More

    ಸರ್ಕಾರದ ಉದ್ದೇಶ ಸಾಕಾರಗೊಳ್ಳಲಿ

    ಕಾರಟಗಿ: ಸಂವಿಧಾನ ಜಾಗೃತಿ ಜಾಥಾವನ್ನು ವಿವಿಧ ಇಲಾಖೆ ಅಧಿಕಾರಿಗಳು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಯಶಸ್ವಿಗೊಳಿಸಬೇಕು ಎಂದು ಗ್ರೇಡ್-2 ತಹಸೀಲ್ದಾರ್ ವಿಶ್ವೇಶ್ವರಯ್ಯ ಸಾಲಿಮಠ ಹೇಳಿದರು.

    ಪಟ್ಟಣದ ತಹಸಿಲ್ ಕಚೇರಿಯಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದರು.
    ಫೆ.12ರಿಂದ 14ರವರೆಗೆ ತಾಲೂಕಿನ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ಸಂಚರಿಸಲಿದೆ. ಹಳ್ಳಿಗಳಲ್ಲಿ ಗ್ರಾಪಂ ಪಿಡಿಒಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಜಾಥಾವನ್ನು ಅದ್ದೂರಿಯಾಗಿ ಸ್ವಾಗತಿಸಬೇಕು.

    ಈ ಜಾಥಾದ ಮೂಲಕ ಸರ್ಕಾರ ಜನತೆಯಲ್ಲಿ ಸಂವಿಧಾನದ ಆಚರಣೆ ಹಾಗೂ ಅದರ ಮಹತ್ವ ಕುರಿತು ಅರಿವು ಮೂಡಿಸುವ ಸದುದ್ದೇಶ ಹೊಂದಿದ್ದು, ಇದನ್ನು ಸಾಕಾರಗೊಳಿಸಬೇಕು. ಅಲ್ಲದೇ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ, ಸಂವಿಧಾನ ಶೀಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿಕಲ್ಪನೆ, ಶರಣರ ವಚನಗಳು, ಸಂವಿಧಾನದಲ್ಲಿ ವಚನಗಳ ಪ್ರಸ್ತುತತೆ, ಜಿಲ್ಲೆಯ ಐತಿಹಾಸಿಕ ವ್ಯಕ್ತಿಗಳು, ಸಾಹಿತ್ಯ ದಿಗ್ಗಜರು ಸೇರಿದಂತೆ ಪ್ರಮುಖ ವ್ಯಕ್ತಿಗಳ ಹಾಗೂ ಸ್ಥಳೀಯ ಕಲೆ ಮತ್ತು ಸಂಸ್ಕೃತಿಯನ್ನು ಒಳಗೊಂಡಿರುತ್ತದೆ.

    ಮೆರವಣಿಗೆಯನ್ನು ಸಾಧ್ಯವಾದಷ್ಟು ಗ್ರಾಮಗಳ ಮೂಲಕ ಹಾದು ಹೋಗುವಂತೆ ನೋಡಿಕೊಳ್ಳುವ ಜತೆಗೆ ತಂಗುವಂತೆ ನೋಡಿಕೊಳ್ಳಬೇಕು. ಸಂವಿಧಾನ ಮತ್ತಿತರ ವಿಷಯಗಳ ಕುರಿತು ಮಕ್ಕಳಲ್ಲಿ ಸ್ಪರ್ಧೆ, ಚರ್ಚೆ, ಸಂವಾದಗಳನ್ನು ಏರ್ಪಡಿಸಬೇಕು ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts