

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ
ಜೀವನದಲ್ಲಿ ವೈವಿಧ್ಯಮಯ ಕಲಿಕೆ ರೂಡಿಸಿಕೊಂಡು ನಮ್ಮದೇ ದಾರಿಯಲ್ಲಿ ಮುನ್ನುಗ್ಗುವ ಛಾತಿ ಬೆಳೆಸಿಕೊಳ್ಳಬೇಕು. ಇದರಿಂದ ಮಾತ್ರ ಯಶಸ್ಸು ಸಿಗಲು ಸಾಧ್ಯ ಎಂದು ಭಾರತೀಯ ಭೂಸೇನೆಯ ನಿವೃತ್ತ ಸೇನಾನಿ ಹವಾಲ್ದಾರ್ ಮಹಾಬಲ ಎನ್. ಹೇಳಿದರು.
ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಆಶ್ರಯದಲ್ಲಿ ನಡೆದ 25ನೇ ಕಾರ್ಗಿಲ್ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜೀವನದಲ್ಲಿ ಹೆತ್ತವರನ್ನು, ವಿದ್ಯೆ ಕಲಿಸಿದ ಗುರುಗಳನ್ನು ಮತ್ತು ಆಪತ್ಕಾಲದಲ್ಲಿ ನೆರವಾದ ಸ್ನೇಹಿತರನ್ನು ಮರೆಯಲೇಬಾರದು. ಶಿಸ್ತು, ಸಮಯ ಪ್ರಜ್ಞೆ, ಕನಸು ನಮ್ಮ ಮೊದಲ ಆದ್ಯತೆಯಾಗಬೇಕು ಎಂದರು.
ಪ್ರಾಂಶುಪಾಲೆ ಕವಿತಾ ಎಂ.ಸಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಸೇನಾನಿ ಹವಾಲ್ದಾರ್ ಮಹಾಬಲ ಎನ್. ಅವರನ್ನು ಸನ್ಮಾನಿಸಲಾಯಿತು. ಜಿಎಸ್ವಿಎಸ್ ಅಸೋಸಿಯೇಷನ್ ಅಧ್ಯಕ್ಷ ಡಾ ಕಾಶೀನಾಥ ಪಿ.ಪೈ, ಎನ್ನೆಸ್ಸೆಸ್ ವಿದ್ಯಾರ್ಥಿ ನಾಯಕ ಪ್ರೀತಮ್ ನಾಯಕ್ ಉಪಸ್ಥಿತರಿದ್ದರು.
ವಿದ್ಯಾರ್ಥಿನಿಯರಾದ ಆಶಿತಾ, ಸಿಂಧು, ದಿಯಾ, ಅಂಜಲಿ ಪ್ರಾರ್ಥಿಸಿದರು. ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಸುಗುಣಾ ಆರ್.ಕೆ ಸ್ವಾಗತಿಸಿದರು. ಉಪನ್ಯಾಸಕಿ ಪ್ರಫುಲ್ಲಾ ವಂದಿಸಿದರು. ಉಪನ್ಯಾಸಕಿ ಅಕ್ಷಯಾ ಆರ್. ಅತಿಥಿಗಳನ್ನು ಪರಿಚಯಿಸಿದರು. ಧನ್ಯ ಯು. ಕಾರ್ಯಕ್ರಮ ನಿರೂಪಿಸಿದರು.