ಸುಬ್ರಹ್ಮಣ್ಯ: ದುಸ್ತರ ಪ್ರದೇಶವಾದ ಕಾರ್ಗಿಲ್‌ನಲ್ಲಿ ನಡೆದ ಯುದ್ಧದಲ್ಲಿ ನಮ್ಮ ಯೋಧರ ಅಪ್ರತಿಮ ಪರಾಕ್ರಮ ವಿಜಯ ದುಂದುಭಿ ಬಾರಿಸುವಂತೆ ಮಾಡಿತು. ಈ ವಿಜಯ, ಸರ್ವ ಭಾರತೀಯರಿಗೆ ಹೆಮ್ಮೆಯ ಪ್ರತೀಕ ಎಂದು ಎಸ್‌ಎಸ್‌ಪಿಯು ಕಾಲೇಜಿನ ಪ್ರಾಚಾರ್ಯ ಸೋಮಶೇಖರ ನಾಯಕ್ ಹೇಳಿದರು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತದ, ಎಸ್‌ಎಸ್ ಪಿಯು ಕಾಲೇಜಿನ ವಿದ್ಯಾಸಂಸ್ಥೆಯ ಯುವ ಆಶ್ರಯದಲ್ಲಿ ನಡೆದ ಕಾರ್ಗಿಲ್ ವಿಜಯ ದಿವಸ್‌ನಲ್ಲಿ ಮಾತನಾಡಿದರು.
ವಿದ್ಯಾರ್ಥಿ ಸಂಘದ ಸಂಚಾಲಕ ಜಯಪ್ರಕಾಶ್ ಆರ್, ಯುವ ರೆಡ್‌ಕ್ರಾಸ್ ಜೂನಿಯರ್ ಕೌನ್ಸಿಲರ್ ಶ್ರುತಿ ಅಶ್ವಥ್ ಯಾಲದಾಳು, ಎನ್‌ಎಸ್‌ಎಸ್ ಯೋಜನಾಧಿಕಾರಿ ಪೂರ್ಣಿಮಾ, ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಉಪನ್ಯಾಸಕರಾದ ಶ್ರೀಧರ ಪುತ್ರನ್, ರತ್ನಾಕರ ಸುಬ್ರಹ್ಮಣ್ಯ, ಪ್ರವೀಣ್ ಎ, ಭವ್ಯಶ್ರೀ ಹರೀಶ್ ಕುಲ್ಕುಂದ, ಸೌಮ್ಯಕೀರ್ತಿ, ಮಾನಸ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಭಾರತ ಮಾತೆಗೆ ಪುಷ್ಪಾರ್ಚನೆ ನಡೆಯಿತು. ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕದ ವಿದ್ಯಾರ್ಥಿಗಳು ಕಾರ್ಯಕ್ರಮ ಆಯೋಜಿಸಿದ್ದರು.