More

    11ರಿಂದ ನಗರದಲ್ಲಿ ಅಹೋರಾತ್ರಿ ಧರಣಿ: ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಸಿ.ನವೀನ್ ಮಾಹಿತಿ

    ಮಂಡ್ಯ: ನಿವೃತ್ತ ನೌಕರರಿಗೆ ನ್ಯಾಯಬದ್ಧವಾಗಿ ಬರಬೇಕಿರುವ ಮತ್ತು ದ್ವಿಪಕ್ಷೀಯ, ತ್ರಿಪಕ್ಷೀಯ ವೇತನ ಸಮಿತಿ ಮಾಡಿರುವ ವೇತನ ಪರಿಷ್ಕರಣೆ ಜಾರಿಗೊಳಿಸುವಂತೆ ಒತ್ತಾಯಿಸಿ ಜ.11ರಿಂದ ನಗರದ ಮೈಷುಗರ್ ಕಾರ್ಖಾನೆ ಎದುರು ಅಹೋರಾತ್ರಿ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ(ಕಾರ್ಮಿಕ, ರೈತ, ಶೋಷಿತ ಹಾಗೂ ಕನ್ನಡಪರ ಸಂಘಟನೆಗಳ ಒಕ್ಕೂಟ)ದ ಜಿಲ್ಲಾಧ್ಯಕ್ಷ ಎಂ.ಸಿ.ನವೀನ್ ತಿಳಿಸಿದರು.
    ವೇತನಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟವಾದ ಒಂದು ತಿಂಗಳೊಳಗೆ ಜಾರಿಗೊಳಿಸಬೇಕೆಂದು ಉಚ್ಛ ನ್ಯಾಯಾಲಯ 2022 ಏಪ್ರಿಲ್‌ನಲ್ಲಿ ಆದೇಶ ನೀಡಿದೆ. ಮಾತ್ರವಲ್ಲದೆ ರಾಜ್ಯ ಸರ್ಕಾರದಿಂದ ಗೆಜೆಟ್ ನೋಟಿಫಿಕೇಷನ್ ಆಗಿದೆ. ಆದರೂ ಆಡಳಿತ ಮಂಡಳಿ ಕ್ರಮ ವಹಿಸುತ್ತಿಲ್ಲ. ಬದಲಿಗೆ ಸಬೂಬು ಹೇಳಿ ಕಾಲ ಮುಂದೂಡುತ್ತಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
    ವೇತನವನ್ನೂ ನೀಡದೇ ಉದ್ದೇಶಪೂರ್ವಕವಾಗಿ ಆದೇಶವನ್ನು ಉಲ್ಲಂಘಿಸಲಾಗಿದೆ. ಈ ಸಂಬಂಧ ಕಳೆದ ಡಿಸೆಂಬರ್‌ನಲ್ಲಿ ಮೈಷುಗರ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಗಿತ್ತು. ಆದರೂ ಉತ್ತರ ಬಾರದ ಹಿನ್ನೆಲೆಯಲ್ಲಿ 11ರಂದು ಬೆಳಗ್ಗೆ 11 ಗಂಟೆಗೆ ಧರಣಿ ಆರಂಭಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಶಿವಲಿಂಗಯ್ಯ, ವೆಂಕಟೇಶ್, ಅಂಕಯ್ಯ, ಶಿವಕೆಂಪಯ್ಯ, ನಾರಾಯಣ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts