More

    ಜ. 12ಕ್ಕೆ ಬೆಳೆಗಾರರ ಮಹತ್ವದ ಸಭೆ, ಏಕ ಕಾಲಕ್ಕೆ ಮೂರು ಜಿಲ್ಲಾಧಿಕಾರಿ ಕಚೇರಿ ಎದುರು ಮುಷ್ಕರಕ್ಕೆ ನಿರ್ಧಾರ

    ಹಾಸನ: ಅಕಾಲಿಕ ಮಳೆಯಿಂದ ನಷ್ಟಕ್ಕೀಡಾಗಿರುವ ಕಾಫಿ, ಮೆಣಸಿಗೆ ಪರಿಹಾರವಾಗಿ ವಿಶೇಷ ಆರ್ಥಿಕ ಪ್ಯಾಕೇಜ್, ಸಾಲ ಮನ್ನಾ ಹಾಗೂ ಆನೆ ಹಾವಳಿ ನಿಯಂತ್ರಣಕ್ಕಾಗಿ ಆಗ್ರಹಿಸಿ ಪ್ರಬಲ ಹೋರಾಟ ರೂಪಿಸುವ ಉದ್ದೇಶದಿಂದ ಜ. 12 ರಂದು ಸಕಲೇಶಪುರದಲ್ಲಿ ಸಭೆ ಏರ್ಪಡಿಸಲಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟ ಅಧ್ಯಕ್ಷ ಡಾ. ಎಚ್.ಟಿ. ಮೋಹನ್‌ಕುಮಾರ್ ತಿಳಿಸಿದರು.

    ಈಗಾಗಲೇ ಮಡಿಕೇರಿ, ಚಿಕ್ಕಮಗಳೂರಿನಲ್ಲಿ ಸಭೆ ನಡೆಸಿದ್ದು ಮೂರು ಜಿಲ್ಲೆಯಿಂದ ಏಕಕಾಲಕ್ಕೆ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು. ಆ ಬಳಿಕ ಅರಣ್ಯ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಮಲೆನಾಡು ಜನರು ಅನುಭವಿಸುತ್ತಿರುವ ತೊಂದರೆ ತಪ್ಪಿಸುವಂತೆ ಎಷ್ಟೇ ಮನವಿ ಮಾಡಿದರೂ ಸರ್ಕಾರಗಳು ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ಬೇಸರ ವ್ಯಕ್ತಪಡಿಸಿದರು.

    2015 ರಿಂದ ಇತ್ತೀಚೆಗೆ ನಿರಂತರವಾಗಿ ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದ ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರೋಗಬಾಧೆ, ಬೆಲೆ ಕುಸಿತ, ಕಾರ್ಮಿಕರ ಕೊರತೆ, ಕಾಡು ಪ್ರಾಣಿಗಳ ಹಾವಳಿ ದಿಕ್ಕೆಡಿಸಿದೆ. ಮೂರು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದ ಕಾಫಿಯು ನೆಲ ಕಚ್ಚ ಇದೆ. ಕಣದಲ್ಲಿ ಒಣ ಹಾಕಿದ್ದ ಪದಾರ್ಥ ನೀರಿನಲ್ಲಿ ಕೊಚ್ಚಿ ಹೋಗಿದೆ. ಕಾಫಿಯ ಕಟಾವು ಸಂಪೂರ್ಣಗೊಳ್ಳದೆ ಮುಂದಿನ ಫಸಲನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪರಿಸ್ಥಿತಿ ಇಷ್ಟೆಲ್ಲ ಬಿಗಡಾಯಿಸಿದರೂ ಜಿಲ್ಲಾಡಳಿತ ಪರಿಹಾರ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts