

ಗಂಗೊಳ್ಳಿ: ಡಾ.ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಕೋಟತಟ್ಟು ಗ್ರಾಪಂ ವತಿಯಿಂದ ಕೊಡ ಮಾಡುವ 2024ನೇ ಸಾಲಿನ ಡಾ.ಶಿವರಾಮ ಕಾರಂತ ಬಾಲ ಪುರಸ್ಕಾರಕ್ಕೆ ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆ 9ನೇ ತರಗತಿ ವಿದ್ಯಾರ್ಥಿ ಶಾಮ್ ಜಿ.ಎನ್.ಪೂಜಾರಿ ಆಯ್ಕೆಯಾಗಿದ್ದಾರೆ. ಅವರು ಗಂಗೊಳ್ಳಿ ಛಾಯಾಗ್ರಾಹಕ ಗಣೇಶ್ ಪೂಜಾರಿ ಮತ್ತು ಪ್ರಾಧ್ಯಾಪಕಿ ಮಾಲತಿ ಗಣೇಶ ದಂಪತಿ ಪುತ್ರ.