

ಬೆಂಗಳೂರು: ಭಾರತೀಯ ಸಂಸ್ಕೃತಿ ಪ್ರಸಾರ ಹಾಗೂ ಸಂಶೋಧನೆಯಲ್ಲಿ ನಿರತವಾಗಿರುವ ವಿದ್ಯಾಂಸರಿಗೆ ಕೊಡಮಾಡುವ ಪ್ರತಿಷ್ಠಿತ ಶ್ರೀ ಕಪಾಲಿಶಾಸಿ ಪ್ರಶಸ್ತಿಯು ನಾಲ್ವರು ಸಾಧಕರಿಗೆ ಸಂದಿದೆ.
ಬೆಂಗಳೂರಿನ ಚನ್ನೇನಹಳ್ಳಿಯಲ್ಲಿರುವ ವೇದ ಗುರುಕುಲ ಸ್ಥಾಪಕ ಪ್ರಾಂಶುಪಾಲ ಡಾ. ರಾಮಚಂದ್ರ ಜಿ. ಭಟ್ ಕೋಟೆಮನೆ, ಮಹಾರಾಷ್ಟ್ರದ ನಾಗಪುರದಲ್ಲಿ ಶಿಶುವೈದರಾಗಿರುವ ಡಾ. ಯೋಗೇಶ್ ವಾಯ್ಕರ್, ಅಗ್ನಿಹೋತ್ರ ಕೈಂಕರ್ಯದಲ್ಲಿ ತೊಡಗಿಸಿಕೊಂಡಿರುವ ಹರಿಹರಪುರ ಶ್ರೀಧರ್ ಹಾಗೂ ಮಧ್ಯಪ್ರದೇಶದ ಉಜ್ಜಯಿನಿಯ ಮಹರ್ಷಿ ಸಾಂದೀಪನಿ ರಾಷ್ಟ್ರೀಯ ವೇದ ವಿದ್ಯಾ ಪ್ರತಿಷ್ಠಾನದ ಕಾರ್ಯದರ್ಶಿ ಪ್ರೋ. ವಿರೂಪಾಕ್ಷ ವಿ.ಜಡ್ಡಿಪಾಲ್ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುರಸ್ಕತರಿಗೆ ತಲಾ 10 ಸಾವಿರ ರೂ. ನಗದು ಬಹುಮಾನ, ಪ್ರಶಸ್ತಿ ಫಲಕ ಸಿಗಲಿದೆ.
ಪ್ರಶಸ್ತಿ ಪ್ರದಾನ ಸಮಾರಂಭವು ಸೆ.7ರ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಬಸವನಗುಡಿಯ ನ್ಯಾಷನಲ್ ಕಾಲೇಜ್ನ ಮಲ್ಟಿಮೀಡಿಯಾ ಹಾಲ್ನಲ್ಲಿ ನಡೆಯಲಿದೆ ಎಂದು ಸಾಕ್ಷಿ ಚಾರಿಟಬಲ್ ಟ್ರಸ್ಟ್ ಪ್ರಕಟಣೆ ತಿಳಿಸಿದೆ.