More

    ಕರಗ ಉತ್ಸವ ಹಿನ್ನೆಲೆಯಲ್ಲಿ ಮದ್ಯಮಾರಾಟ ನಿಷೇಧ

    ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ಹಿನ್ನೆಲೆಯಲ್ಲಿ ಏ. 23ರ ಬೆಳಗ್ಗೆ 6 ರಿಂದ ಏ. 24ರ ಬೆಳಗ್ಗೆ 10 ಗಂಟೆವರೆಗೆ ನಗರದ ಹಲಸೂರು ಗೇಟ್, ಎಸ್.ಆರ್. ನಗರ, ವಿಲ್ಸನ್ ಗಾರ್ಡನ್, ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ ಮಾಡುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅದೇಶ ಹೊರಡಿಸಿದ್ದಾರೆ.

    ಮುನ್ನೆಚ್ಚರಿಕೆ ಕ್ರಮವಾಗಿ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಈ ನಾಲ್ಕು ಠಾಣೆಗಳ ವ್ಯಾಪ್ತಿಯಲ್ಲಿ ಬಾರ್ ಅಂಡ್ ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ವೈನ್ ಶಾಪ್, ಪಬ್‌ಗಳನ್ನು ಮುಚ್ಚುವಂತೆ ಆದೇಶದಲ್ಲಿ ಸೂಚಿಸಲಾಗಿದೆ.

    ಉತ್ಸವದಲ್ಲಿ ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳು ಮತ್ತು ನೆರೆಯ ರಾಜ್ಯಗಳ ಭಕ್ತರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಮತ್ತು ಕಿಡಿಗೇಡಿಗಳು ಮದ್ಯದ ಅಮಲಿನಲ್ಲಿ ಕಾನೂನು ಬಾಹಿರ ಕೃತ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆಗಳಿರುತ್ತವೆ. ಇದರಿಂದ ಸಾರ್ವಜನಿಕರ ಶಾಂತಿಗೆ ಭಂಗ ಉಂಟಾಗಲಿದೆ ಎಂಬ ಕಾರಣಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

    ಬಿಗಿ ಭದ್ರತೆ: ಕಳೆದ ವರ್ಷ ಅರ್ಚಕ ವಿ. ಜ್ಞಾನೇಂದ್ರ ಕರಗ ಹೊತ್ತು ಸಾಗುತ್ತಿದ್ದ ಸಂದರ್ಭದಲ್ಲಿ ಕರಗ ಉತ್ಸವಕ್ಕೆ ಅಡ್ಡಿ ಪಡಿಸಲು ಕಿಡಿಗೇಡಿಗಳು ಅವರ ಮೇಲೆ ರಾಸಾಯನಿಕ ಎರಚಿದ್ದರು. ಆದರೂ ಅರ್ಚಕ ಎದೆಗುಂದದೆ ಕರಗ ಉತ್ಸವವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts