೆಗೈದರು. ಟ್ರಸ್ಟಿ ತುಕಾರಾಮ್ ಸಾಲ್ಯಾನ್ ಸ್ವಾಗತಿಸಿದರು.
ಸಮಾಜದಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸಬೇಕು. ಸನಾತನ ಸಂಸ್ಕೃತಿಯನ್ನು ಬೆಳೆಸಬೇಕು. ರಾಷ್ಟ್ರೀಯತೆ ಎಂಬುದೇ ನನ್ನ ಉದ್ದೇಶ. ಪ್ರತಿಯೊಬ್ಬರ ಹೃದಯದಲ್ಲಿ ಶಿವನನ್ನು ಕಾಣಬೇಕಾದರೆ ಮದ, ಮತ್ಸರ, ಅಹಂ ಭಾವ ಬಿಡಬೇಕು. ಮನೆ ಮನೆಗಳಲ್ಲಿ ಸಂಸ್ಕಾರ ಬೆಳೆಯಬೇಕು. ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಕನ್ಯಾಡಿ ಮಠಾಧೀಶ