More

    ಹಳ್ಳಿಯಿಂದ-ದಿಲ್ಲಿಯವರೆಗೂ ಕೇಸರಿ ಧ್ವಜ ಹಾರಲಿ; ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿಕೆ

    ಕಾರಟಗಿ: ಹಳ್ಳಿಯಿಂದ-ದಿಲ್ಲಿಯವರೆಗೂ ಕೇಸರಿ ಧ್ವಜ ಹಾರಬೇಕಾಗಿದ್ದು, ಹೀಗಾಗಿ ಕಾರ್ಯಕರ್ತರನ್ನು ಗಟ್ಟಿಗೊಳಿಸುವ ಕೆಲಸ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

    ಪಟ್ಟಣದ ಪದ್ಮಾವತಿ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಗ್ರಾಮ ಸ್ವರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ಕೆಳ ಹಂತದ ಕಾರ್ಯಕರ್ತರನ್ನು ನಾಯಕರನ್ನಾಗಿ ಮಾಡುವ ಏಕೈಕ ಪಕ್ಷ ಬಿಜೆಪಿಯಾಗಿದೆ. ಈ ನಿಟ್ಟಿನಲ್ಲಿ ಮುಖಂಡರು ಕಾರ್ಯಕರ್ತರಾಗಿ ಗ್ರಾಪಂ ಚುನಾವಣೆಯಲ್ಲಿ ನಿಮ್ಮ ಗೆಲುವಿಗೆ ಶ್ರಮಿಸುತ್ತೇವೆ. ಮಹಾತ್ಮ ಗಾಂಧೀಜಿ ಕಂಡ ಗ್ರಾಮ ಸ್ವರಾಜ್ಯದ ಕನಸಿಗೆ ಪ್ರಧಾನಿ ನರೇಂದ್ರ ಮೋದಿ ಜೀವ ತುಂಬುವ ಕೆಲಸ ಮಾಡುತ್ತಿದ್ದಾರೆ ಎಂದರು.

    ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಬೇಕು. ಪ್ರಧಾನಿ ನರೇಂದ್ರ ಮೋದಿ ಆಶಯದಂತೆ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಮಾಡಬೇಕಿದೆ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದಲ್ಲಿ ಮೊದಲು ಕಾಂಗ್ರೆಸ್ ಮುಕ್ತ ಗ್ರಾಪಂಗಳನ್ನಾಗಿ ಮಾಡುವ ಕೆಲಸ ಮಾಡೋಣ ಎಂದರು.

    ಸಂಸದ ಸಂಗಣ್ಣ ಕರಡಿ, ಶಾಸಕರಾದ ಬಸವರಾಜ ದಢೇಸುಗೂರು, ಪರಣ್ಣ ಮುನವಳ್ಳಿ ಮಾತನಾಡಿದರು. ಸಚಿವ ಆನಂದ್ ಸಿಂಗ್, ಬಿಜೆಪಿ ಜಿಲ್ಲಾಧ್ಯಕ್ಷ ದೊಡ್ಡನಗೌಡ, ಮಾಜಿ ಶಾಸಕ ಜಿ.ವೀರಪ್ಪ, ಗಂಗಾವತಿ ಎಪಿಎಂಸಿ ಅಧ್ಯಕ್ಷ ಚಂದ್ರುಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts