More

  ಟಿಪ್ಪರ್ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಮೃತ್ಯು

  ಕಾರ್ಕಳ: ಪಳ್ಳಿ ಗರಡಿ ತಿರುವು ರಸ್ತೆಯಲ್ಲಿ ಸೋಮವಾರ ಮುಂಜಾನೆ ಟಿಪ್ಪರ್ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಯುವಕರು ಗಂಭೀರ ಗಾಯಗೊಂಡಿದ್ದಾರೆ.

  ಕುಂಟಾಡಿ ಕಡೆಯಿಂದ ಪಳ್ಳಿ ಕಡೆಗೆ ಸಾಗುತ್ತಿದ ಸ್ಕೂಟಿ ಮತ್ತು ಪಳ್ಳಿ ಪೇಟೆಯಿಂದ ಕಾರ್ಕಳ ಕಡೆಯತ್ತ ಸಾಗುತ್ತಿದ್ದ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಪಳ್ಳಿಯ ಕ್ರಷರ್‌ನಲ್ಲಿ ಕೂಲಿ ಕಾರ್ಮಿಕರಾಗಿ ದುಡಿಯುತ್ತಿದ್ದ ಬಿಹಾರ ಮೂಲದ ಕಮಲ್ ಎಂಬಾತನ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಹಸವಾರರಾದ ಪ್ರಸನ್ನ ಮತ್ತು ಬಚ್ಚನ್ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts