More

    ಮಹಾರಾಷ್ಟ್ರ-ಕರ್ನಾಟಕ ಗಡಿಯಲ್ಲಿ ಅಂತಾರಾಜ್ಯ ಬಸ್​ ಸಂಚಾರ ಆರಂಭ, ಸಿಲುಕಿಕೊಂಡಿದ್ದ ವಲಸಿಗರಿಗೆ ಅನುಕೂಲ

    ಮುಂಬೈ/ಬೆಂಗಳೂರು: ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದಲ್ಲಿ ಗುರುವಾರದಿಂದ ಅಂತಾರಾಜ್ಯ ಬಸ್​ ಸಂಚಾರ ಆರಂಭವಾಗಿದೆ. ಇದರಿಂದಾಗಿ ಉಭಯ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರು, ವಲಸಿಗರು, ದಿನಗೂಲಿ ಕಾರ್ಮಿಕರು ಮತ್ತು ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ.

    ಇದಕ್ಕೂ ಮುನ್ನ ಮಹಾರಾಷ್ಟ್ರ ಸರ್ಕಾರ ಪುಣ್ಯಸ್ಥಳಗಳ ಯಾತ್ರಾರ್ಥಿಗಳು, ಪ್ರವಾಸಿಗರು ಮತ್ತು ವಿದ್ಯಾರ್ಥಿಗಳು ರಾಜ್ಯದ ಒಳಗಡೆ ಸಂಚರಿಸಲು ಅವಕಾಶ ಮಾಡಿಕೊಡುವುದಾಗಿ ಹೇಳಿತ್ತು.

    ಗುರುವಾರ ನಡೆದ ಸಚಿವ ಸಂಪುಟ ಸಭೆಯ ಬಳಿಕ ಈ ಬಗ್ಗೆ ಮಾಹಿತಿ ನೀಡಿದ್ದ ಸಚಿವ ಜೆ.ಸಿ. ಮಾಧುಸ್ವಾಮಿ, ರಾಜ್ಯದಲ್ಲಿ ಸಿಲುಕಿಕೊಂಡಿರುವ ನೆರೆ ರಾಜ್ಯದ ದಿನಗೂಲಿ ಕಾರ್ಮಿಕರು, ವಿದ್ಯಾರ್ಥಿಗಳು ಮತ್ತು ವಲಸಿಗ ಕಾರ್ಮಿಕರಿಗೆ ತಮ್ಮ ಊರುಗಳಿಗೆ ತೆರಳಲು ಅನುವಾಗುವಂತೆ ಅಂತಾರಾಜ್ಯ ಬಸ್​ ಸೇವೆ ಆರಂಭಿಸಲಾಗಿದೆ. ಒಮ್ಮೆ ಮಾತ್ರ ಅಂತರ್​ ಜಿಲ್ಲಾ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುವುದು. ಇವರೆಲ್ಲರೂ ತಮ್ಮ ವೆಚ್ಚದಲ್ಲಿ ಸಂಚರಿಸಬಹುದಾಗಿದೆ. ಈ ಸಂದರ್ಭದಲ್ಲಿ ಜಾರಿಗೊಳಿಸಲಾಗುವ ಸುರಕ್ಷತಾ ಮಾರ್ಗಸೂಚಿಯನ್ನು ಪಾಲಿಸುವುದು ಕಡ್ಡಾಯವಾಗಿದೆ ಎಂದು ಹೇಳಿದ್ದರು.

    ಚಾಂದವಾಡಿ ಚಿತಾಗಾರದಲ್ಲಿ ರಿಷಿ ಕಪೂರ್​ ಅಂತ್ಯಕ್ರಿಯೆ; ವಿಮಾನ ದೊರೆಯದೆ ಬಾರದ ರಿದ್ಧಿಮಾ ಕಪೂರ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts