More

    ಪ್ರವಾಹದ ವಿರುದ್ಧ ಈಜಿದ ಮಹಾತ್ಮ; ಶಾಸಕ ಬಸವರಾಜ ದಢೇಸುಗೂರು ಅಭಿಮತ

    ಕಾರಟಗಿ: ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಜ್ಞಾನ ಮತ್ತು ಪ್ರತಿಭೆಯಿಂದ ವಿದೇಶದಲ್ಲಿ ಉನ್ನತ ಹುದ್ದೆ ಪಡೆದು ಅಲ್ಲಿಯೇ ನೆಲೆಸಬಹುದಿತ್ತು. ಆದರೆ, ಅವರು ಭಾರತದಲ್ಲಿಯೇ ಉಳಿದು ಪ್ರವಾಹದ ವಿರುದ್ಧ ಈಜಿದ ಮಹಾತ್ಮ ಎಂದು ಶಾಸಕ ಬಸವರಾಜ ದಢೇಸುಗೂರು ತಿಳಿಸಿದರು.

    ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಂಡಲ ಘಟಕದಿಂದ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರರ ಮಹಾಪರಿನಿರ್ವಾಣ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸೋಮವಾರ ಮಾತನಾಡಿದರು. ಬುದ್ಧನ ತತ್ವಗಳಿಂದ ಪ್ರಭಾವಿತರಾಗಿದ್ದ ಅಂಬೇಡ್ಕರ್, ಅಧಿಕಾರದ ಆಸೆ ಇಷ್ಟಪಡಲೂ ಇಲ್ಲ ಮತ್ತು ಅಂತಹ ಪ್ರಯತ್ನಕ್ಕೆ ಕೈ ಹಾಕಲೂ ಇಲ್ಲ. ತಮ್ಮ ವಿದ್ಯೆ-ತಿಳಿವಳಿಕೆಯನ್ನು ವಾಣಿಜ್ಯೋದ್ಯಮಕ್ಕೆ ಬಳಸಿಕೊಂಡಿದ್ದರೆ ಬಹುದೊಡ್ಡ ವಾಣಿಜ್ಯೋದ್ಯಮಿಯಾಗಿ ರೂಪುಗೊಳ್ಳಲು ಸಾಧ್ಯವಿತ್ತು. ಜ್ಞಾನ-ಶೀಲ-ಸ್ವಾಭಿಮಾನ ಮತ್ತು ಪ್ರಾಮಾಣಿಕತೆಗಳನ್ನೇ ಉಸಿರಾಡುವಂತೆ ಕಾಣಿಸುತ್ತಿದ್ದ ಅವರು ತಮ್ಮ ಬದುಕಿನ ಕೊನೆಯವರೆಗೂ ಆರ್ಥಿಕ ಮುಗ್ಗಟ್ಟು ಎದುರಿಸುತ್ತಿದ್ದರು. ಆ ಮುಗ್ಗಟ್ಟು ಅವರ ಸಾವಿನ ಸಂದರ್ಭದಲ್ಲೂ ಎದುರಾಯಿತು. ಅವರ ಬದುಕು, ಹೋರಾಟದ ಛಲ ಎಲ್ಲರಿಗೂ ಮಾದರಿ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts