More

    ‘ಕೆಜಿಎಫ್​ 2’ ಟ್ರೇಲರ್​ ರಿಲೀಸ್​ಗೆ ಸ್ಟಾರ್​ ನಿರೂಪಕ ಕರಣ್​ ಜೋಹರ್, ​ಮುಖ್ಯ ಅತಿಥಿ ಶಿವಣ್ಣ

    ಸದ್ಯ, 2022 ರ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿರುವ ‘ಕೆಜಿಎಫ್: ಚಾಪ್ಟರ್ 2’ ಟ್ರೇಲರ್ ರಿಲೀಸ್ ಕಾರ್ಯಕ್ರಮ ನೋಡಲು ಎಲ್ಲರೂ ಕಾದು ಕುಳಿತ್ತಿದ್ದಾರೆ. ಹೀಗಾಗಿ, ಅಭಿಮಾನಿಗಳ ನಿರೀಕ್ಷೆಗೆ ತಕ್ಕಂತೆಯೇ ‘ಕೆಜಿಎಫ್ 2’ ಟ್ರೇಲರ್ ಬಿಡುಗಡೆ ಮಾಡಲು ಸಿನಿಮಾದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಕೂಡಾ ನಿರ್ಧರಿಸಿದೆ. ಟ್ರೇಲರ್ ಬಿಡುಗಡೆ ಕಾರ್ಯಕ್ರಮದ ನಿರೂಪಣೆಗೆ ಬಾಲಿವುಡ್​ನ ಖ್ಯಾತ ನಿರ್ಮಾಪಕ ಕರಣ್ ಜೋಹರ್ ಅವರನ್ನು ಆಹ್ವಾನಿಸಲಾಗಿದ್ದು, ಅವರು ಸಹ ಇದಕ್ಕೆ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಇನ್ನು, ಈ ಸುದ್ದಿಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ‘RRR’ ಸಿನಿಮಾದ ಪ್ರೀರಿಲೀಸ್ ಇವೆಂಟ್ ಅನ್ನು ಉತ್ರರ ಭಾರತದಲ್ಲಿ ಯಶಸ್ವಿಯಾಗಿ ನಡೆಸಿಕೊಟ್ಟ ಕರಣ್ ಜೋಹರ್, ಈಗ ಕನ್ನಡ ಸಿನಿಮಾ ‘ಕೆಜಿಎಫ್ 2’ ಸಲುವಾಗಿ ಬೆಂಗಳೂರಿಗೆ ಬಂದು ನಿರೂಪಣೆ ಮಾಡಲಿದ್ದಾರೆ. ಜತೆಗೆ, ಈ ಇವೆಂಟ್​ನಲ್ಲಿ ಮತ್ತೊಂದು ಹೈಲೈಟ್ ಅಂದರೆ ಅದು ನಟ ಶಿವರಾಜ್​ಕುಮಾರ್ ಅವರು.
    ಹೌದು, ಶಿವಣ್ಣ ಅವರು ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿ ಆಗಿರಲಿದ್ದಾರೆ ಎಂಬುದು ಕೂಡಾ ಅಧಿಕೃತವಾಗಿ ಘೋಷಿಸಲಾಗಿದೆ. ಅಂದಹಾಗೆ, ಬೆಂಗಳೂರಿನಲ್ಲಿ ಮಾ. 27 ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದ ಟ್ರೇಲರ್ ಲಾಂಚ್ ಕಾರ್ಯಕ್ರಮ ನಡೆಯಲಿದೆ. ಇದರಲ್ಲಿ ನಿರ್ದೇಶಕ ಪ್ರಶಾಂತ್ ನೀಲ್, ನಿರ್ಮಾಪಕ ವಿಜಯ್​ ಕಿರಗಂದೂರು, ಈ ಸಿನಿಮಾದ ಕಲಾವಿದರಾದ ಯಶ್, ಸಂಜಯ್ ದತ್, ರವೀನಾ ಟಂಡನ್, ಶ್ರೀನಿಧಿ ಶೆಟ್ಟಿ ಹಾಗೆ ಮುಂತಾದವರು ಭಾಗಿ ಆಗಲಿದ್ದಾರೆ ಎಂಬ ಮಾಹಿತಿ ಇದೆ. ಹಾಗೂ, ಬೇರೆ ಬೇರೆ ರಾಜ್ಯಗಳಿಂದ ಪತ್ರಕರ್ತರನ್ನು, ಅಭಿಮಾನಿಗಳನ್ನು ಸಹ ಈ ಟ್ರೈಲರ್ ಇವೆಂಟ್​ಗೆ ಆಹ್ವಾನಿಸಲಾಗಿದೆ. ಇನ್ನು, ಕೆಲ ಗಂಟೆಗಳ ಹಿಂದೆಯೇ ಹೊಂಬಾಳೆ ಫಿಲ್ಮ್ಸ್ ಒಂದು ವಿಡಿಯೋವನ್ನು ಹಂಚಿಕೊಂಡು ಮಾ. 27 ರಂದು ಸಂಜೆ 6.40 ಕ್ಕೆ ಟ್ರೈಲರ್ ಲಾಂಚ್ ಎಂದು ಕೂಡಾ ಘೋಷಿಸಿದೆ.

    ಡಿವೋರ್ಸ್‌ಗೆ ಕಾರಣ ಆದವನ ಜತೆಗಿರುವ ವಿಡಿಯೋ ಹಂಚಿಕೊಂಡ ಸಮಂತಾ! ನೆಟ್ಟಿಗರು ಗರಂ

    ನಿರ್ದೇಶಕ ಅನೂಪ್ ಭಂಡಾರಿಗೆ ದುಬಾರಿ SUV ಕಾರು ಗಿಫ್ಟ್ ಕೊಟ್ಟ ಕಿಚ್ಚ ಸುದೀಪ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts