ನೇಣುಬಿಗಿದು ಯುವಕ ಆತ್ಮಹತ್ಯೆ

Hanging
Published on

ಕಾರ್ಕಳ: ಬೋಳ ಗ್ರಾಮದ ಯುವಕನೊಬ್ಬ ಬುಧವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜೀವನ್(35) ಆತ್ಮಹತ್ಯೆಗೆ ಶರಣಾದಾತ. ಬುಧವಾರ ಬೆಳಗ್ಗೆ ಕೆಲಸಕ್ಕೆಂದು ಹೋದಾತ ಬಳಿಕ ಮನೆಗೆ ಬಂದು ಮನೆಯ ಕೋಣೆಯ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೂಡಲೇ ಮನೆಯವರು ನಿಟ್ಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಪ್ರಯೋಜನವಾಗಿಲ್ಲ. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net