ಕಾಪು ತ್ಯಾಜ್ಯ ವಿಲೇ ಘಟಕ ಶೀಘ್ರ ಲೋಕಾರ್ಪಣೆ

ಪಡುಬಿದ್ರಿ: ಎಲ್ಲೂರು ಗ್ರಾಪಂ ವ್ಯಾಪ್ತಿಯ 10 ಎಕರೆ ಜಾಗದಲ್ಲಿ 6.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಪು ಪುರಸಭೆಯ ಬೃಹತ್ ತ್ಯಾಜ್ಯ ವಿಲೇವಾರಿ ಘಟಕ, ಸಂಗ್ರಹಣಾ ಘಟಕ ಕಾಮಗಾರಿ ಪ್ರಗತಿಯಲ್ಲಿದ್ದು, ಶೀಘ್ರದಲ್ಲಿ ಲೋಕಾರ್ಪಣೆಗೊಳಿಸಲಾಗುವುದು ಎಂದು ಶಾಸಕ ಲಾಲಾಜಿ ಆರ್.ಮೆಂಡನ್ ಹೇಳಿದರು.

ಕಾಪು ಪುರಸಭೆಯ ಘನ ತ್ಯಾಜ್ಯ ವಿಲೇ ಘಟಕದಲ್ಲಿ ಸಂಗ್ರಹವಾಗುವ ಅನುಪಯುಕ್ತ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಸೂಕ್ತವಾಗಿ ಸಂಸ್ಕರಿಸಿ, ಡಾಂಬರಿನ ಜೊತೆಗೆ ಮಿಶ್ರಣಕ್ಕಾಗಿ ಬಳಸುವ 7 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಿರುವ ವಿನೂತನ ಮಾದರಿಯ ಪ್ಲಾಸ್ಟಿಕ್ ಬಾಯ್ಲಿಂಗ್ ಮತ್ತು ಶೆಡ್ಡರ್ ಮೆಶಿನ್ ಘಟಕವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಪುರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇ ಮಾಡುವುದೇ ಬಲು ದೊಡ್ಡ ಸಮಸ್ಯೆಯಾಗಿದೆ. ಅನುಪಯುಕ್ತ ಮತ್ತು ಮರು ಬಳಕೆಗೆ ಯೋಗ್ಯವಲ್ಲದ ಪ್ಲಾಸ್ಟಿಕ್ ತ್ಯಾಜ್ಯ ವಸ್ತುಗಳನ್ನು ಸಮರ್ಪಕವಾಗಿ ವಿಲೇಗೊಳಿಸುವ ನಿಟ್ಟಿನಲ್ಲಿ ಖಾಸಗಿ ಸಹಭಾಗಿತ್ವದೊಂದಿಗೆ ಪುರಸಭೆ ರಾಜ್ಯಕ್ಕೇ ಪ್ರಥಮ ಮಾದರಿ ಯೋಜನೆಯನ್ನು ಅನುಷ್ಠಾನಗೊಳಿಸಿರುವುದು ಸ್ವಾಗತಾರ್ಹವಾಗಿದೆ ಎಂದರು.
ಮುಖ್ಯಾಧಿಕಾರಿ ವೆಂಕಟೇಶ್ ಬಿ.ನಾವಡ ಮಾತನಾಡಿದರು.

ಪ್ಲಾಸ್ಟಿಕ್ ಬಾಯ್ಲಿಂಗ್ ಮತ್ತು ಶೆಡ್ಡರ್ ಮೆಶಿನ್ ತಂತ್ರಜ್ಞಾನದ ಪ್ರವರ್ತಕ ರಾಮನಾಥ್ ಲಕ್ಷ ್ಮಣ್, ಕಾಪು ಯೋಜನಾ ಪ್ರಾಧಿಕಾರ ಅಧ್ಯಕ್ಷ ಸುಧಾಮ ಶೆಟ್ಟಿ ಮಲ್ಲಾರು, ಪುರಸಭಾ ಸದಸ್ಯರಾದ ಅನಿಲ್ ಕುಮಾರ್, ಕೆ.ಎಚ್.ಉಸ್ಮಾನ್, ರಮೇಶ್ ಹೆಗ್ಡೆ, ಸುರೇಶ್ ದೇವಾಡಿಗ, ಶಾಬು ಸಾಹೇಬ್, ಶಾಂಭವಿ ಕುಲಾಲ್, ಮಮತಾ ಕೆ.ಸಾಲ್ಯಾನ್, ಪ್ರಾಧಿಕಾರ ಸದಸ್ಯ ರಮೇಶ್ ಪೂಜಾರಿ, ಪುರಸಭೆ ಪರಿಸರ ಅಭಿಯಂತರ ರವಿಪ್ರಕಾಶ್, ಆರೋಗ್ಯ ಅಧಿಕಾರಿ ದಿನೇಶ್ ಕುಮಾರ್, ಸಹಾಯಕ ಅಧಿಕಾರಿ ಬಾಲೇಶ್ ಮೊದಲಾದವರು ಉಪಸ್ಥಿತರಿದ್ದರು.
ಪುರಸಭೆಯ ಸಿಬ್ಬಂದಿ ಸುನೀಲ್‌ಕುಮಾರ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಪುರಸಭೆ ವ್ಯಾಪ್ತಿಯಲ್ಲಿ ಪ್ರತೀ ದಿನ 10 ಟನ್‌ನಷ್ಟು ತ್ಯಾಜ್ಯ ಸಂಗ್ರಹವಾಗುತ್ತಿದ್ದು ಅದರಲ್ಲಿ 3.5ನಷ್ಟು ಟನ್ ತ್ಯಾಜ್ಯ ವಿಲೇವಾರಿಯಾಗದೇ ಉಳಿಯುತ್ತಿದೆ. ಕಳೆದ 2-3ವರ್ಷಗಳಿಂದ ಮರು ಬಳಕೆಗೆ ಯೋಗ್ಯವಲ್ಲದ 2,000 ಟನ್‌ನಷ್ಟು ಘನ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ರಾಶಿಯಾಗಿ ಪೇರಿಸಲ್ಪಟ್ಟಿದ್ದು ಈ ಯೋಜನೆಯ ಮೂಲಕ ಪುರಸಭೆಯ ಎಸ್‌ಎಲ್‌ಆರ್‌ಎಂ ಘಟಕದಲ್ಲಿ ಸಂಗ್ರಹವಾಗಿರುವ ಸುಮಾರು 1,000 ಟನ್‌ನಷ್ಟು ತ್ಯಾಜ್ಯ ವಸ್ತುಗಳಿಗೆ ಶೀಘ್ರವಾಗಿ ಮುಕ್ತಿ ನೀಡಲಾಗುವುದು.
-ವೆಂಕಟೇಶ್ ಬಿ.ನಾವಡ, ಮುಖ್ಯಾಧಿಕಾರಿ, ಕಾಪು ಪುರಸಭೆ

Share This Article

ಹದ್ದಿನ ಕಣ್ಣಿನಂಥ ದೃಷ್ಟಿ ನಿಮ್ಮದಾಗಬೇಕಾ? ಇವು ನಿಮ್ಮ ಆಹಾರದಲ್ಲಿ ಇವೆಯೇ? ಚೆಕ್​ ಮಾಡಿಕೊಳ್ಳಿ

ಬೆಂಗಳೂರು: ಮಾನವನ ಅಂಗಾಂಗಗಳಲ್ಲಿ ಎಲ್ಲವೂ ಮುಖ್ಯವೇ ಆದರೂ ಕಣ್ಣುಗಳು ಪ್ರಮುಖ ಸ್ಥಾನ ಪಡೆದುಕೊಂಡಿವೆ. ಹೀಗಾಗಿಯೇ ಕಣ್ಣುಗಳು…

ಇವುಗಳನ್ನು ತಲೆದಿಂಬಿನ ಕೆಳಗೆ ಇಟ್ಟುಕೊಂಡು ಮಲಗಿದ್ರೆ ಸಾಕು! ಚೆನ್ನಾಗಿ ನಿದ್ದೆ ಜತೆ, ಶ್ರೀಮಂತರಾಗೋದು ಪಕ್ಕಾ!

ಬೆಂಗಳೂರು: ತುರ್ತು ಸಂದರ್ಭಗಳಲ್ಲಿ ಹಣ ಅಥವಾ ಅನೇಕ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.  ಈಗ ಹೇಳಿರುವ ಸರಳ ಪರಿಹಾರಗಳನ್ನು…

ಮನೆಯಲ್ಲಿ ಗುಲಾಬಿ ಗಿಡ ಬೆಳೆಸುತ್ತಿದ್ದೀರಾ? ಈ ವಾಸ್ತು ನಿಯಮಗಳು ಕಡ್ಡಾಯ!

ಬೆಂಗಳೂರು: ಸಾಮಾನ್ಯವಾಗಿ ನಮ್ಮ ಹಿತ್ತಲಿನಲ್ಲಿ ಹಲವು ಬಗೆಯ ಗಿಡಗಳನ್ನು ಬೆಳೆಸುತ್ತೇವೆ. ಗುಲಾಬಿ ಗಿಡಗಳನ್ನು ಇಷ್ಟಪಡದವರೇ ಇಲ್ಲ.…