

ಪಡುಬಿದ್ರಿ: ಮಾನಸಿಕ ಮತ್ತು ದೈಹಿಕ ಆರೋಗ್ಯ ರಕ್ಷಣೆಗಾಗಿ ಹಾಗೂ ಆತ್ಮವಿಶ್ವಾಸ ವೃದ್ಧಿಗಾಗಿ ಕ್ರೀಡೆ ಪೂರಕವಾಗಿದೆ. ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ ದೇಶಕ್ಕೆ ಕೀರ್ತಿ ತರಬೇಕು ಎಂದು ತಹಸೀಲ್ದಾರ್ ಪ್ರತಿಭಾ ಆರ್. ಹೇಳಿದರು.
ಉಡುಪಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮತ್ತು ಕಾಪು ತಾಲೂಕು ಪಂಚಾಯಿತಿ ಸಂಯುಕ್ತವಾಗಿ ಹೆಜಮಾಡಿ ಬಸ್ತಿಪಡ್ಪು ರಾಜೀವಗಾಂಧಿ ಕ್ರೀಡಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ರಾಷ್ಟ್ರೀಯ ಹೈಜಂಪ್ ಪಟು ಪ್ರಕಾಶ್ ಶೆಟ್ಟಿ ಹೆಜಮಾಡಿ ಅಧ್ಯಕ್ಷತೆ ವಹಿಸಿದ್ದರು. ಹೆಜಮಾಡಿ ಬಿಲ್ಲವ ಸಂಘ ಅಧ್ಯಕ್ಷ ಮೋಹನ್‌ದಾಸ್ ಹೆಜ್ಮಾಡಿ, ಪ್ರಧಾನ ಕಾರ್ಯದರ್ಶಿ ಪ್ರಬೋದ್‌ಚಂದ್ರ ಹೆಜ್ಮಾಡಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ್ ಸುವರ್ಣ, ಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ತಾಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ಅಧಿಕಾರಿ ರಿತೇಶ್‌ಕುಮಾರ್ ಶೆಟ್ಟಿ ಸ್ವಾಗತಿಸಿದರು. ನವೀನ್ ಶೆಟ್ಟಿ ಇನ್ನಂಜೆ ವಂದಿಸಿದರು. ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ ಗೋಪಾಲ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.