Wednesday, 12th December 2018  

Vijayavani

ಟ್ರಿನಿಟಿ ಸರ್ಕಲ್​​​ ಬಳಿ ಬಿರುಕು ಬಿಟ್ಟ ಪಿಲ್ಲರ್ - 10 ಕಿಮೀ ವೇಗದಲ್ಲಿ ಮೆಟ್ರೋ ಓಡಾಟ - ಸಮಸ್ಯೆ ಬಗೆಹರಿಸೋದಾಗಿ ಹೇಳಿದ ಸಿಎಂ        ಸದನದ ಹೊರಗೆ NPS ಆದೇಶ ಹಿನ್ನೆಲೆ - ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಸಿದ್ದತೆ -  ಸಂಕಷ್ಟ ತಂದ ಪೆನ್ಶನ್‌ ಸ್ಕೀಂ        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -  ರಾಜ್ಯಪಾಲರನ್ನು ಭೇಟಿಯಾಗಿ ಕಾಂಗ್ರೆಸ್ ಹಕ್ಕು ಮಂಡನೆ        ನಾಳೆ ಕೆಸಿಆರ್ ಪಟ್ಟಾಭಿಷೇಕ- ಪ್ರಮಾಣವಚನಕ್ಕೆ ಚಂದ್ರಶೇಖರ್ ರಾವ್ ಸಿದ್ಧತೆ - ರಾಜ್ಯಪಾಲರನ್ನು ಭೇಟಿಯಾದ ನಾಯಕ        ಶ್ರೀರಂಗಪಟ್ಟಣದಲ್ಲಿ ಶೂಟಿಂಗ್ ವೇಳೆ ಅವಾಂತರ - ಭರತ ಬಾಹುಬಲಿ ತಂಡದ ಮೇಲೆ ಹೆಜ್ಜೇನು ದಾಳಿ -ಏಳು ಮಂದಿ ಆಸ್ಪತ್ರೆಗೆ       
Breaking News

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕಪಿಲಾ ನದಿ

Friday, 10.08.2018, 8:41 AM       No Comments

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕಪಿಲಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಆತಂಕ ಸೃಷ್ಟಿಯಾಗಿದೆ.

ಕಬಿನಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ತಗ್ಗು ಪ್ರದೇಶಗಳಿಗೆ ಕಪಿಲಾ ನದಿ ನೀರು ನುಗ್ಗಿದೆ. ಅಲ್ಲದೆ ನಂಜನಗೂಡು ತಾಲೂಕಿನಲ್ಲಿರುವ ಸುತ್ತೂರು ಗ್ರಾಮದ ಸೇತುವೆ ಮುಳುಗಡೆಯಾಗಿ ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ.

ಮೈಸೂರು-ಸುತ್ತೂರು ನಡುವಿನ ರಸ್ತೆ ಸಂಪರ್ಕ ಬಂದ್ ಆಗಿದ್ದು, ಕಪಿಲಾ ಜಲಾನಯನ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಬೆಳೆ ಹಾನಿ ಸಂಭವಿಸಿದೆ.

ಎಚ್.ಡಿ.ಕೋಟಿ ತಾಲೂಕಿನ ಹಿನ್ನೀರಿನ ಪ್ರದೇಶಗಳು ಮುಳುಗಡೆಯಾಗಿದ್ದು, ಡಿ.ಬಿ.ಕುಪ್ಪೆ, ವಡಕನಮಾಳ ಸೇರಿ ಇತರೆ ಗ್ರಾಮಗಳಿಗೆ ನೀರು ನುಗ್ಗಿದೆ. (ದಿಗ್ವಿಜಯ ನ್ಯೂಸ್)

 

 

Leave a Reply

Your email address will not be published. Required fields are marked *

Back To Top