More

    ಬೆಳೆ ನಷ್ಟ ಸರ್ವೇ ಚುರುಕಾಗಲಿ: ಕಾರಟಗಿಯಲ್ಲಿ ರೈತ ಸಂಘ ಪ್ರತಿಭಟನೆ

    ಕಾರಟಗಿ: ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರೈತ ಸಂಘ ಹಾಗೂ ಕೃಷಿ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಪಟ್ಟಣದ ತಹಸಿಲ್ ಕಚೇರಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ನಿರಂತರ ಮಳೆಯಿಂದ ವಿವಿಧ ಬೆಳೆಗಳು ಹಾನಿಗೊಳಗಾಗಿವೆ. ಈವರೆಗೆ ಕಂದಾಯ ಇಲಾಖೆ ಅಧಿಕಾರಿಗಳು ಸಮರ್ಪಕ ಸರ್ವೇ ಕಾರ್ಯಕ್ಕೆ ಮುಂದಾಗುತ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ವರದಿ ಸಲ್ಲಿಕೆ ತಡವಾಗಿ ಸೂಕ್ತ ಪರಿಹಾರ ದೊರೆಯುತ್ತಿಲ್ಲ. ಭತ್ತ ಸೇರಿದಂತೆ ಅನೇಕ ಬೆಳೆಗಳು ಕಟಾವಿಗೆ ಮುನ್ನವೇ ಜಿಲ್ಲಾಡಳಿತ ಖರೀದಿ ಕೇಂದ್ರ ತೆರೆಯಬೇಕು. ಜತೆಗೆ ರೈತಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು. ರಾಜ್ಯ ಸರ್ಕಾರದ ಆದೇಶದಂತೆ ಅಕ್ರಮ-ಸಕ್ರಮ ಯೋಜನೆಯಡಿ ಆನ್‌ಲೈನ್ ಅರ್ಜಿ ಕರೆಯಲಾಗಿದೆ. ಈಗಾಗಲೇ ರಾಜ್ಯಾದ್ಯಂತ ಸಾಕಷ್ಟು ರೈತರು ಅರ್ಜಿ ಸಲ್ಲಿಸಿದ್ದಾರೆ. ಕೂಡಲೇ ರೈತರಿಗೆ ಸರ್ಕಾರ ಸಾಗುವಳಿ ಚೀಟಿ ನೀಡುವ ಮೂಲಕ ಉಳುಮೆಗೆ ಅನುಕೂಲ ಕಲ್ಪಿಸಬೇಕು. ಬಡರೈತರ ಆರ್ಥಿಕ ಏಳಿಗೆಗೆ ಪ್ರೋತ್ಸಾಹಿಸಬೇಕು ಎಂದು ಒತ್ತಾಯಿಸಿದರು. ತಹಸೀಲ್ದಾರ್ ಎಂ.ಬಸವರಾಜಗೆ ಮನವಿ ಸಲ್ಲಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts