More

    ಬಿಜೆಪಿ ಅಧಿಕಾರಾವಧಿಯೊಳಗೆ ಪಾರ್ಕ್ ನಿರ್ಮಾಣ

    ಸಚಿವ ಬಿ.ಸಿ.ಪಾಟೀಲ್ ಭರವಸೆ | ಪ್ರಗತಿ ಕಾಮಗಾರೊ ವೀಕ್ಷಣೆ

    ಕಾರಟಗಿ/ಕನಕಗಿರಿ: ರಾಜ್ಯ ಬಿಜೆಪಿ ಸರ್ಕಾರದ ಅಧಿಕಾರದ ಅವಧಿಯೊಳಗೆ ರೈಸ್ ಟೆಕ್ನಾಲಜಿ ಪಾರ್ಕ್ ನಿರ್ಮಾಣವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್ ಹೇಳಿದರು.

    ತಾಲೂಕಿನ ಸಮೀಪದ ನವಲಿ-ಸೋಮನಾಳ ಗ್ರಾಮದ ಬಳಿ ನಿರ್ಮಾಣವಾಗುತ್ತಿರುವ ರೈಸ್ ಟೆಕ್ನಾಲಜಿ ಪಾರ್ಕ್ ಕಾಮಗಾರಿ ಪ್ರಗತಿ ವೀಕ್ಷಿಸಿ, ಮಂಗಳವಾರ ಮಾತನಾಡಿದರು. ಈಗಾಗಲೇ ಟೆಕ್ನಾಲಜಿ ಪಾಕ್‌ರ್ ಕಾರ್ಯ ತೀವ್ರಗತಿಯಲ್ಲಿ ಸಾಗುತ್ತಿದೆ. ರೈತರಿಗೆ ನೆರವಾಗಲು ಹಾಗೂ ನವಲಿ ಗ್ರಾಮದ ಬಳಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ಸಿದ್ಧಪಡಿಸಲು ಸರ್ಕಾರ ಅನುಮೋದನೆ ನೀಡಿದೆ. ಮುಂದಿನ ಕೆಲ ದಿನಗಳಲ್ಲಿ ಸಮಾನಾಂತರ ಜಲಾಶಯ ನಿರ್ಮಾಣ ಕೆಲಸ ಸಹ ಆರಂಭವಾಗಲಿದೆ. ಸ್ಥಳೀಯರ ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ಯೋಜನೆಗಳನ್ನು ರೂಪಿಸಿದೆ. 120 ಕೋಟಿ ರೂ. ವೆಚ್ಚದಲ್ಲಿ 315 ಎಕರೆ ಪ್ರದೇಶದಲ್ಲಿ ಪಾರ್ಕ್ ನಿರ್ಮಾಣವಾಗುತ್ತಿದೆ. ಪೂರ್ಣಗೊಂಡ ಬಳಿಕ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ದೊರೆಯುತ್ತವೆ. ಕೊಪ್ಪಳ, ರಾಯಚೂರು, ಬಳ್ಳಾರಿ ಜಿಲ್ಲೆಯಗಳ ರೈತರ ಭತ್ತಕ್ಕೆ ಅಂತಾರಾಷ್ಟ್ರೀಯ ಮಾರುಕಟ್ಟೆ ದೊರೆಯಲಿದೆ. ರೈತರ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ದೊರೆತರೆ ಜನರ ಜೀವನ ಮಟ್ಟವೂ ಸುಧಾರಿಸುತ್ತದೆ ಎಂದರು.

    ಸಂಸದ ಸಂಗಣ್ಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಢೇಸುಗೂರು, ಕಾರಟಗಿ ವಿಶೇಷ ಎಪಿಎಂಸಿ ಅಧ್ಯಕ್ಷ ಶರಣಪ್ಪ ಭಾವಿ, ಕಾರ್ಯದರ್ಶಿ ಕುಮಾರಸ್ವಾಮಿ, ಮಾಜಿ ಶಾಸಕ ವೀರಪ್ಪ ಕೇಸರಹಟ್ಟಿ, ಮುಖಂಡರಾದ ಚಂದ್ರಶೇಖರ ಮುಸಾಲಿ, ಅಮರೇಶ ಕುಳಗಿ, ನಾಗರಾಜ ಅರಳಿ ಸೇರಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts