More

  ಕರಾಚಿ ಆಸ್ಪತ್ರೆಯ ಮಹಡಿ ಸೀಲ್: ಎರಡು ದಿನ ಮೊದಲೇ ಆಸ್ಪತ್ರೆಗೆ ದಾಖಲಾಗಿದ್ದನೇ ದಾವೂದ್ ಇಬ್ರಾಹಿಂ?

  ಮುಂಬೈ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಗಂಭೀರ ಆರೋಗ್ಯ ಸಮಸ್ಯೆಯಿಂದಾಗಿ ಪಾಕಿಸ್ತಾನದ ಕರಾಚಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾನೆ ಎಂದು ಮೂಲಗಳು ಸೋಮವಾರ ತಿಳಿಸಿವೆ. ದಾವೂದ್ ಇಬ್ರಾಹಿಂಗೆ ವಿಷ ನೀಡಲಾಗಿದೆ ಎಂಬ ಸಾಮಾಜಿಕ ಮಾಧ್ಯಮದಲ್ಲಿ ಹಲವಾರು ವರದಿಗಳು ಹೊರಬಿದ್ದಿವೆ, ಆದರೆ ಇದರ ಬಗ್ಗೆ ಯಾವುದೇ ದೃಢೀಕರಣವಿಲ್ಲ,

  ದಾವೂದ್ ಇಬ್ರಾಹಿಂ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದಾನೆ. ಈತನನ್ನು ಆಸ್ಪತ್ರೆಯೊಳಗೆ ಬಿಗಿ ಭದ್ರತೆಯಲ್ಲಿ ಇರಿಸಲಾಗಿದೆ. ಈ ಮಹಡಿಯಲ್ಲಿರುವ ಏಕೈಕ ರೋಗಿ ಈತ ಎಂದು ಮೂಲಗಳು ತಿಳಿಸಿವೆ. ಆಸ್ಪತ್ರೆಯ ಕಟ್ಟಡದಲ್ಲಿ ಉನ್ನತ ಅಧಿಕಾರಿಗಳು ಮತ್ತು ಈತನ ನಿಕಟ ಕುಟುಂಬ ಸದಸ್ಯರಿಗೆ ಮಾತ್ರ ಪ್ರವೇಶಾವಕಾಶವಿದೆ ಎಂದು ಮೂಲಗಳು ಹೇಳಿವೆ.

  ಮುಂಬೈ ಪೊಲೀಸರು ದಾವೂದ್​​ ಸಂಬಂಧಿಕರಾದ ಅಲಿಶಾ ಪಾರ್ಕರ್ ಮತ್ತು ಸಾಜಿದ್ ವಾಗ್ಲೆ ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ.

  ಎರಡನೇ ಬಾರಿಗೆ ಮದುವೆಯಾದ ನಂತರ ಕರಾಚಿಯಲ್ಲೇ ದಾವೂದ್ ಇಬ್ರಾಹಿಂ ಇರುತ್ತಾನೆ ಎಂದು ದಾವೂದ್​ ಸಹೋದರಿ ಹಸೀನಾ ಪಾರ್ಕರ್ ಮಗನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್ಐಎ) ಕಳೆದ ಜನವರಿಯಲ್ಲಿ ತಿಳಿಸಿದ್ದ.

  ದಾವೂದ್ ಇಬ್ರಾಹಿಂ ಮತ್ತು ಅವನ ಉನ್ನತ ಸಹಾಯಕರು ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣವನ್ನು ನಿಯಂತ್ರಿಸುತ್ತಾರೆ ಎಂದು ಎನ್‌ಐಎ ತನ್ನ ಆರೋಪಪಟ್ಟಿಯಲ್ಲಿ ಹೇಳಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts