ಕಾರಟಗಿ: ನಾಡು-ನುಡಿ, ನೆಲ-ಜಲದ ರಕ್ಷಣೆ ವಿಚಾರದಲ್ಲಿ ಕನ್ನಡಿಗರು ಒಗ್ಗಟ್ಟಾಗಿರಬೇಕು ಎಂದು ತಹಸೀಲ್ದಾರ್ ಎಂ.ಕುಮಾರಸ್ವಾಮಿ ಹೇಳಿದರು.
ಪಟ್ಟಣದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎ.ಜಿ.ಕಾರಟಗಿ ಅವರನ್ನು ಸೋಮವಾರ ಸನ್ಮಾನಿಸಿ ಮಾತನಾಡಿದರು. ಬೇರೆ ಭಾಷೆಗಳನ್ನು ಗೌರವಿಸಿ ಆದರೆ, ಮಾತೃ ಭಾಷೆಯನ್ನು ಹೆಚ್ಚಾಗಿ ಪ್ರೀತಿಸಬೇಕು. ಸರ್ಕಾರ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಿದೆ.
ಈ ಮೂಲಕ ಅವರ ಜವಾಬ್ದಾರಿ ಹೆಚ್ಚಿಸಿದೆ. ಅದರಲ್ಲೂ ತಾಲೂಕಿನಲ್ಲಿ ಎ.ಜಿ.ಕಾರಟಗಿ ಅವರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿ ದೊರೆತಿರುವುದು ಖುಷಿಯ ವಿಚಾರ ಎಂದರು. ಶಿರಸ್ತೇದಾರ್ ವಿಶ್ವೇಶ್ವರಯ್ಯ ಸಾಲಿಮಠ, ಕಂದಾಯ ನಿರೀಕ್ಷಕಿ ಸಂಗಮ್ಮ ಹಿರೇಮಠ, ಸಿಬ್ಬಂದಿ ಇದ್ದರು.