More

    ಹಲ್ಲೆಗೈದವರ ಮೇಲೆ ಕ್ರಮ ಕೈಗೊಳ್ಳಿ

    ಕಾರಟಗಿ: ಕನಕಗಿರಿಯಲ್ಲಿ ದಲಿತ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ತಹಸಿಲ್ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಯಿತು.

    ಜ.31ರಂದು ಕನಕಗಿರಿ ಖಾಸಗಿ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದಲಿತ ವಿದ್ಯಾರ್ಥಿ ರಾಘವೇಂದ್ರ ಎಂಬಾತನ ಮೇಲೆ ಕ್ಷುಲ್ಲಕ ಕಾರಣಕ್ಕೆ ಕೆಲವರು ಗುಂಪುಕಟ್ಟಿಕೊಂಡು ಹಲ್ಲೆ ನಡೆಸಿದ್ದಾರೆ. ಇದನ್ನು ತಡೆಯಲು ಹೋದ ವಿದ್ಯಾರ್ಥಿ ದೊಡ್ಡಪ್ಪ ನಾಗಪ್ಪನ ಮೇಲೂ ಹಲ್ಲೆ ನಡೆಸಲಾಗಿದೆ. ಸ್ಥಳದಲ್ಲಿದ್ದ ನಾಗಪ್ಪನ ಸಹೋದರಿಯ ಮೇಲೆ ಗುಂಪು ಕೊಲೆ ಬೆದರಿಕೆ ಹಾಕುವ ಜತೆಗೆ ಜಾತಿ ನಿಂದನೆ ಮಾಡಿದೆ. ಫೆ.2ರಂದು ಪೊಲೀಸ್ ಠಾಣೆಯಲ್ಲಿ ಕೊಲೆ, ಜಾತಿ ನಿಂದನೆ ಇತರ ಕಾಯ್ದೆಗಳಡಿ ಪ್ರಕರಣ ದಾಖಲಾದರೂ ಪೊಲೀಸರು ತಪ್ಪಿತಸ್ಥರನ್ನು ಬಂಧಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ದೊರಕಿಸಿ, ರಕ್ಷಣೆ ನೀಡಬೇಕು. ಇಲ್ಲವಾದಲ್ಲಿ ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಬೃಹತ್ ಪ್ರತಿಭಟನೆ ನಡೆಸುವುದಾಗಿ ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು. ಗ್ರೇಡ್-2 ತಹಸೀಲ್ದಾರ್ ವಿಶ್ವೇಶ್ವರಯ್ಯ ಸಾಲಿಮಠಗೆ ಮನವಿ ಸಲ್ಲಿಸಿದರು. ಪದಾಧಿಕಾರಿಗಳಾದ ವೆಂಕೋಬ ಮೈಲಾಪುರ, ಹುಲುಗೇಶ ಬುಕ್ಕನಹಟ್ಟಿ, ಗಾಳೆಪ್ಪ, ದುರುಗೇಶ ಕೆಂಗೇರಿ, ನೀಲಪ್ಪ ಡಣಾಪುರ, ಪರಶುರಾಮ ಹುಳ್ಕಿಹಾಳ, ಮಾರುತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts