More

    ಭೂಮಿ ಕಬಳಿಸಲು ದಲಿತ ಕುಟುಂಬಕ್ಕೆ ಕಿರುಕುಳ: ಕಾರಟಗಿಯಲ್ಲಿ ದಸಂಸ ನೇತೃತ್ವದಲ್ಲಿ ಪ್ರತಿಭಟನೆ

    ಕಾರಟಗಿ: ಗುಂಡೂರು ಗ್ರಾಮದಲ್ಲಿ ದಲಿತ ಕುಟುಂಬಕ್ಕೆ ಸೇರಿದ ಭೂಮಿ ಕಬಳಿಸಲು ಕೆಲವರು ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿ ದಸಂಸ ನೇತೃತ್ವದಲ್ಲಿ ಪಟ್ಟಣದ ತಹಸಿಲ್ ಕಚೇರಿ ಮುಂದೆ ಬುಧವಾರ ಪ್ರತಿಭಟನೆ ನಡೆಸಲಾಯಿತು.

    ಗ್ರಾಮದಲ್ಲಿ ಶರಣಪ್ಪ ಛಲವಾದಿ ಎಂಬುವವರ 30 ಗುಂಟೆ ಜಮೀನು ಕಬಳಿಸಲು ಕೆಲವರು ಮುಂದಾಗಿದ್ದಾರೆ. ಕಳೆದ ಒಂದು ವರ್ಷದಿಂದ ದೌರ್ಜನ್ಯ ಎಸಗಲಾಗುತ್ತಿದೆ. ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಹಾಗೂ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿ ವರ್ಷ ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಕುಟುಂಬ ಆತಂಕದಲ್ಲಿ ದಿನದೂಡುತ್ತಿದೆ. ಅಧಿಕಾರಿಗಳ ಬೇಜವಾಬ್ದಾರಿತನದಿಂದ ಪ್ರಭಾವಿಗಳ ಪುಂಡಾಟಿಕೆ ಹೆಚ್ಚಾಗಿದೆ. ಕೂಡಲೇ 30 ಗುಂಟೆ ಜಮೀನು ದಲಿತ ಕುಟುಂಬದ ಬಳಕೆಗೆ ಅವಕಾಶ ಕೊಡಬೇಕು. ಅವರ ಮೇಲೆ ದೌರ್ಜನ್ಯ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

    ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಬಸವರಾಜ ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ವಾಗ್ವಾದ ನಡೆಯಿತು. ಭೂಮಿಗೆ ಸಂಬಂಧಿಸಿದ ಎಲ್ಲ ದಾಖಲೆಗಳು ದಲಿತ ಕುಟುಂಬದ ಹೆಸರಿಲ್ಲದ್ದರೂ ಅವರ ಬಳಕೆಗೆ ಬಿಡದವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲವೆಂದು ಆಕ್ರೋಶ ಹೊರಹಾಕಿದರು. ಈ ಕುರಿತು ಪರಿಶೀಲಿಸಿ ನ್ಯಾಯದೊರಕಿಸಿಕೊಡಲು ಪ್ರಯತ್ನಿಸುವುದಾಗಿ ತಹಸೀಲ್ದಾರ್ ಬಸವರಾಜ ಭರವಸೆ ನೀಡಿದ ಬಳಿಕ ಮನವಿ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts