More

    ಕಾಳಸಂತೆಯಲ್ಲಿ ಗೊಬ್ಬರ ಮಾರಾಟಕ್ಕೆ ವಿರೋಧ: ಕೃಷಿ ಇಲಾಖೆಗೆ ಕರವೇ ಮುತ್ತಿಗೆ

    ಮದ್ದೂರು: ಕೊಪ್ಪ ಭಾಗದಲ್ಲಿ ಕೆಲವು ರಸಗೊಬ್ಬರ ಅಂಗಡಿಗಳಲ್ಲಿ ಕಾಳಸಂತೆಯಲ್ಲಿ ಹೆಚ್ಚಿನ ದರಕ್ಕೆ ಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ಕಾರ್ಯಕರ್ತರು ಕೊಪ್ಪದ ಕೃಷಿ ಇಲಾಖೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು.
    ಕಾಳಸಂತೆಯಲ್ಲಿ ರಸಗೊಬ್ಬರ ಮಾರಾಟ ಮಾಡುತ್ತಿದ್ದರೂ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿ ಘೋಷಣೆಗಳನ್ನು ಕೂಗಿದರು.
    ಕರ್ನಾಟಕ ರಕ್ಷಣಾ ವೇದಿಕೆಯ ಶಿವರಾಮೇಗೌಡ ಬಣದ ತಾಲೂಕು ಘಟಕದ ಅಧ್ಯಕ್ಷ ಹರಳಕೆರೆ ಚಂದ್ರು ಮಾತನಾಡಿ, ಕೊಪ್ಪ ಮತ್ತು ಸುತ್ತಮುತ್ತಲ ಗ್ರಾಮಗಳ ಅಂಗಡಿಗಳಲ್ಲಿ ಯೂರಿಯಾ ಸೇರಿದಂತೆ ಇತರ ರಸಗೊಬ್ಬರಗಳನ್ನು ಅಕ್ರಮ ದಾಸ್ತಾನು ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡುವ ಮೂಲಕ ಕೃತಕ ಅಭಾವ ಸೃಷ್ಟಿಸಲಾಗುತ್ತಿದೆ. ಇದರಿಂದ ಕೃಷಿಕರಿಗೆ ತೊಂದರೆಯಾಗಿದೆ. ಕೃಷಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ನಿಗದಿತ ಮತ್ತು ಅಧಿಕೃತ ಅಂಗಡಿಗಳಲ್ಲೇ ಗೊಬ್ಬರ ದೊರಕುವಂತೆ ಮಾಡಬೇಕು ಎಂದು ಒತ್ತಾಯಿಸಿದರು. ರೈತ ಮುಖಂಡರಾದ ಶಿವಲಿಂಗಯ್ಯ, ಕೃಷ್ಣೇಗೌಡ, ಬೆಟ್ಟೇಗೌಡ, ಗಿರೀಶ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts