17 C
Bangalore
Monday, December 9, 2019

ನೂತನ ಸ್ಪೀಕರ್ ಕಾಗೇರಿ, ಇಂದು ಘೋಷಣೆ: ದಿಢೀರ್ ಬದಲಾದ ಲೆಕ್ಕಾಚಾರ, ಚುನಾವಣೆಯಿಂದ ಜೆಡಿಎಸ್-ಕಾಂಗ್ರೆಸ್ ದೂರ

Latest News

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

ಮೋಹನ್​ಲಾಲ್ ಪತ್ನಿ ಪಾತ್ರಕ್ಕೆ ಬಹುಭಾಷಾ ನಟಿ ತ್ರಿಷಾ ಆಯ್ಕೆ

‘96’ ಸಿನಿಮಾ ಸೂಪರ್ ಹಿಟ್ ಆಗಿದ್ದೇ ತಡ, ನಟಿ ತ್ರಿಷಾ ಕೃಷ್ಣನ್ ಲಕ್ ಬದಲಾಗಿಬಿಟ್ಟಿತು. ಹಲವು ಸ್ಟಾರ್​ಗಳ ಜತೆ ಸಿನಿಮಾ ಅವಕಾಶ ಗಿಟ್ಟಿಸಿಕೊಂಡರು....

ಬೆಂಗಳೂರು: ವಿಧಾನಸಭೆ ಸ್ಪೀಕರ್ ಸ್ಥಾನಕ್ಕೆ ಶಾಸಕ ವಿಶ್ವೇಶ್ವರ ಅನಂತ ಹೆಗಡೆ ಕಾಗೇರಿ ಅವಿರೋಧ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಬುಧವಾರ ನಡೆಯಲಿರುವ ವಿಧಾನಸಭೆ ಅಧಿವೇಶನದಲ್ಲಿ ಅಧಿಕೃತ ಘೋಷಣೆ ಆಗಲಿದ್ದು, ಅಂದೇ ಅವರು ನೂತನ ಸ್ಪೀಕರ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಸ್ಪೀಕರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆಗೆ ಮಂಗಳವಾರ ಮಧ್ಯಾಹ್ನ 12 ಗಂಟೆವರೆಗೂ ಅವಕಾಶವಿತ್ತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿಲ್ಲ. ಆಡಳಿತರೂಢ ಬಿಜೆಪಿ ವತಿಯಿಂದ ವಿಶ್ವೇಶ್ವರ ಹೆಗಡೆ ಕಾಗೇರಿ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವರ ಅವಿರೋಧ ಆಯ್ಕೆ ದಾರಿ ಸುಗಮವಾದಂತಾಗಿದೆ.

ನಾಮಪತ್ರಕ್ಕೆ ಬಿಜೆಪಿ ದಂಡು: ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಶಾಸಕರಾದ ಕೆ.ಎಸ್.ಈಶ್ವರಪ್ಪ, ಗೋವಿಂದ ಕಾರಜೋಳ, ಜೆ.ಸಿ.ಮಾಧುಸ್ವಾಮಿ, ಆರ್.ಅಶೋಕ್, ಸುರೇಶ್​ಕುಮಾರ್, ಸಿ.ಟಿ.ರವಿ, ಬಸವರಾಜ ಬೊಮ್ಮಾಯಿ, ವಿಶ್ವನಾಥ್ ಸೇರಿ ಬಿಜೆಪಿ ನಾಯಕರ ದಂಡು ಸ್ಪೀಕರ್ ಕಚೇರಿಗೆ ಆಗಮಿಸಿ, ಕಾಗೇರಿ ಅವರಿಗೆ ಸಾಥ್ ನೀಡಿತು.

ಶುಭ ಹಾರೈಕೆ: ಸ್ಪೀಕರ್ ಕಚೇರಿಯಲ್ಲಿಯೇ ಸಿಎಂ ಬಿಎಸ್​ವೈ ಅವರು ಕಾಗೇರಿ ಅವರಿಗೆ ಹೂಗುಚ್ಛ ನೀಡಿ ಶುಭ ಹಾರೈಸಿದರು. ಇದೇ ವೇಳೆ ಹಾಜರಿದ್ದ ಬಿಜೆಪಿ ಶಾಸಕರು ಮತ್ತು ಮುಖಂಡರು ಕಾಗೇರಿಗೆ ಶುಭಕೋರಿದರು.

ರಾಜಕೀಯ ಲೆಕ್ಕಾಚಾರ: ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಂದೆ ಉತ್ತರ ಕನ್ನಡ ಜಿಲ್ಲೆಯ ಅನರ್ಹಗೊಂಡಿರುವ ಶಿವರಾಮ ಹೆಬ್ಬಾರ್​ಗೆ ಸಚಿವ ಸ್ಥಾನ ಕೊಡಬೇಕಾದ ಸಂದರ್ಭ ಬರುವುದರಿಂದ ಅಲ್ಲಿ ವಿಶ್ವೇಶ್ವರ ಕಾಗೇರಿಗೆ ಸ್ಥಾನ ಕಲ್ಪಿಸುವುದು ಕಷ್ಟ. ಅದಕ್ಕಾಗಿ ಮತ್ತು 6 ಬಾರಿ ಶಾಸಕರಾಗಿ ಆಯ್ಕೆಯಾಗಿರುವುದನ್ನು ಪರಿಗಣಿಸಿ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಳಗ್ಗೆ ಬದಲಾದ ಆಯ್ಕೆ

ಸ್ಪೀಕರ್ ಸ್ಥಾನಕ್ಕೆ ಕೆ.ಜಿ.ಬೋಪಯ್ಯ ಅವರನ್ನು ಆಯ್ಕೆ ಮಾಡಲು ಸೋಮವಾರ ನಿರ್ಧರಿಸಲಾಗಿತ್ತು. ಆದರೆ, ಹೈಕಮಾಂಡ್ ಬೋಪಯ್ಯ ಹೆಸರಿಗೆ ಒಪ್ಪಿಗೆ ಸೂಚಿಸಲಿಲ್ಲ. ಆರ್​ಎಸ್​ಎಸ್ ಸಲಹೆ ಮೇರೆಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಆಯ್ಕೆ ಸೂಕ್ತ ಎನ್ನುವ ಅಭಿಪ್ರಾಯ ಬಂದಿದ್ದರಿಂದ ಮಂಗಳವಾರ ಬೆಳಗ್ಗೆ ಸಿಎಂ ಯಡಿಯೂರಪ್ಪ ಅವರೇ ಖುದ್ದು ಕಾಗೇರಿಗೆ ಪೋನ್ ಮಾಡಿ ವಿಷಯ ತಿಳಿಸಿ, ನಾಮಪತ್ರ ಸಲ್ಲಿಸಲು ಸಿದ್ಧರಾಗುವಂತೆ ಸೂಚಿಸಿದರು.

ಹಿರಿಯರ ಮಾತಿಗೆ ಸಮ್ಮತಿ: ಮುಖ್ಯಮಂತ್ರಿಗಳು ಮತ್ತು ಪಕ್ಷದ ಹಿರಿಯರು ಒಮ್ಮತದಿಂದ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡಿರುವುದರಿಂದ ನಾನು ಅದಕ್ಕೆ ಸಮ್ಮತಿ ವ್ಯಕ್ತಪಡಿಸಿ ನಾಮಪತ್ರ ಸಲ್ಲಿಸಿದ್ದೇನೆ ಎಂದು ಕಾಗೇರಿ ಅವರು ವಿಜಯವಾಣಿಗೆ ತಿಳಿಸಿದರು.

ಬದಲಾವಣೆಗೆ ಕಾರಣ

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೆ.ಜಿ.ಬೋಪಯ್ಯ ಅವರನ್ನೇ ಸ್ಪೀಕರ್ ಮಾಡಲು ಒಪ್ಪಿಸಿದ್ದರು. ಆದರೆ ಹಿಂದೆ ಸ್ಪೀಕರ್ ಆಗಿದ್ದ ಅವಧಿಯಲ್ಲಿ ಶಾಸಕರ ಅನರ್ಹತೆಗೆ ಸಂಬಂಧಿಸಿದಂತೆ ಇವರ ತೀರ್ಪನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿತ್ತು. ಕುಮಾರ ಸ್ವಾಮಿ ವಿಶ್ವಾಸಮತ ಯಾಚನೆ ಸಂದರ್ಭ ಕಾಂಗ್ರೆಸ್ ಮುಖಂಡರು ಪದೇಪದೆ ಟೀಕೆ ಮಾಡಿದ್ದರಿಂದ ಹೈಕಮಾಂಡ್ ಬೋಪಯ್ಯ ಆಯ್ಕೆಗೆ ಒಪ್ಪಲಿಲ್ಲ ಎಂದು ಪಕ್ಷದ ಮೂಲಗಳು ಖಚಿತಪಡಿಸಿವೆ.

ಆರು ಗೆಲುವು ಸತತ ಒಲವು

ಸುಸಂಸ್ಕೃತ ವ್ಯಕ್ತಿತ್ವ

ಮಲೆನಾಡಿನ ಶಿರಸಿ-ಸಿದ್ದಾಪುರ ವಿಶ್ವೇಶ್ವರ ಹೆಗಡೆ ಪ್ರತಿನಿಧಿಸುವ ತಾಲೂಕುಗಳು. ಇಲ್ಲಿಯ ಗ್ರಾಮೀಣ ಪ್ರದೇಶದಲ್ಲಿ ಮೂಲಸೌಲಭ್ಯಗಳ ಕೊರತೆ ಇದೆ. ಆದರೂ ಜನತೆ ಅವರನ್ನು ಸತತವಾಗಿ ಆರಿಸುತ್ತಿರುವುದು ಅವರ ಸುಸಂಸ್ಕೃತ ವ್ಯಕ್ತಿತ್ವದಿಂದಾಗಿ. ಬಿಡುವಿನ ವೇಳೆ ಕಂಬಳಿ ಹೊದ್ದು, ಅಡಕೆ ತೋಟಕ್ಕೆ ತೆರಳಿ ಕೆಲಸ ಮಾಡುವ ಹೆಗಡೆ, ವಿರೋಧಿಗಳನ್ನೂ ಗೌರವಯುತವಾಗಿ ಕಾಣುವ ವ್ಯಕ್ತಿ. ಯಾವುದೇ ಮುಜುಗರಕ್ಕೊಳಗಾಗುವ ಘಟನೆಗಳಲ್ಲಿ ಭಾಗಿಯಾಗದ ಅವರ ಸಜ್ಜನಿಕೆಯನ್ನು ಕ್ಷೇತ್ರದ ಜನ ಮೆಚ್ಚಿದ್ದಾರೆ.

ತಾಲೂಕು ಕೇಂದ್ರ ಶಿರಸಿಯಿಂದ 8 ಕಿ.ಮೀ. ದೂರದಲ್ಲಿರುವ ಬರೂರು ಸಮೀಪದ ಪುಟ್ಟ ಹಳ್ಳಿ ಕಾಗೇರಿಯಲ್ಲಿ 1961 ಜುಲೈ 10ರಂದು ವಿಶ್ವೇಶ್ವರ ಹೆಗಡೆ ಕಾಗೇರಿ ಜನನ. ತಂದೆ ಅನಂತ ಹೆಗಡೆ ಕೃಷಿಕ, ತಾಯಿ ಸರ್ವೆಶ್ವರಿ. ಬರೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಧಾರವಾಡದಲ್ಲಿ ಬಿಕಾಂ ಕಲಿಕೆ. ಕಾಲೇಜ್ ದಿನಗಳಲ್ಲಿ ಎಬಿವಿಪಿ ರಾಜ್ಯ ಕಾರ್ಯದರ್ಶಿಯಾಗಿ ಹೋರಾಟದ ಜೀವನ ಆರಂಭಿಸಿದ ಕಾಗೇರಿ, 1981-82ರಲ್ಲಿ ಗುವಾಹಟಿಯಲ್ಲಿ ಅಸ್ಸಾಂ ಉಳಿಸಿ ಆಂದೋಲನ, 1992-93ರಲ್ಲಿ ಜಮ್ಮುವಿನಲ್ಲಿ ಭಯೋತ್ಪಾದನೆ ವಿರುದ್ಧದ ಹೋರಾಟ ದಲ್ಲಿ ಭಾಗವಹಿಸಿದ್ದರು. ಬೇಡ್ತಿ ಮತ್ತು ಅಘನಾಶಿನಿ ನದಿಗೆ ಅಣೆಕಟ್ಟು ನಿರ್ಮಾಣ ಪ್ರಸ್ತಾಪವಾದಾಗ ಸ್ವರ್ಣವಲ್ಲೀ ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನೇತೃತ್ವದಲ್ಲಿ ಸಕ್ರಿಯವಾಗಿ ಹೋರಾಟ ನಡೆಸಿದರು. 1990ರ ವೇಳೆ ರಾಜಕೀಯ ಪ್ರವೇಶಿಸಿದ ವಿಶ್ವೇಶ್ವರ ಹೆಗಡೆ, 1990ರಿಂದ 94ರವರೆಗೆ ಉತ್ತರ ಕನ್ನಡ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಬಳಿಕ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಅಧ್ಯಕ್ಷರಾಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದರು. 1994ರಲ್ಲಿ ಅಂಕೋಲಾ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದ ಮೇಲೆ ಸೋತಿದ್ದೇ ಇಲ್ಲ. 1999, 2004ರಲ್ಲೂ ಇದೇ ಕ್ಷೇತ್ರದಿಂದ ಗೆಲುವು. 2008ರಲ್ಲಿ ಕ್ಷೇತ್ರ ವಿಂಗಡನೆಯಾದ ಬಳಿಕ ಶಿರಸಿ ಕ್ಷೇತ್ರಕ್ಕೆ ಶಿಫ್ಟ್ ಆಗಿ ಸತತ ವಿಜಯಮಾಲೆ ಧರಿಸಿದರು. ಜೆಡಿಎಸ್-ಬಿಜೆಪಿ ಸರ್ಕಾರದಲ್ಲಿ ಸಿಎಂ ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ ಕಾಗೇರಿ, 2008ರಿಂದ 5 ವರ್ಷಗಳ ಕಾಲ ಶಿಕ್ಷಣ ಸಚಿವರಾಗಿದ್ದರು.

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...