More

    ಕನ್ನಡ ನಾಮಫಲಕ ಕಡ್ಡಾಯಕ್ಕೆ ಆಗ್ರಹ; ಕರವೇ ಸದಸ್ಯರು ಅರೆಸ್ಟ್

    ಬೆಂಗಳೂರು: ವಾಣಿಜ್ಯ ಮಳಿಗೆಗೆಳ ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಈಗ ಮತ್ತೊಂದು ಹಂತ ತಲುಪಿದ್ದು, ತಮ್ಮ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ.

    ಪ್ರತಿಭಟನೆ ವೇಳೆ ಕರವೇ ಕಾರ್ಯಕರ್ತರು ಯಲಹಂಕ ಬಳಿ ಇರುವ ಮಾಲ್​ ಒಂದರ ಮುಂಭಾಗ ಇರುವ ಮೇಲ್ಸೇತುವೆ ಮೇಲೆ ನಿಂತು ಚಪ್ಪಲಿ ಎಸೆದಿದ್ದಾರೆ. ಕೆಲವೆಡೆ ಪ್ರತಿಭಟನಾಕಾರರು ಕನ್ನಡ ಇಲ್ಲದ ನಾಮಫಲಕಗಳಿಗೆ ಮಸಿ ಬಳಿದಿದ್ದಾರೆ. ಅಲ್ಲದೇ ನಾಮಫಲಕಗಳನ್ನು ಒಡೆದು ಹಾಕಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದ್ದು, ಪೊಲೀಸರು ಪ್ರತಿಭಟನಾ ನಿರತರನ್ನು ವಶಕ್ಕೆ ಪಡೆದಿದ್ದಾರೆ.

    ಇದನ್ನೂ ಓದಿ: ಮಾತ್ರೆಯಿಂದ ಬಟ್ಟೆ ಕಲೆ ಮಾಯ; ನಿನ್​ ಟ್ಯಾಲೆಂಟ್​ ಮೆಚ್ಚಲೇಬೇಕಮ್ಮ ಎಂದ ನೆಟ್ಟಿಗರು

    ಈ ಕುರಿತು ಮಾತನಾಡಿರುವ ಕರವೇ ಅಧ್ಯಕ್ಷ ನಾರಾಯಣ ಗೌಡ ನನ್ನನ್ನ ಅರೆಸ್ಟ್ ಮಾಡಿದರೆ ಪರಿಣಾಮ ನೆಟ್ಟಗಿರುವುದಿಲ್ಲ. ನಮಗೆ ಪ್ರತಿಭಟನೆ ಮಾಡಲು ಅವಕಾಶ ಕೊಡಿ.. ಇಲ್ಲದಿದ್ದರೆ ದಾರಿಯುದ್ದಕ್ಕೂ ಗಲಭೆ ಆಗುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಲಕ್ಷ್ಮೀ ಪ್ರಸಾದ್, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ. ಒಬ್ಬರು ಎಸಿಪಿ, 6 ಮಂದಿ ಇನ್ಸ್​ಪೆಕ್ಟರ್, 12 ಸಬ್ ಇನ್ಸ್​ಪೆಕ್ಟರ ಸೇರಿದಂತೆ 500ಕ್ಕೂ ಹೆಚ್ಚು ಪೋಲಿಸರನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ನ್ಯಾಯಾಲಯದ ಆದೇಶ ಇರುವುದರಿಂದ ರ‍್ಯಾಲಿಗೆ ಅವಕಾಶ ನೀಡುವುದಿಲ್ಲ. ಒಂದು ವೇಳೆ ರ‍್ಯಾಲಿ ಮಾಡಲು ಮುಂದಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಕರವೇ ನಾರಾಯಣಗೌಡ ಬಣದ ಕಾರ್ಯಕರ್ತರು ನಾಮಫಲಕ ಮಹಾ ಅಭಿಯಾನ ಆರಂಭಿಸಿದ್ದು, ರಾಜ್ಯದ ವಿವಿಧ ಭಾಗಗಳ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ಅಂಗಡಿ ಹಾಗೂ ಮಾಲ್‍ಗಳ ನಾಮಫಲಕಗಳಲ್ಲಿ 60% ಆದ್ಯತೆ ಕೊಡಬೇಕು. ಇಂಗ್ಲಿಷ್ ಹಾಗೂ ಹಿಂದಿ ನಾಮಫಲಕಗಳನ್ನು ತೆರವು ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts