More

    ಕೆ.ಎಂ.ದೊಡ್ಡಿಯಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ

    ಕೆ.ಎಂ.ದೊಡ್ಡಿ: ಇಂಗ್ಲಿಷ್ ನಾಮಫಲಕಗಳ ವಿರುದ್ಧ ಸಮರ ಸಾರಿದ್ದ ಕನ್ನಡಪರ ಹೋರಾಟಗಾರ ಟಿ.ಎ.ನಾರಾಯಣಗೌಡ ಹಾಗೂ ಕರವೇ ಕಾರ್ಯಕರ್ತರ ಬಂಧನ ಖಂಡಿಸಿ ಮತ್ತು ತಕ್ಷಣ ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.


    ಮದ್ದೂರು-ಮಳವಳ್ಳಿ ಮುಖ್ಯರಸ್ತೆಯ ವಿಶ್ವೇಶ್ವರಯ್ಯ ವೃತ್ತದಲ್ಲಿ ಜಮಾಯಿಸಿದ ಕರವೆ ಕಾರ್ಯಕರ್ತರು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


    ಕರವೇ ಸಿ.ಎ.ಕೆರೆ ಹೋಬಳಿ ಅಧ್ಯಕ್ಷ ಮಣಿಗೆರೆ ರಾಮಚಂದ್ರೇಗೌಡ ಮಾತನಾಡಿ, ಕನ್ನಡ ನಾಡು-ನುಡಿಗಾಗಿ ಹಗಲಿರುಳು ನಾರಾಯಣಗೌಡ ಶ್ರಮಿಸಿ ಕನ್ನಡ ಭಾಷೆ, ನೆಲ, ಜಲಕ್ಕಾಗಿ ಸಾಕಷ್ಟು ಹೋರಾಟ ಮಾಡುತ್ತಿರುವ ನಾರಾಯಣಗೌಡರ ಬಂಧನ ನಾಡಿಗೆ ಮಾಡಿದ ಅಪಚಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಹೀಗಿದ್ದರೂ ಬೇರೆ ಭಾಷೆ ನಾಮಫಲಕಗಳೇ ಹೆಚ್ಚು ರಾರಾಜಿಸುತ್ತಿವೆ. ಸರ್ಕಾರ ಹಾಗೂ ಸಂಬಂಧಿಸಿದ ಪ್ರಾಧಿಕಾರಗಳು ಮಾಡಬೇಕಾದ ಕೆಲಸವನ್ನು ಕರವೇ ಮಾಡುತ್ತಿದ್ದು, ಸರ್ಕಾರ ಹೋರಾಟಗಾರರನ್ನು ಬಂಧಿಸುವ ಮೂಲಕ ಕನ್ನಡ ವಿರೋಧಿ ನೀತಿ ಅನುಸರಿಸಿದೆ ಎಂದು ಕಿಡಿಕಾರಿದರು.


    ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ಮತ್ತು ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡಬೇಕು. ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಡಿವೈಎಸ್‌ಪಿ ಲಕ್ಷ್ಮೀ ಪ್ರಸಾದ್ ಅವರನ್ನು ಅಮಾನತು ಮಾಡಬೇಕು. ಎಲ್ಲೆಡೆ ಕನ್ನಡ ನಾಮಫಲಕ ಕಡ್ಡಾಯಗೊಳಿಸಬೇಕೆಂದು ಒತ್ತಾಯಿಸಿದರು.


    ಕರವೇ ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಪ್ರಭಾವತಿ ಬೋರೇಗೌಡ, ಕಾರ್ಯಕರ್ತರಾದ ಲೀಲಾರಾಮೇಗೌಡ, ಕರಡಕೆರೆ ಯೋಗೇಶ್, ಮಾದರಹಳ್ಳಿ ಚೌಡೇಗೌಡ, ಬಿದರಹೊಸಹಳ್ಳಿ ಬೋರೇಗೌಡ, ಜಿಡಿಹಳ್ಳಿ ನವೀನ್, ಕಳ್ಳಿಮೆಳ್ಳೆದೊಡ್ಡಿ ಸಿದ್ದರಾಜು, ನಾಗೇಶ್, ಮುಟ್ಟನಹಳ್ಳಿ ಶ್ರೀನಿವಾಸ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts