More

    ಅಸ್ಪಶ್ಯತೆ ಆಚರಣೆ ಸಮಾಜಕ್ಕೆ ಕಳಂಕ- ಉಪ ತಹಸೀಲ್ದಾರ್ ಬಾಲಚಂದ್ರ ಅನಿಸಿಕೆ

    ಕಾರಟಗಿ: ಜಗತ್ತಿಗೆ ಮಾದರಿಯಾದ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಸ್ಪಶ್ಯತೆ ಆಚರಣೆ ನಡೆಯುತ್ತಿರುವುದು ಸರಿಯಲ್ಲ. ಇದು ಸಮಾಜಕ್ಕೆ ಕಳಂಕವೆಂದು ಉಪತಹಸೀಲ್ದಾರ್ ಬಾಲಚಂದ್ರ ಹೇಳಿದರು.

    ತಾಲೂಕಿನ ಸೋಮನಾಳ ಗ್ರಾಮದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಅಸ್ಪಶ್ಯತೆ ಆಚರಣೆ ಕುರಿತ ಜಾಗೃತಿ ಕಾರ್ಯಕ್ರಮವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಶಿಕ್ಷಿತರ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ, ಅಸ್ಪಶ್ಯತೆ ಆಚರಣೆ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ನೋವಿನ ಸಂಗತಿಯಾಗಿದೆ. ಈ ಆಚರಣೆಯನ್ನು ಬೇರು ಸಮೇತ ಕಿತ್ತೊಗೆಯಲು ಪ್ರತಿಯೊಬ್ಬರೂ ಶ್ರಮಿಸಬೇಕು. ಅಸ್ಪಶ್ಯತೆ ಆಚರಿಸಿದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

    ತಾಪಂ ಯೋಜನಾಧಿಕಾರಿ ರಾಘವೇಂದ್ರ, ಗ್ರಾಪಂ ಅಧ್ಯಕ್ಷೆ ಶಂಕ್ರಮ್ಮ ಬಸಲಿಂಗಪ್ಪ, ಉಪಾಧ್ಯಕ್ಷೆ ನೀಲಮ್ಮ ಕುಂಟೋಜಿ, ಪಿಡಿಒ ಮಲ್ಲಿಕಾರ್ಜುನ ಕಡಿವಾಲ್, ಪ್ರಮುಖರಾದ ರಮೇಶ್, ಶೇಖರಪ್ಪ, ಯಮನಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts